ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣ: ಸ್ಫೋಟಕ ಮಾಹಿತಿ ಹಂಚಿಕೊಂಡ ಬೆಂಗಳೂರು ಪೊಲೀಸ್‌ ಕಮೀಷನರ್‌

ಬೆಂಗಳೂರಿನಲ್ಲಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್ಮನ್‌ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಎಸ್.ಸೀಮಂತ್ ಕುಮಾರ್ ಸಿಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖೆಯ ಪ್ರಕಾರ ಇದು ಸ್ವಯಂ ಗುಂಡು ಹಾರಿಸಿಕೊಂಡ ಪ್ರಕರಣ ಎಂಬುದು ತಿಳಿದುಬಂದಿದೆ. ಆದರೂ, ಘಟನೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲು ವಿಸ್ತೃತ ತನಿಖೆ ಆರಂಭಿಸಲಾಗಿದೆ ಎಂದರು.

ಪೊಲೀಸ್ ಆಯುಕ್ತರ ಮಾಹಿತಿ ಪ್ರಕಾರ, ಈ ದುರ್ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 3.15ರ ವೇಳೆಗೆ ನಡೆದಿದೆ. ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಈ ಕಾರ್ಯಾಚರಣೆಗೆ ಕೇರಳದಿಂದ ಅಧಿಕಾರಿಗಳು ಆಗಮಿಸಿದ್ದರು ಎಂದು ಅವರು ದೃಢಪಡಿಸಿದರು. ಪ್ರಸ್ತುತ ಘಟನಾ ಸ್ಥಳದಲ್ಲಿ ಯಾವುದೇ ಐಟಿ ಅಧಿಕಾರಿಗಳು ಇಲ್ಲ ಎಂದು ತಿಳಿಸಿದರು. ತನಿಖೆಯ ಭಾಗವಾಗಿ ಐಟಿ ಇಲಾಖೆಯಿಂದ ಅಗತ್ಯ ಮಾಹಿತಿ ಬೆಂಗಳೂರು ಪೊಲೀಸರು ಪಡೆದುಕೊಳ್ಳಲಿದ್ದಾರೆ ಎಂದರು.

CJ Roy Suicide

ಕುಟುಂಬ ಸದಸ್ಯರು ವಿದೇಶದಲ್ಲಿದ್ದಾರೆ

ಸಿ.ಜೆ.ರಾಯ್ ಅವರ ಕುಟುಂಬ ಸದಸ್ಯರು ಪ್ರಸ್ತುತ ವಿದೇಶದಲ್ಲಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು. ಅವರು ಬಂದ ಬಳಿಕ ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ. ಪ್ರಾಥಮಿಕವಾಗಿ ಇದು ಸ್ವಯಂ ಗುಂಡೇಟು ಪ್ರಕರಣವೆಂದು ಕಂಡುಬಂದಿದ್ದರೂ, ಯಾವುದೇ ಸಾಧ್ಯತೆಯನ್ನು ಕೈಬಿಡದೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಪ್ರಕರಣವನ್ನು ಅಸಹಜ ಮರಣ ಎಂದು ದಾಖಲಿಸಬೇಕೇ ಅಥವಾ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಕಲಂಗಳನ್ನು ಸೇರಿಸಬೇಕೇ ಎಂಬುದರ ಬಗ್ಗೆ ಕಾನೂನು ಆಯಾಮಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ನಡುವೆ, ಕಾನ್ಫಿಡೆಂಟ್‌ ಗ್ರೂಪ್‌ನ ಒಬ್ಬ ನಿರ್ದೇಶಕರಿಂದ ಈಗಾಗಲೇ ದೂರು ದಾಖಲಾಗಿದೆ. ಎಂದು ಆಯುಕ್ತರು ತಿಳಿಸಿದರು. ಪ್ರಸ್ತುತ ತನಿಖಾ ತಂಡಗಳು ಕಚೇರಿ ಆವರಣದಿಂದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ದಾಖಲೆಗಳು ಮತ್ತು ಸಾಕ್ಷಿ ಹೇಳಿಕೆಗಳ ಪರಿಶೀಲನೆಯ ನಂತರ ಪ್ರಕರಣದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ ಸಹೋದರ ಗಂಭೀರ ಆರೋಪ

ಸಿ.ಜೆ. ರಾಯ್ ಅವರ ಸಾವಿನ ಪ್ರಕರಣ ಇದೀಗ ಗಂಭೀರ ತಿರುವು ಪಡೆದಿದ್ದು, ಅವರ ಸಹೋದರ ಬಾಬು ರಾಯ್ ಅವರು ಐಟಿ ಅಧಿಕಾರಿಗಳ ವಿರುದ್ಧ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪ ಮಾಡಿದ್ದಾರೆ. "ಕಳೆದ ಕೆಲ ದಿನಗಳಿಂದ ಐಟಿ ಅಧಿಕಾರಿಗಳು ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಪದೇ ಪದೇ ವಿಚಾರಣೆ, ಶೋಧನೆಗಳ ಕಾರಣದಿಂದ ನನ್ನ ಸಹೋದರ ತೀವ್ರ ಮಾನಸಿಕ ಒತ್ತಡದಲ್ಲಿದ್ದರು. ಇದೇ ಆತ್ಮಹತ್ಯೆಗೆ ಕಾರಣ" ಎಂದು ಅವರು ಆರೋಪಿಸಿದ್ದಾರೆ. ಐಟಿ ಅಧಿಕಾರಿಗಳ ವರ್ತನೆಯೇ ಸಿ.ಜೆ. ರಾಯ್ ಅವರನ್ನು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಕ್ಕೆ ದೂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿ.ಜೆ.ರಾಯ್ ಅವರು ತಮ್ಮ ಲೈಸೆನ್ಸ್ ಹೊಂದಿದ ಪಿಸ್ತೂಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಈ ವೇಳೆ ಕೇರಳದಿಂದ ಬಂದಿದ್ದ ಆದಾಯ ತೆರಿಗೆ ಇಲಾಖೆಯ ಶೋಧನಾ ತಂಡವು ಮೂರನೇ ದಿನವೂ ನಿರಂತರವಾಗಿ ದಾಳಿ ನಡೆಸುತ್ತಿತ್ತು ಎಂದು ತಿಳಿದುಬಂದಿದೆ. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+