ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಅಭಿಮಾನಿಗಳ ಕಾಲ್ತುಳಿತ ದುರಂತದ ವಿಚಾರವಾಗಿ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ಶುರುವಾಗಿದೆ. ಈ ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧವೂ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ವಿರುದ್ಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಜ್ಯ ಸರ್ಕಾರವು ಅಮಾಯಕರ ಸಾವಿಗೆ ಕಾರಣವಾಗಿದ್ದು, ಸಾರ್ವಜನಿಕ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಸಿಎಂ, ಡಿಸಿಎಂ ಮತ್ತು ಗೃಹ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಬಿಜೆಪಿ ನಾಯಕರಾದ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್.ದತ್ತಾತ್ರಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಅವರ ನಿಯೋಗ ತೆರಳಿ ದೂರು ನೀಡಿದೆ.
11 ಜನರ ಸಾವಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ ನೇರ ಕಾರಣ. ಅವರೇ ಒತ್ತಡ ಹಾಕಿ ಕಾರ್ಯಕ್ರಮ ನಡೆಸಿದ್ದಾರೆ. ಅವರಿಗೆ ನಿಜವಾಗಿಯೂ ಸಂವಿಧಾನದ ಮೇಲೆ ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಸಿಎಂ, ಡಿಸಿಎಂ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಬೇಕು ಹಾಗೂ ಗೃಹ ಸಚಿವ ಪರಮೇಶ್ವರ್ ಕೂಡ ಇದರಲ್ಲಿ ಪ್ರಮುಖ ಹೊಣೆಗಾರರು ದೂರಿನಲ್ಲಿ ಆರೋಪ ಮಾಡಲಾಗಿದೆ.
ಗುಪ್ತಚರ ಇಲಾಖೆಯ ವರದಿ ಇದ್ದರೂ ನಿರ್ಲಕ್ಷ್ಯ ಮಾಡಲಾಗಿದೆ. ರಾಜಕೀಯವಾಗಿ ಹೆಸರು ಪಡೆಯಲು ಸರ್ಕಾರವೇ ಈ ಕೊಲೆಗಳಿಗೆ ಕಾರಣವಾಗಿದೆ. ಸಿಎಂ, ಡಿಸಿಎಂ ಅವರಿಗೆ ರಾಜಕೀಯ ಲಾಭದ ಸ್ಪಷ್ಟತೆ ಇತ್ತು. ಗೃಹ ಸಚಿವರು ಕೂಡ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು. ಇನ್ನು ಡಿ.ಕೆ.ಶಿವಕುಮಾರ್ ಅವರು ಸಂಪೂರ್ಣ ಹೊಣೆ ಹೊರಬೇಕು. ಜನರ ಸಾವಿಗೆ ನೈತಿಕ ಹೊಣೆ ಹೊರಬೇಕು. ಇನ್ನು ರಾಜೀನಾಮೆ ಕೊಟ್ಟಾಗ ಮಾತ್ರವೇ ಡಿಸಿಎಂ ಕಣ್ಣೀರಿಗೆ ನಿಜವಾದ ಅರ್ಥ ಬರುತ್ತದೆ. ಒಂದು ವೇಳೆ ಇವರ ಮೇಲೆ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ ಎಂದು ಖಂಡಿಸಿ ಹಾಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆಯೂ ನಡೆಯಿತು. ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಾಂಗ ತನಿಖೆಗೆ ಅರ್ಹವಾಗಿರುವ ಈ ಕೇಸ್ ಅನ್ನು ಸರ್ಕಾರವೇ ದಿಕ್ಕು ತಪ್ಪಿಸುತ್ತಿದೆ. ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಪೊಲೀಸರನ್ನು ಸಸ್ಪೆಂಡ್ ಮಾಡಿ ಕ್ರಿಕೆಟ್ ಸಂಸ್ಥೆಯ ಮೇಲೆ ಎಫ್‌ಐಆರ್ ದಾಖಲಿಸಿದೆ ಎಂದು ಆರೋಪ ಮಾಡಲಾಗಿದೆ.
-
ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದ ಅನುಷ್ಕಾ-ಅನನ್ಯಾ ಬಿರ್ಲಾ: ನೆಟ್ಟಿಗರ ಮನಗೆದ್ದ ಆ ಹ್ಯಾಂಡ್ಶೇಕ್ ವಿಡಿಯೋ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ಗಳಿಗೆ ಬೆವರಿಳಿಸಿದ ಆರ್‌ಸಿಬಿ ಫಿಲ್ ಸಾಲ್ಟ್ -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್‌ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
ವಾಂಖೆಡೆಯಲ್ಲಿ ಆರ್‌ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ











Click it and Unblock the Notifications