ಮೇ 31ರ ತನಕ ಚರ್ಚ್‌ಸ್ಟ್ರೀಟ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ
ಬೆಂಗಳೂರು, ಏಪ್ರಿಲ್ 2; ಬೆಂಗಳೂರು ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ವಾರಂತ್ಯದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಈ ಆದೇಶವನ್ನು ಮೇ 31ರ ತನಕ ವಿಸ್ತರಣೆ ಮಾಡಲಾಗಿದೆ.
ನಗರದ ಅತ್ಯಂತ ಜನನಿಬಿಡ ಹಾಗೂ ವಾಣಿಜ್ಯ ವಹಿವಾಟು ನಡೆಯುವ ಸ್ಥಳ ಚರ್ಚ್ ಸ್ಟ್ರೀಟ್. ವಾರಾಂತ್ಯದಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ನಗರ ಭೂ ಸಾರಿಗೆ ನಿರ್ದೇಶನಾಲಯ (ಡಿಯುಎಲ್‌ಟಿ) ಈ ಆದೇಶವನ್ನು ವಿಸ್ತರಣೆ ಮಾಡಿದೆ.
2020ರ ನವೆಂಬರ್ 7ರಂದು ಮೊದಲ ಬಾರಿಗೆ ಚರ್ಚ್ ಸ್ಟ್ರೀಟ್‌ನಲ್ಲಿ ವಾಹನ ಸಂಚಾರ ಬಂದ್ ಮಾಡಿ, ಪಾದಚಾರಿಗಳಿಗೆ ಮಾತ್ರ ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಯಿತು. ಈ ಆದೇಶ ಫೆಬ್ರವರಿ ತನಕ ಜಾರಿಯಲ್ಲಿತ್ತು.

ಈಗ ಇದನ್ನು ಮೇ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಯಿಂದ ಭಾನುವಾರ ಮಧ್ಯರಾತ್ರಿ 12 ಗಂಟೆ ತನಕ ಚರ್ಚ್ ಸ್ಟ್ರೀಟ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ.
ಈ ಸಂದರ್ಭದಲ್ಲಿ ಚರ್ಚ್ ಸ್ಟ್ರೀಟ್‌ನಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ವಿವಿಧ ಕಲಾವಿದರು ಕಾರ್ಯಕ್ರಮ ನೀಡುತ್ತಾರೆ. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಪರಿಸರ ಕಾಪಾಡುವ ಜೊತೆಗೆ ವಿವಿಧ ಕಾರ್ಯಕ್ರಮಕ್ಕೂ ಅವಕಾಶ ನೀಡಲಾಗುತ್ತದೆ.
ನಗರ ಭೂ ಸಾರಿಗೆ ನಿರ್ದೇಶನಾಲಯ (ಡಿಯುಎಲ್‌ಟಿ) ನಗರದ ಬೇರೆ-ಬೇರೆ ರಸ್ತೆಗಳಲ್ಲೂ ಇದೇ ಮಾದರಿಯ ನೀತಿ ಜಾರಿಗೆ ತರಲು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಸರ್ಕಾರ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ.












Click it and Unblock the Notifications