ಚಿನ್ನಸ್ವಾಮಿಗೆ ಸಿಗದ "ವಿಜಯ" ವಿರಾಟ್ ಫ್ಯಾನ್ಸ್‌ಗೆ ಶಾಕ್
ಬೆಂಗಳೂರು: ಬೆಂಗಳೂರು ಹಾಗೂ ಕರ್ನಾಟಕದ ಪ್ರಮುಖ ಕ್ರೀಡಾಂಗಣಗಳಲ್ಲಿ ಒಂದಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಪಂದ್ಯ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಈ ಮೂಲಕ ಚಿನ್ನಸ್ವಾಮಿಗೆ ಇಲ್ಲ ವಿಜಯ ಎನ್ನುವಂತೆ ಆಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಪ್ರಮುಖ ಕ್ರೀಡಾಂಗಣಗಳಲ್ಲಿ ಒಂದಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಆಗಿದ್ದ ದುರ್ಘಟನೆಯಿಂದ ಇದೀಗ ಮುಂಜಾಗ್ರತಾ ಕ್ರಮವಾಗಿ ಮತ್ತೊಂದು ಪ್ರಮುಖ ಪಂದ್ಯವನ್ನು ರದ್ದು ಮಾಡಲಾಗಿದೆ. ಡಿಸೆಂಬರ್ 24 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ನಡೆಯಬೇಕಿತ್ತು. ಈ ನಡುವೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಸರ್ಕಾರಕ್ಕೆ ಅನುಮತಿಗಾಗಿ ಅರ್ಜಿ ಸಲ್ಲಿಸಿತು. ಆದರೆ ಇದರಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವನ್ನು ನಡೆಸಬಹುದೇ ಎಂದು ನಿರ್ಣಯಿಸಲು ರಚಿಸಲಾದ ಸಮಿತಿಯು ಬುಧವಾರ ಅನುಮತಿಯನ್ನು ನಿರಾಕರಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತ ಎಂ ಮಹೇಶ್ವರ ರಾವ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸುವ ಮೊದಲು ಸೋಮವಾರ ಕ್ರೀಡಾಂಗಣದಲ್ಲಿನ ಸುರಕ್ಷತೆ ಮತ್ತು ಇತರ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿತ್ತು. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯು ನೀಡಿದ ವರದಿಯ ಆಧಾರದ ಮೇಲೆ ಪ್ರಮುಖ ಮತ್ತು ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ, ಲೋಕೋಪಯೋಗಿ ಇಲಾಖೆ, ಜಿಬಿಎ ಮತ್ತು ಪೊಲೀಸರ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಕ್ರೀಡಾಂಗಣಕ್ಕೆ ಭೇಟಿ ನೀಡಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಹೇಳಿದ್ದೇನು ?
ಇನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ರದ್ದಾಗಿರುವ ಬಗ್ಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ವಿವಿಧ ಇಲಾಖೆಗಳ ವರದಿಗಳ ಪ್ರಕಾರ, ನಾಳೆಯ ಪಂದ್ಯಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಸಮಿತಿಯು ವಿವರವಾದ ವರದಿಯನ್ನು ನೀಡಿದೆ. ಪ್ರಸ್ತುತ, ಅನುಮತಿಯನ್ನು ತಿರಸ್ಕರಿಸಲಾಗಿದೆ ಎಂದು ಸಮಿತಿಯ ಸದಸ್ಯರೂ ಆಗಿರುವ ಸಿಂಗ್ ಅವರು ಹೇಳಿದ್ದಾರೆ.
ಡಿಸೆಂಬರ್ 24 ರಂದು ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೆ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ನಡೆಸಲು ನಿರ್ಧರಿಸಲಾಗಿತ್ತು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಸರ್ಕಾರಕ್ಕೆ ಅನುಮತಿಗಾಗಿ ಅರ್ಜಿ ಸಲ್ಲಿಸಿತು. ಡಿಸೆಂಬರ್ 22ರ ಸೋಮವಾರ ಕೆಎಸ್‌ಸಿಎ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಮುಖ ಸಭೆಯನ್ನು ಸಹ ನಡೆಸಲಾಗಿತ್ತು. ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಸ್ಥಳದಲ್ಲಿ ಪಂದ್ಯವನ್ನು ನಡೆಸಬಹುದೇ ಎಂದು ಪರಿಶೀಲಿಸಲು ಸಮಿತಿ ರಚಿಸಿರುವುದಾಗಿ ಈಚೆಗೆ ತಿಳಿಸಿದ್ದರು. ಸಮಿತಿಯು ಪರಿಶೀಲನೆ ನಡೆಸಲು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.
ಚಿನ್ನಸ್ವಾಮಿಯಲ್ಲಿ ಕೊನೆಯ ಪಂದ್ಯ ನಡೆದದ್ದು ಯಾವಾಗ ?
ಇನ್ನು ಬೆಂಗಳೂರಿನ ಪ್ರಮುಖ ಕ್ರೀಡಾಂಗಣವಾಗಿರುವ ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ನಂತರ ಪ್ರಮುಖ ಪಂದ್ಯಗಳು ನಡೆದಿಲ್ಲ.
ಕೊನೆಯ ಕ್ರಿಕೆಟ್ ಪಂದ್ಯವನ್ನು 2025ನೇ ವರ್ಷದ ಮೇ ತಿಂಗಳಲ್ಲಿ ನಡೆಸಲಾಗಿತ್ತು. ಇದಾದ ನಂತರ ಈ ಕ್ರೀಡಾಂಗಣದಲ್ಲಿ ಯಾವುದೇ ಪ್ರಮುಖ ಪಂದ್ಯಗಳು ನಡೆದಿಲ್ಲ. ಇದರ ನಡುವೆ ಮುಂದಿನ ಋತುವಿನ ಐಪಿಎಲ್ ಪಂದ್ಯಗಳು ಸಹ ಇಲ್ಲಿ ನಡೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಬೆಂಗಳೂರಿನಿಂದ ಪಂದ್ಯಗಳು ಸ್ಥಳಾಂತರವಾಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಆರ್‌ಸಿಬಿ ಪಂದ್ಯ ದುರಂತರದ ನಂತರ ಏನೆಲ್ಲಾ ಆಗಿದೆ ?
ಈ ವರ್ಷ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರ್ಘಟನೆ ಸಂಭವಿಸಿತ್ತು. ಜೂನ್ 4 ರಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿ ಗೆದ್ದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಕಾಲ್ತುಳಿತವಾದ ಮೇಲೆ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಗಳನ್ನು ಕ್ರೀಡಾಂಗಣದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.
ಅಲ್ಲದೇ ಇದಕ್ಕೂ ಮೊದಲು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪಂದ್ಯಗಳನ್ನು ನಡೆಸಲು ಅನುಸರಿಸಬೇಕಾದ 17 ಸುರಕ್ಷತಾ ಮಾರ್ಗಸೂಚಿಗಳನ್ನು ವಿವರಿಸುವ ಪತ್ರವನ್ನು ಹೊರಡಿಸಿದ್ದರು. ಈ ತಿಂಗಳ ಪ್ರಾರಂಭದಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಆಯೋಗವು ಮಾಡಿದ ಸುರಕ್ಷತಾ ಶಿಫಾರಸುಗಳನ್ನು ಅನುಸರಿಸಿದರೆ ಕರ್ನಾಟಕ ಸಚಿವ ಸಂಪುಟವು ಕೆಎಸ್‌ಸಿಎಗೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮೋದನೆಯನ್ನು ನೀಡಿತ್ತು. ಇದೀಗ ಅದೂ ಸಹ ರದ್ಧಾಗಿದೆ.
-
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್‌ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Nandini: ಆರ್‌ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್‌ಸಿಬಿ ಅಧಿಕೃತ ಮಾಹಿತಿ -
IPL 2026: ಆರ್‌ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications