ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

5 ಬಾರಿ ಉಗ್ರರು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿದ್ದಾರೆ

|
Google Oneindia Kannada News

ಬೆಂಗಳೂರು, ಡಿ. 29 : ಹೊಸ ವರ್ಷದ ಸಂಭ್ರಮಾಚರಣೆಗೆ ತಯಾರಿ ನಡೆಸುತ್ತಿದ್ದ ಬೆಂಗಳೂರು ನಗರದ ಬಾಂಬ್ ಸ್ಫೋಟದ ಸುದ್ದಿ ಕೇಳಿ ಆತಂಕಗೊಂಡಿದೆ. ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ಭಾನುವಾರ ರಾತ್ರಿ ಬಾಂಬ್ ಸ್ಫೋಟಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟರೆ ಮೂವರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಬಾಂಬ್ ಸ್ಫೋಟವಿದಾಗಿದೆ.

ಐಎಸ್‌ಐಎಸ್ ಭಯೋತ್ಪಾದನಾ ಸಂಘಟನೆಯ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹದಿ ಮಸ್ರೂರ್ ಬಿಸ್ವಾಸ್‌ನ ಬಂಧನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಫೋಟ ನಡೆಸಲಾಗಿದೆ ಎಂದು ಶಂಕಿಸಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಬಳಸಿ ಚರ್ಚ್ ಸ್ಟ್ರೀಟ್‌ನ ಕೋಕೊನಟ್ ಗ್ರೋವ್ ರೆಸ್ಟೋರೆಂಟ್‌ ಪ್ರವೇಶದ್ವಾರದ ಬಳಿ ಭಾನುವಾರ ರಾತ್ರಿ ಈ ಬಾಂಬ್ ಸ್ಫೋಟ ನಡೆಸಲಾಗಿದೆ. [ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ಫೋಟ]

Bomb Blast

ಸ್ಫೋಟದ ಬಗ್ಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್‌.ರೆಡ್ಡಿ ಅವರು, ವಾರಾಂತ್ಯವಾ­ಗಿದ್ದ­ರಿಂದ ಚರ್ಚ್‌ಸ್ಟ್ರೀಟ್‌ನಲ್ಲಿ ಹೆಚ್ಚಿನ ಜನಸಂದಣಿ ಇರುತ್ತದೆ. ಆದ್ದರಿಂದ ಈ ಸ್ಥಳವನ್ನೇ ಆಯ್ಕೆ ಮಾಡಿಕೊಂಡು ಸ್ಫೋಟ ನಡೆಸಿರುವ ಶಂಕೆ ಇದೆ ಎಂದು ಹೇಳಿದ್ದಾರೆ. ಅಂದಹಾಗೆ ಇದು ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಬಾಂಬ್‌ ಸ್ಫೋಟವಿದಾಗಿದೆ. [ಬೆಂಗಳೂರು ಬಾಂಬ್ ಸ್ಫೋಟ, ಮಹಿಳೆ ಬಲಿ]

ಹಿಂದಿನ ಬಾಂಬ್ ಸ್ಫೋಟ ಪ್ರಕರಣಗಳು

* 2005ರ ಡಿಸೆಂಬರ್ 28ರಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮೇಲೆ ದಾಳಿ ನಡೆದಿತ್ತು.

* 2008ರ ಜುಲೈ 25ರಂದು ಬೆಂಗಳೂರಿನ ಎಂಟು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

* 2010ರ ಏ.17ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬಾಂಬ್ ಸ್ಫೋಟವಾಗಿತ್ತು. ಪೊಲೀಸರು ಸೇರಿ 17 ಜನರು ಘಟನೆಯಲ್ಲಿ ಗಾಯಗೊಂಡಿದ್ದರು.

* 2013ರ ಏಪ್ರಿಲ್ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಪೊಲೀಸರು ಸೇರಿ 16 ಮಂದಿಗೆ ಗಾಯಗೊಂಡಿದ್ದರು.

* 2014ರ ಡಿ.28ರಂದು ಚರ್ಚ್‌ ಸ್ಟ್ರೀಟ್‌ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟರೆ ಮೂವರು ಗಾಯಗೊಂಡಿದ್ದಾರೆ.

English summary
An improvised explosive device (IED) went off on Church Street in the central business district of the Bengaluru City on Sunday evening. Church Street blast is 5th bomb blast in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X