ಚೀಲದಲ್ಲಿ ಪಿಸ್ತೂಲು: ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ವಶಕ್ಕೆ
ಬೆಂಗಳೂರು, ಸೆಪ್ಟೆಂಬರ್ 19: ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರನ್ನು ಸಿಐಎಸ್ಎಫ್ ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ದೇವನಹಳ್ಳಿ ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಲಗೇಜ್ ಪರಿಶೀಲನೆ ವೇಳೆ ಆನಂದ್ ಅಸ್ನೋಟಿಕರ್ ಅವರ ಚೀಲದಲ್ಲಿ ಪಿಸ್ತೂಲು ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿದ್ದ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆನಂದ್ ಅಸ್ನೋಟಿಕರ್ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಕ್ಕೆ ಹೊರಟಿದ್ದರು. ಇಂಡಿಗೋ ವಿಮಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಅವರು ಗೋವಾಕ್ಕೆ ತೆರಳಬೇಕಿತ್ತು. ಆಗ ಮಾಮೂಲಿ ಭದ್ರತಾ ತಪಾಸಣೆ ಸಂದರ್ಭದಲ್ಲಿ ಅವರ ಚೀಲದಲ್ಲಿ ಪಿಸ್ತೂಲು ಸಿಕ್ಕಿದೆ. ಗನ್ ಸಾಗಿಸುತ್ತಿರುವುದರ ಬಗ್ಗೆ ಅವರು ಭದ್ರತಾ ಸಿಬ್ಬಂದಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.

ಪಿಸ್ತೂಲ್ಗೆ ತಮ್ಮ ಬಳಿ ಪರವಾನಗಿ ಇದೆ ಎಂದು ಆನಂದ್ ಅಸ್ನೋಟಿಕರ್ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವ ಭದ್ರತಾ ಸಿಬ್ಬಂದಿ, ವಿಚಾರಣೆಗೆ ಒಳಪಡಿಸಿದ್ದು, ಪಿಸ್ತೂಲಿನ ಲೈಸೆನ್ಸ್ ಪರಿಶೀಲನೆ ಮಾಡುತ್ತಿದ್ದಾರೆ.
Recommended Video
ಆನಂದ್ ಅಸ್ನೋಟಿಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರವಾರ-ಅಂಕೋಲ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ರೂಪಾಲಿ ನಾಯ್ಕ ಎದುರು ಸೋಲು ಅನುಭವಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications