ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲಿವೇಟೆಡ್ ಕಾರಿಡಾರ್ ಟೆಂಡರ್ ರದ್ದತಿ: ಸಿಎಂ ಭೇಟಿಗೆ ನಿರ್ಧಾರ

|
Google Oneindia Kannada News

ಬೆಂಗಳೂರು, ಮಾರ್ಚ್ 18: ನಗರದಲ್ಲಿ ಎಲಿವೇಟೆಡ್ ಕಾರಿಡಾರ್‌ ನಿರ್ಮಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಕರೆದಿರುವ ಟೆಂಡರ್ ರದ್ದು ಕುರಿತಂತೆ ಸಿಟಿಜನ್ಸ್ ಫಾರ್ ಬೆಂಗಳೂರು ನೇತೃತ್ವದ ತಂಡವು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದೆ.

 'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ 'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ

ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಖಂಡಿಸಿ ಶನಿವಾರ ನಡೆದ ಪ್ರತಿಭಟನೆ ಬೆನ್ನಲ್ಲೇ ಎಚ್‌ಡಿ ಕುಮಾರಸ್ವಾಮಿಯವರು ಪ್ರತಿಭಟನಾಕಾರರನ್ನು ಚರ್ಚೆಗೆ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಪರ್ಯಾಯ ಪರಿಹಾರೋಪಾಯಗಳೊಂದಿಗೆ ಸಿಟಿಜನ್ ಫಾರ್ ಬೆಂಗಳೂರು ತಂಡ ಭೇಟಿ ಮಾಡಲಿದೆ.

 ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ

ಭೇಟಿ ಸಂದರ್ಭದಲ್ಲಿ ಎತ್ತರಿಸಿದ ಸೇತುವೆಗೆ ಕರೆದಿರುವ ಟೆಂಡರ್ ರದ್ದುಪಡಿಸಬೇಕು. ತಕ್ಷಣ ಈ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು. ಬಸ್ ದರ ಇಳಿಕೆ ಮಾಡಬೇಕು. ಯೋಜನೆಗೆ ಹಾಕಲು ಉದ್ದೇಶಿರುವ ಹಣವನ್ನು ಬಿಎಂಟಿಸಿಯಂತಹ ಸಾರ್ವಜನಿಕ ಸಾರಿಗೆ ಸಂಸ್ಥೆಗೆ ವಿನಿಯೋಗಿಸಬೇಕು.

Citizens for Bengaluru team will meet HDK

ಹೊರ ವರ್ತುಲ ರಸ್ತೆಯಲ್ಲಿ ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಂ ಅನುಷ್ಠಾನಗೊಳಿಸಬೇಕು. ಸೇರಿದಂತೆ ನಗರದ ಸಂಚಾರ ದಟ್ಟಣೆ ನಿವಾರಣೆಗೆ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದಿಡಲಾಗುವುದು ಎಂದು ಸಿಟಿಜನ್ ಫೋರಂ ಕಾರ್ಯಕರ್ತರು ತಿಳಿಸಿದ್ದಾರೆ.

Citizens for Bengaluru team will meet HDK

ಈ ಮಧ್ಯೆ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಮೂರು ಸಾವಿರಕ್ಕೂ ಅಧಿಕ ಮರಗಳನ್ನು ಬಲಿಕೊಡಲಾಗುತ್ತಿದೆ. ಪ್ರಮುಖ ಕೆರೆಗಳ ಒತ್ತುವರಿಯಾಗುತ್ತದೆ ಆದ್ದರಿಂದ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

English summary
Citizens For Bengaluru team will meet Chief minister HD Kumaraswamy Soon and will urge to cancel the tender of elevated corridor project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X