ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
32 ವರ್ಷ ವಯಸ್ಸಿನ ಕರ್ತವ್ಯ ನಿರತ ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ದ ಟರ್ಮಿನಲ್ ನಂ.2 ರಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ.
ಬೆಂಗಳೂರು, ಜನವರಿ 16: 32 ವರ್ಷ ವಯಸ್ಸಿನ ಕರ್ತವ್ಯ ನಿರತ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ದ ಟರ್ಮಿನಲ್ ನಂ.2 ರಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಮಹಾರಾಷ್ಟ ಮೂಲದ ಸುರೇಶ್ ಗಾಯಕ್ವಾಡ್ ಎಂದು ಗುರುತಿಸಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಸರ್ವೀಸ್ ರೈಫಲ್ 5.56 INSAS ಬಳಸಿಕೊಂಡು ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಟರ್ಮಿನಲ್ 2 ನ ಗೇಟ್ 1 ರ ಬಳಿ ಈ ಘಟನೆ ನಡೆದಿದೆ. ಘಟನೆ ಬಳಿಕ ಕೆಲ ಕಾಲ ಗೊಂದಲಮಯ ಪರಿಸ್ಥಿತಿ ಉಂಟಾಗಿತ್ತು. ಅತ್ಮಹತೆಗೆ ಕಾರಣ ತಿಳಿದು ಬಂದಿಲ್ಲ. ಭದ್ರತಾ ಹಿತದೃಷ್ಟಿಯಿಂದ ವಿಮಾನ ನಿಲ್ದಾಣದ ಒಳಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.












Click it and Unblock the Notifications