ಸಾಂಕ್ರಾಮಿಕ ರೋಗ: ಜಲಮಂಡಳಿಗೆ ಪತ್ರ ಬರೆದು ಬಿಬಿಎಂಪಿ ಮನವಿ
ಬೆಂಗಳೂರು, ಏಪ್ರಿಲ್ 07: ಬೆಂಗಳೂರಿನಲ್ಲಿ ನೀರಿನ ಕೊರತೆ ಉಂಟಾಗಿರುವ ಬೆನ್ನಲ್ಲೆ ಕಲುಷಿತ ನೀರು ಸೇವೆ ಹಾಗೂ ಸೋಂಕಿತ ಆಹಾರ ಸೇವೆನೆಯಿಂದ ನಗರದಲ್ಲಿ ಕಾಲರಾ ರೋಗ ಉಲ್ಬಣಗೊಂಡಿದೆ. ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಲ್ಲಿ ಇಬ್ಬರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟಲು ಎಚ್ಚರಿಕೆ ವಹಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ ಪ್ರಸಾತ್ ಮನೋಹರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿರುವ ಪ್ರಮುಖ ಅಂಶಗಳು
* ಜಲಮಂಡಳಿ ವ್ಯಾಪ್ತಿಗೆ ಬರುವ ನೀರಿನ ಶುದ್ದೀಕರಣ ಘಟಕಗಳು ಮತ್ತು ಕೊನೆಯ ಹಂತದ ವಿತರಣೆ ನೀರಿನ ಮಾದರಿಗಳಲ್ಲಿ ಕ್ಲೋರಿನೇಷನ್ ಮಟ್ಟ ನಿಯಮಾನುಸಾರ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿ ಮ್ಯಾನ್‌ಹೋಲ್ ಮತ್ತು ಕೊಳಚೆ ನೀರಿನಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಯಾವುದಾದರೂ ನೀರಿನ ಕೊಳವೆಗಳು ಸೋರಿಕೆ ಇದ್ದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.
* ಮೇಲ್ಕಂಡ ಎಲ್ಲಾ ವಿಷಯಗಳಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಕಾರ್ಯಕ್ರಮ ಅಧಿಕಾರಿಗಳು(ಐ.ಹೆಚ್.ಐ.ಪಿ) ಬಿಬಿಎಂಪಿ ಇ-ಮೇಲ್ [email protected] ಗೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಈ ಪತ್ರದ ಮೂಲಕ ತಿಳಿಸಿದ್ದಾರೆ.

ಬಿಬಿಎಂಪಿ ಹೈ ಅಲರ್ಟ್
ಬೆಂಗಳೂರಿನಲ್ಲಿ ಕಳೆದ ಆರು ದಿನದಲ್ಲಿ ನಾಲ್ಕವರಿಗೆ ಕಾಲರ ದೃಢಪಟ್ಟಿದೆ. ಬಿಬಿಎಂಪಿ ಈಗಾಗಲೇ ಕಾಲರಾ ರೋಗ ಕಂಡು ಬಂದವರ ಜೊತೆಗಿದ್ದ ಶಂಕಿತರ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ. ಕಾಯಿಲೆ ಪತ್ತೆಯಾದವರ ಸುತ್ತಮುತ್ತಲಿನ ಮನೆಗಳಿಗೆ ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿವಾಸಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ವದ್ಯರ ಸಲಹೆಗಳು ಏನು?
* ಜನರು ಸಿಕ್ಕ ಸಿಕ್ಕ ಕಡೆಗಳಲ್ಲಿ ನೀರು ಕುಡಿಯುದೇ ಮನೆ ನೀರು ಬಳಸಬೇಕು
* ನೀರು ಕಾಯಿಸಿ ಆರಿಸಿದ ಬಳಿಕ ಕುಡಿಯಬೇಕು
* ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
* ಅತಿಸಾರ ಬೇಧಿ, ವಾಂತಿ, ಇನ್ನಿತರ ಹೊಟ್ಟೆ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಕಂಡು ಬಂದ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
* ತರಕಾರಿ, ಹಣ್ಣು ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ತೊಳೆದು ತಿನ್ನಬೇಕು. ಸಾಧ್ಯವಾದರೆ ಬಿಸಿ ನೀರಿನಲ್ಲಿ ತರಕಾರಿ ತೊಳೆದರೆ ಇನ್ನೂ ಉತ್ತಮ.
* ರಸ್ತೆ ಆಹಾರ ನೀರು ಸೇವೆ ಆದಷ್ಟು ನಿಲ್ಲಿಸಿಬಿಡಿ. ಮನೆ ಊಟವನ್ನು ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications