Get Updates
Get notified of breaking news, exclusive insights, and must-see stories!

Bengaluru rains: ಮಳೆಯ ತುರ್ತು ಸಂದರ್ಭಗಳಲ್ಲಿ ಬಿಬಿಎಂಪಿ ಸಹಾಯಕ್ಕೆ ಬರಲಿದ್ದಾರೆ ಸಂಚಾರಿ ಪೊಲೀಸರು

ಬೆಂಗಳೂರು, ಜೂನ್. 01: ಬೆಂಗಳೂರಿನಲ್ಲಿ ಸಣ್ಣ ಮಳೆಗೂ ರಸ್ತೆಗಳು ತುಂಬಿ ಹರಿಯುವುದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಜೊತೆಗೆ ಪ್ರವಾಹ ಸಂಬಂಧಿತ ತುರ್ತು ಕೆಲಸಗಳಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.

ಹೌದು, ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಈ ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡುವ ಪ್ರಯತ್ನದ ಭಾಗವಾಗಿ ನಗರದಾದ್ಯಂತ ಸಂಚಾರ ಪೊಲೀಸ್ ಠಾಣೆಗಳಿಗೆ ಅಗತ್ಯ ಪರಿಕರಗಳನ್ನು ಒಳಗೊಂಡ ವಿಶೇಷ ಕಿಟ್‌ಗಳನ್ನು ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಜನರು ಮಳೆಯ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾಗುವುದು ಸ್ವಲ್ಪವಾದರೂ ತಪ್ಪಲಿದೆ.

City Traffic Police Decided to share Responsibility of Flood-Related Emergency with BBMP

ಈ ಹೊಸ ಯೋಜನೆಯ ಅಡಿಯಲ್ಲಿ, ಟ್ರಾಫಿಕ್ ಪೋಲೀಸ್ ಅಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಜನರಿಗೆ ನೆರವು ನೀಡಲು ತಮ್ಮ ಸಂಚಾರಿ ಪೊಲೀಸರು ತಮ್ಮ ವಾಹನಗಳಲ್ಲಿ ಕುಡಗೋಲು, ಮರ ಕಡಿಯುವ ಯಂತ್ರಗಳು, ಸುತ್ತಿಗೆಗಳು, ಹಗ್ಗಗಳು, ಬಕೆಟ್‌ಗಳು ಸೇರಿ ಮಳೆ ಅವಾಂತರದಲ್ಲಿ ಬೇಕಾಗುವ ಇತರ ಅಗತ್ಯ ಹಾರ್ಡ್‌ವೇರ್ ಉಪಕರಣಗಳನ್ನು ಒಯ್ಯುಲಿದ್ದಾರೆ.

ಭಾರೀ ಮಳೆಯ ಸಮಯದಲ್ಲಿ ಆಗಾಗ್ಗೆ ಜನರಿಂದ ಕರೆಗಳನ್ನು ಸ್ವೀಕರಿಸುವ ಬಿಬಿಎಂಪಿ ಸಿಬ್ಬಂದಿಗೆ ಬೆಂಬಲ ನೀಡುವುದು ಸಂಚಾರ ಪೊಲೀಸರ ಗುರಿಯಾಗಿದೆ. ಮಳೆಯ ಸಮಯದಲ್ಲಿ ಬೆಂಗಳೂರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳೆಂದರೆ ರಸ್ತೆಗಳಲ್ಲಿ ನೀರು ನಿಲ್ಲುವುದು ಮತ್ತು ಮರಗಳು ಉರುಳುವುದು, ಟ್ರಾಫಿಕ್ ಜಾಮ್, ಅಂಡರ್‌ಪಾಸ್‌ಗಳಲ್ಲಿ ನೀಡು ನಿಲ್ಲುವುದು.

City Traffic Police Decided to share Responsibility of Flood-Related Emergency with BBMP

ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ 22 ವರ್ಷದ ಟೆಕ್ಕಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಅಹಿತಕರ ಘಟನೆಯ ನಂತರ, ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಿರಲು ಈ ಹಾರ್ಡ್‌ವೇರ್ ಉಪಕರಣಗಳನ್ನು ಕೊಂಡೊಯ್ಯುವಂತೆ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಸೂಚನೆ ನೀಡಿದ್ದಾರೆ. ನಗರದ ಎಲ್ಲಾ ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ಹಾರ್ಡ್‌ವೇರ್ ಟೂಲ್ ಕಿಟ್‌ಗಳನ್ನು ಅಳವಡಿಸಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ಮೇ 22 ರಂದು ಸುರಿದ ಭಾರಿ ಮಳೆಯಿಂದಾಗಿ ನಗರ ಜಲಾವೃತವಾಗಿತ್ತು. ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಮಳೆನೀರಿಗೆ ಸಿಲುಕಿ 22 ವರ್ಷದ ಭಾನುರೇಖಾ ಎಂದು ಗುರುತಿಸಲ್ಪಟ್ಟ ಯುವತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇನ್ಫೋಸಿಸ್ ಟೆಕ್ಕಿಯಾಗಿದ್ದ ಭಾನುರೇಖಾ ಅವರು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದರು. ಉಳಿದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ, ಪತ್ರಕರ್ತರು, ಜನರು ರಕ್ಷಿಸಿದ್ದಾರೆ.

ಇಂತಹ ಘಟನೆಗಳ ಹಿನ್ನೆಲೆಯಲ್ಲಿ ಭಾರಿ ಮಳೆಯ ನಂತರದ ಸಣ್ಣಪುಟ್ಟ ಸಮಸ್ಯೆಗಳ ನಿವಾರಣೆಗೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಸಂಚಾರ ದಟ್ಟಣೆಯಿಂದ ಬಿಬಿಎಂಪಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಲು ಸಮಯ ವ್ಯಯವಾಗಬಹುದೆಂಬ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್, "ಈಗಾಗಲೇ ಎಲ್ಲಾ ಠಾಣೆಗಳಿಗೆ ಅಗತ್ಯವಿರುವ ಸಲಕರಣೆಗಳನ್ನು ಒದಗಿಸಲಾಗಿದೆ. ಇದು ಬಿಬಿಎಂಪಿಯ ಸಮನ್ವಯದಿಂದ ನಡೆಯುತ್ತಿದೆ. ಹೆಚ್ಚಿನ ಟ್ರಾಫಿಕ್ ಜಾಮ್‌ನಿಂದಾಗಿ, ಬಿಬಿಎಂಪಿ ಅಧಿಕಾರಿಗಳು ಸಮಯಕ್ಕೆ ಸ್ಥಳಕ್ಕೆ ತಲುಪಲು ಸಮಯ ಬೇಕಾಗುತ್ತದೆ. ಹೀಗಾಗಿ ಮಳೆ ಬಂದ ನಂತರ ಸಣ್ಣಪುಟ್ಟ ಸಮಸ್ಯೆಗಳ ಪರಿಹಾರದ ಜವಾಬ್ದಾರಿ ವಹಿಸಿಕೊಳ್ಳಲು ನಿರ್ಧರಿಸಿದ್ದೇವೆ" ಎಂದು ಮಾಹಿತಿ ನೀಡಿದ್ದಾರೆ.

"ಎಲ್ಲಾ 48 ಸಂಚಾರ ಪೊಲೀಸ್ ಠಾಣೆಗಳಿಗೆ ಉಪಕರಣಗಳನ್ನು ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ಇನ್‌ಸ್ಪೆಕ್ಟರ್‌ಗಳು ಮೊದಲ ಸಾಲಿನ ಕರ್ತವ್ಯದಲ್ಲಿ ಇರುತ್ತಾರೆ" ಎಂದು ಹೇಳಿದ್ದಾರೆ. ಮಂಗಳವಾರ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನ ಹಲವೆಡೆ ಜಲಾವೃತವಾಗಿತ್ತು. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಮತ್ತು ಕರ್ನಾಟಕದ ಇತರ ಹತ್ತು ಜಿಲ್ಲೆಗಳಿಗೆ ಜೂನ್ 3 ರವರೆಗೆ ಯೆಲ್ಲೋ ಎಚ್ಚರಿಕೆಯನ್ನು ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಅಧ್ಯಾಯವು ಅಂಡರ್‌ಪಾಸ್‌ಗಳಲ್ಲಿ ನೀಎಉ ನಿಲ್ಲುವುದು, ಸಣ್ಣ ಟ್ರಾಫಿಕ್ ದಟ್ಟಣೆ ಮತ್ತು ಕೆಲವು ಪ್ರದೇಶಗಳಲ್ಲಿ ಮರಗಳು ಬೀಳುವ ಸಾಧ್ಯತೆಯ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದು, ಜಾಗರೂಕರಾಗಿರಲು ತಿಳಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಆಯುಕ್ತರು, ಜಂಟಿ ಆಯುಕ್ತರು ಸೇರಿದಂತೆ ಎಲ್ಲಾ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+