ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಬ್ಅರ್ಬನ್ ರೈಲ್ವೆಗೆ ಆಗಸ್ಟ್‌ ಅಂತ್ಯಕ್ಕೆ ಟೆಂಡರ್, ನಿಲ್ದಾಣಗಳ ಬಗ್ಗೆ ಮಾಹಿತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಸಬ್‌ಅರ್ಬನ್ ರೈಲ್ವೆ ಯೋಜನೆಗೆ ಆಗಸ್ಟ್ ಅಂತ್ಯಕ್ಕೆ ಟೆಂಡರ್ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿರುವ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಕಾರಿಡಾರ್ ಮಾರ್ಗ ನಿರ್ಮಾಣ ಕುರಿತು ಟೆಂಡರ್ ಆಹ್ವಾನಿಸುವ ಸಾಧ್ಯತೆ ಇದೆ.

ರೈಲ್ವೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್‌; IRCTC ಹೊಸ ಮಾರ್ಗಸೂಚಿ...ರೈಲ್ವೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್‌; IRCTC ಹೊಸ ಮಾರ್ಗಸೂಚಿ...

ಕೇಂದ್ರ ಸಚಿವ ಸಂಪುಟ ಆರ್ಥಿಕ ವ್ಯವಹಾರಗಳ ಸಮಿತಿ ಸದರಿ ಉಪನಗರ ರೈಲು ಯೋಜನೆಗೆ ಅನುಮೋದನೆ ನೀಡುವಾಗ ನಾಲ್ಕು ಕಾರಿಡಾರ್ ಪೈಕಿ ಆದ್ಯತೆ ಮೇರೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ-ದೇವನಹಳ್ಳಿ(41.40ಕಿ.ಮೀ) ಕಾರಿಡಾರ್ ಕೈಗೆತ್ತಿಕೊಂಡು ಮೂರು ವರ್ಷದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿತ್ತು.

 Civil Work Tender For 25km Mallige Suburban Rail Corridor Likely By Month-End

ಆದರೆ, ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೆ-ರೈಡ್, ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಮತ್ತು ಹೀಲಳಿಗೆ-ರಾಜಾನುಕುಂಟೆ ಕಾರಿಡಾರ್ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ. 148.17 ಕಿ.ಮೀ ಉದ್ದದ 15,767 ಕೋಟಿ ರೂ. ಅಂದಾಜು ವೆಚ್ಚದ ಉಪನಗರ ರೈಲು ಯೋಜನೆಯಲ್ಲಿ ಪ್ರಮುಖವಾಗಿ ನಾಲ್ಕು ಕಾರಿಡಾರ್‌ಗಳು ಬರಲಿವೆ.

ಈ ಪೈಕಿ ಕೆ-ರೈಡ್ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ-ರಾಜಾನುಕುಂಟೆ ಕಾರಿಡಾರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುವ ನಿರ್ಧಾರ ಮಾಡಿದೆ. ಇದರಲ್ಲಿ ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಕಾರಿಡಾರ್ ನಿರ್ಮಾಣ ಸಂಬಂಧ ಸಿವಿಲ್ ಕಾಮಗಾರಿಗೆ ಈ ಮಾಸಾಂತ್ಯದ ವೇಳೆಗೆ ಟೆಂಡರ್ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಂದಿನ ಅಕ್ಟೋಬರ್-ನವೆಂಬರ್ ವೇಳೆಗೆ ಈ ಟೆಂಡರ್ ಪ್ರಕ್ರಿಯೆ ಮುಗಿಸಿ, ಬಳಿಕ ಹೀಲಳಿಗೆ-ರಾಜಾನುಕುಂಟೆ ಕಾರಿಡಾರ್ ಸಿವಿಲ್ ಕಾಮಗಾರಿಗೆ ಟೆಂಡರ್ ಕರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕೆ-ರೈಡ್ ಮೂಲಗಳು ತಿಳಿಸಿವೆ. ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಸ್ಪೆಷಲ್ ಪರ್ಪಸ್ ವೆಹಿಕಲ್ ಮಾದರಿಯಲ್ಲಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ.

ಅಂದರೆ, ಒಟ್ಟು ಯೋಜನಾ ವೆಚ್ಚದ ಪೈಕಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ ಶೇ.20ರಷ್ಟು ಹಣ ಭರಿಸಲಿದೆ. ಉಳಿದ ಶೇ.60ರಷ್ಟು ಹಣವನ್ನು ಕೆ-ರೈಡ್ ಸಂಸ್ಥೆ ಸಂಸ್ಥೆಗಳು ಅಥವಾ ಬ್ಯಾಂಕ್‌ಗಳಿಂದ ಸಾಲದ ರೂಪದಲ್ಲಿ ಪಡೆಯಲಿವೆ.

ಇದೀಗ ಜರ್ಮನಿ ಮೂಲದ ಕೆಎಫ್‌ಡಬ್ಲ್ಯೂ ಮತ್ತು ಫ್ರಾನ್ಸ್ ಮೂಲದ ಎಎಫ್‌ಡಿ ಸಂಸ್ಥೆಗಳು ಸದರಿ ಯೋಜನೆ ಅನುಷ್ಠಾನಕ್ಕೆ ಸಾಲ ನೀಡಲು ಆಸಕ್ತಿ ತೋರಿವೆ ಎಂಬುದು ಸ್ಪಷ್ಟವಾಗಿದೆ.

ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಕಾರಿಡಾರ್‌ನಲ್ಲಿ ಒಟ್ಟು 14 ರೈಲು ನಿಲ್ದಾಣಗಳು ಬರಲಿವೆ. ಬೈಯಪ್ಪನಹಳ್ಳಿ, ಕಸ್ತೂರಿನಗರ, ಸೇವಾನಗರ, ಬಾಣಸವಾಡಿ, ಕಾವೇರಿನಗರ, ನಾಗವಾರ, ಕನಕನಗರ, ಹೆಬ್ಬಾಳ, ಲೊಟ್ಟಗೊಲ್ಲ ಹಳ್ಳಿ, ಯಶವಂತಪುರ, ಜಾಲಹಳ್ಳಿ, ಶೆಟ್ಟಿಹಳ್ಳಿ, ಮೈದಾರಹಳ್ಳಿ ಹಾಗೂ ಚಿಕ್ಕಬಾಣಾವರ ರೈಲ್ವೆ ನಿಲ್ದಾಣಗಳು ಬರಲಿವೆ.

ಸಬ್ ಅರ್ಬನ್‌ ಯೋಜನೆಯಿಂದ ಬೆಂಗಳೂರು ಸಂಚಾರ ದಟ್ಟಣೆ ಕಡಿಮೆ ಆಗುವುದರ ಜೊತೆಗೆ ನಗರ ಹೊರವಲಯದ ಉಪನಗರ ಸಾರಿಗೆ ಸಂಪರ್ಕ ಸುಲಭವಾಗಲಿದೆ. ರೈಲ್ವೆ ಡಬಲಿಂಗ್ ಯೋಜನೆಗಳಿಂದ ಹೆಚ್ಚುವರಿ ರೈಲುಗಳ ಕಾರ್ಯಾಚರಣೆಗೆ ಅನುಕೂಲವಾಗಲಿದೆ ಎಂದರು.

15767 ಕೋಟಿ ರೂ. ವೆಚ್ಚದಲ್ಲಿ 148 ಕಿ.ಮೀ ಉದ್ದದ 4 ಕಾರಿಡಾರ್‌ಗಳ ಸಬ್ ಅರ್ಬನ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಯೋಜನೆಯ ವೆಚ್ಚವನ್ನು ಭಾರತ ಸರ್ಕಾರದ ಅನುದಾನ ಬಾಹ್ಯ ಸಂಪನ್ಮೂಲಗಳ 20:20:60 ಅನುಪಾತದಡಿ ಭರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ಈಗಾಗಲೇ 400 ಕೋಟಿ ರೂ. ಅನ್ನು 2020-21ರಲ್ಲಿ ಬಿಡುಗಡೆಗೊಳಿಸಿದೆ.

2023 ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ನಿಗದಿತ ಕಾಲಮಿತಿಯೊಳಗೆ ಈ ಸಬ್ ಅರ್ಬನ್ ಯೋಜನೆ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಾಲ್ಕು ಕಾರಿಡಾರ್‌ಗಳ ಕುರಿತು ಮಾಹಿತಿ
*ಕೆಎಸ್‌ಆರ್ ಬೆಂಗಳೂರು ನಗರ ನಿಲ್ದಾಣ-ದೇವನಹಳ್ಳಿ-41.40 ಕಿ.ಮೀ
*ಬೈಯಪ್ಪನಹಳ್ಳಿ ಟರ್ಮಿನಲ್ -ಚಿಕ್ಕಬಾಣಾವರ-25 ಕಿ.ಮೀ
*ಕೆಂಗೇರಿ-ವೈಟ್‌ಫೀಲ್ಡ್-35.52 ಕಿ.ಮೀ
*ಹೀಲಳಿಗೆ ನಿಲ್ದಾಣ-ರಾಜಾನುಕುಂಟೆ-46.24 ಕಿ.ಮೀ ಇರಲಿದೆ.

English summary
Setting the ball rolling for the 38-year-old Bengaluru suburban rail proposal, Karnataka rain infrastructure Development enterprises, which is executing the project, is likely to float the civil work tender by the end of this month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X