BSY POCSO Case: ಯಡಿಯೂರಪ್ಪಗೆ CID ನೋಟಿಸ್
ಬೆಂಗಳೂರು, ಜೂನ್ 12: ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಬಂಧಿಸಿದಂತೆ ಪೊಕ್ಸೋ ಪ್ರಕರಣದಡಿ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ಸಂಸ್ಥೆ (CID) ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನಲಾದ ಪೋಕ್ಸೋ ಕಾಯ್ದೆ ಅಡಿಯ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರದಲ್ಲಿ ಕಳೆದ ಮಾಚ್ 14ರಂದು ದೂರು ನೀಡಲಾಗಿತ್ತು. ಅದಾ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಅವರು ಹಾಜರಾಗಿದ್ದರು. ಅಂದು ವಿಚಾರಣೆ ವೇಳೆ, ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ ಎಂದು ಅಂದು ಪೊಲೀಸರಿಗೆ ತಿಳಿಸಿದ್ದರು ಎನ್ನಲಾಗಿದೆ.
ಪೊಲೀಸರ ಬಳಿಕ ಪೊಕ್ಸೋ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಗೆ ಮಾಚ್ 14ರಂದು ರಾತ್ರಿ ಹೆಣ್ಣುಮಗಳೊಬ್ಬರು ತೆರಳಿ ತನ್ನ ಅಪ್ತಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. ಈ ಮಹಿಳೆಯು ಈ ಹಿಂದೆಯು ಕೆಲವು ಪ್ರಮುಖರ ವಿರುದ್ಧ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಮೇ ತಿಂಗಳಲ್ಲಿ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಅಸುನೀಗಿದ್ದಾರೆ.

ಯಡಿಯೂರಪ್ಪ ಪ್ರಕರಣ ಬಗ್ಗೆ ಗೃಹ ಸಚಿವರ ಪ್ರತಿಕ್ರಿಯೆ
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೊಕ್ಸೋ ಪ್ರಕರಣ ಕುರಿತು, ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ ಅವರು, ತನಿಖೆ ನಡೆಯುತ್ತಿದೆ. ಸಿಐಡಿಯಿಂದ ತನಿಖೆಯು ಪ್ರಗತಿಯಲ್ಲಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದರು.
ಸರ್ಕಾರದ ಕಾರ್ಮಿಕ ಇಲಾಖೆಯಿಂದ ಬಾಲಕಾರ್ಮಿಕ ಜಾಗೃತಿ ಕಾರ್ಯಕ್ರಮಕ್ಕೆ ಡ್ರಗ್ ಕೇಸ್ ಆರೋಪಿ ನಟಿ ರಾಗೀಣಿ ದ್ವಿವೇದಿಯವರನ್ನು ಅತಿಥಿಯಾಗಿ ಆಹ್ವಾನಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಯಾರನ್ನು ಅತಿಥಿಯಾಗಿ ಕರೆಯಬೇಕೆಂದು ಆಯಾ ಇಲಾಖೆಗೆ ಬಿಟ್ಟದ್ದು ಎಂದು ಅವರು ತಿಳಿಸಿದರು.












Click it and Unblock the Notifications