ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸಕೋಟೆ ಲಾಕ್ ಅಪ್ ಡೆತ್; ಸಿಐಡಿ ತನಿಖೆ, 5 ಪೊಲೀಸರ ಅಮಾನತು

|
Google Oneindia Kannada News

ಬೆಂಗಳೂರು, ಏಪ್ರಿಲ್ 12: ಮದ್ಯ ಕಳ್ಳತನದ ಆರೋಪಿ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಪ್ರಕರಣ ಹೊಸಕೋಟೆಯಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಇದು ಲಾಕ್ ಅಪ್ ಡೆತ್ ಎಂದು ಆರೋಪಿಸಲಾಗಿದೆ. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ತಿರುಮಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ಮುನಿಪಿಳ್ಳಪ್ಪ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಡುವತ್ತಿ ಗ್ರಾಮದ ನಿವಾಸಿ ಮುನಿಪಿಳ್ಳಪ್ಪನನ್ನು ಎರಡುದ ದಿನ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೊಸಕೋಟೆ; ಎಂಟಿಬಿ ಮ್ಯಾಜಿಕ್, ಶಾಸಕ ಶರತ್ ಕಂಗಾಲು! ಹೊಸಕೋಟೆ; ಎಂಟಿಬಿ ಮ್ಯಾಜಿಕ್, ಶಾಸಕ ಶರತ್ ಕಂಗಾಲು!

ಶನಿವಾರ ನಡುವತ್ತಿ ಗ್ರಾಮದ ಪಾಳು ಬಾವಿಯಲ್ಲಿ ಮುನಿಪಿಳ್ಳಪ್ಪ ಶವ ಪತ್ತೆಯಾಗಿತ್ತು. ಹೊಸಕೋಟೆ ವೈನ್ ಶಾಪ್‌ನಲ್ಲಿ ಕದ್ದ ಮಾಲನ್ನು 52 ವರ್ಷದ ಆರೋಪಿ ಬಾವಿಯಲ್ಲಿ ಬಚ್ಚಿಟ್ಟಿದ್ದ. ಸ್ಥಳಕ್ಕೆ ಕರೆದುಕೊಂಡು ಹೋದಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಲಾಕ್‌ಡೌನ್ ನಡುವೆಯೂ ಮದ್ಯ ಮಾರಾಟ; ಪ್ರಕರಣ ದಾಖಲುಲಾಕ್‌ಡೌನ್ ನಡುವೆಯೂ ಮದ್ಯ ಮಾರಾಟ; ಪ್ರಕರಣ ದಾಖಲು

CID To Probe Lockup Death Case In Hoskote

ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ತಿರುಮಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಠಾಣೆ ಇನ್ಸ್‌ಪೆಕ್ಟರ್ ರಘು, ಸಬ್ ಇನ್ಸ್‌ಪೆಕ್ಟರ್ ರಾಕೇಶ್ ತಲೆಮರೆಸಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಮದ್ಯ ಸಿಗದೆ ವಾರ್ನಿಶ್ ಕುಡಿದು ಮೂವರು ಸಾವು ತಮಿಳುನಾಡಿನಲ್ಲಿ ಮದ್ಯ ಸಿಗದೆ ವಾರ್ನಿಶ್ ಕುಡಿದು ಮೂವರು ಸಾವು

ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಡಿಜಿ&ಐಜಿಪಿ ಪ್ರವೀಣ್ ಸೂದ್ ಭೇಟಿ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಆದ್ದರಿಂದ, ತನಿಖೆಯನ್ನು ಸಿಐಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ. ಸಿಐಡಿ ಎಸ್‌ಪಿ ದೇವರಾಜ್ ತನಿಖೆ ಆರಂಭಿಸಿದ್ದಾರೆ.

ಮೃತಪಟ್ಟಿರುವ ಮುನಿಪಿಳ್ಳಪ್ಪ ಎಸ್‌ಸಿ ಸಮುದಾಯಕ್ಕೆ ಸೇರಿದವನು. ಆದ್ದರಿಂದ, ಪ್ರಕರಣ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಯಾವುದೇ ಮದ್ಯದ ಅಂಗಡಿಗಳು ತೆರೆದಿಲ್ಲ. ವೈನ್ ಶಾಪ್‌ನಲ್ಲಿ ಮುನಿಪಿಳ್ಳಪ್ಪ ಕಳುವು ಮಾಡಿದ ಆರೋಪ ಎದುರಿಸುತ್ತಿದ್ದ.

English summary
5 police officers have been suspended in Hoskote for allegedly beating to death a 50-year-old labourer accused of stealing liquor and hiding his body in a dry well. Government ordered for CID probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X