ಚಿತ್ರಕಲಾ ಪರಿಷತ್ತಿನಲ್ಲಿ ಇಂಡಿಯನ್ ಆರ್ಟಿಸನ್ ಬಜಾರ್ ಆರಂಭ
ಬೆಂಗಳೂರು ಜೂನ್ 03: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇಂಡಿಯನ್ ಆರ್ಟಿಸನ್ ಬಜಾರ್ ಅನ್ನು ಇಂದು ನಟಿಯರಾದ ಗ್ರೀಷ್ಮಾ ಗೌಡ ಮತ್ತು ನಂದಿನಿ ಶಂಕರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಗ್ರೀಷ್ಮಾ ಗೌಡ, "ನಾನು ಇಲ್ಲಿಗೆ ಮೊದಲ ಬಾರಿಗೆ ಬರುತ್ತಿದ್ದೇನೆ. ಎಲ್ಲಾ ಕಲಾತ್ಮಕ ವರ್ಷಗಳು ತುಂಬಾ ವರ್ಣಮಯವಾಗಿದೆ. ಉತ್ಪಾದಕರಿಂದ ನೇರವಾಗಿ ಮಾರುಕಟ್ಟೆ ತಲುಪುವುದರಿಂದ ಗುಣಮಟ್ಟದ ಬಗ್ಗೆ ಅನುಮಾನವೇ ಬೇಡ. ಜನರು ಹೆಚ್ಚಾಗಿ ಬಂದು ಇದನ್ನು ವೀಕ್ಷಿಸಿ ಖರೀದಿಸಿದರೆ ಕಲಾವಿದರಿಗೆ ತುಂಬಾ ಸಹಾಯವಾಗುತ್ತದೆ ಎಂದರು.
ನಂತರ ನಟಿ ನಂದಿನಿ ಶಂಕರ್ ಮಾತನಾಡಿ, ಇಲ್ಲಿನ ಪ್ರತಿಯೊಂದೂ ವಸ್ತುಗಳು ತುಂಬಾ ಚೆನ್ನಾಗಿದೆ. ಇದು ಎಲ್ಲಾ ಹೆಣ್ಣುಮಕ್ಕಳಿಗೂ ಇಷ್ಟವಾಗುವ ಜಾಗ. ಇಲ್ಲಿ ತುಂಬಾ ಕಡಿಮೆ ದರದಲ್ಲಿ ಹೆಚ್ಚು ಸಂಗ್ರಹಗಳಿವೆ. ನಾನು ಕೂಡ ಇಲ್ಲಿನ ಆಭರಣಗಳನ್ನು ಖರೀದಿಸಿದ್ದೇನೆ. ಜೂನ್ 13ರವರೆಗೆ ಈ ಪ್ರದರ್ಶನ ನಡೆಯಲಿದ್ದು, ಬೆಂಗಳೂರಿಗರು ಇದರ ಲಾಭ ಪಡೆಯಬೇಕುಎಂದು ಮನವಿ ಮಾಡಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ.
ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತಿದೆ.
ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿದೆ. ಈ ಮೇಳ ಇಂದಿನಿಂದ ಜೂನ್ 12 ರ ವರೆಗೆ ನಡೆಯಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications