ಡಿಕೆ V/s ಗೌಡ: ಎರಡು ಕುಟುಂಬಗಳಿಗೆ ಪ್ರತಿಷ್ಠೆಯ ಕಣವಾದ ಬೆಂಗಳೂರು ಗ್ರಾಮಾಂತರ
ಬೆಂಗಳೂರು, ಏಪ್ರಿಲ್. 12: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಕೇವಲ ಒಂದು ಕ್ಷೇತ್ರ. ಅದೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಹಠದಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್ ಮಾತ್ರವಲ್ಲ ಡಿಕೆ ಬ್ರದರ್ಸ್‌ಗೆ ಇದು ಪ್ರತಿಷ್ಠೆಯೆ ಕಣವಾಗಿದೆ. ಹೀಗಾಗಿಯೇ ಇಲ್ಲಿ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ.
ಬಿಜೆಪಿಗೆ ಗಗನ ಕುಸುಮವಾಗಿರುವ ಬೆಂಗಳೂರು ಗ್ರಾಮಾಂತರವನ್ನು ಈ ಬಾರಿ ಗೆಲ್ಲಬೇಕು ಎಂದು ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಒಕ್ಕಲಿಗ ಮತ ಬ್ಯಾಂಕ್‌ಗೆ ಕನ್ನ ಹಾಕುವ ಪ್ರಯತ್ನ ಮಾಡುತ್ತಿದೆ.

ಈ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕುಟುಂಬಗಳ ನಡುವಿನ ದೊಡ್ಡ ಪೈಪೋಟಿಗೆ ಈ ಕ್ಷೇತ್ರ ಸಾಕ್ಷಿಯಾಗಲಿದೆ. ಎರಡು ಪ್ರಭಾವಿ ಕುಟುಂಬಗಳ ನಡುವೆ ಅಡ್ಡಕತ್ತರಿಯಲ್ಲಿ ಸಿಲುಕಿರುವುದು ಮಾತ್ರ ಇಲ್ಲಿನ ಪ್ರಭಾವಿ ಒಕ್ಕಲಿಗ ಸಮುದಾಯ. ಯಾರ ಕಡೆಗೆ ಹೋಗುವುದು ಎಂಬುದೇ ದೊಡ್ಡ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಕುಳಿತಿದೆ.
ಗ್ರಾಮಾಂತರದ ಮೇಲೆ ಮೈತ್ರಿ ಕಣ್ಣು!
2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಸ್ಥಾನವನ್ನು ಬಿಜೆಪಿ - ಜೆಡಿಎಸ್ ಮೈತ್ರಿ ಗೆಲ್ಲಲು ಪ್ರಯತ್ನಿಸುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ತಮ್ಮ ತವರು ನೆಲದ ಮೇಲೆ ಹಿಡಿತವನ್ನು ಉಳಿಸಿಕೊಳ್ಳಲು ಏನೇನು ಪ್ರಯತ್ನ ಮಾಡಬೇಕೋ ಅದೆಲ್ಲಾ ಮಾಡುತ್ತಿದ್ದಾರೆ. ಕಾಂಗ್ರೆಸ್ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸಿದರೇ, ಬಿಜೆಪಿ ಜೆಡಿಎಸ್ ವರಿಷ್ಠ ದೇವೇಗೌಡರ ಅಳಿಯ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ.
ಗ್ರಾಮಾಂತರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಓಲೈಸಲು ಎರಡೂ ಫ್ಯಾಮಿಲಿಗಳು ಪ್ರಯತ್ನಿಸುತ್ತಿದ್ದಾರೆ. ದೇಶದಲ್ಲಿರುವ ಮೋದಿ ಅಲೆ ಮತ್ತು ಡಾ. ಎನ್ ಸಿ ಮಂಜುನಾಥ್ ಅವರಿಗಿರುವ 'ಕ್ಲೀನ್ ಇಮೇಜ್' ಅನ್ನು ಇಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಪ್ರಚಾರ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಪ್ರಚಾರ ನಡೆಸುತ್ತಿದೆ. ಡಿಕೆ ಸುರೇಶ್ ತನ್ನ ಕೆಲಸಗಳನ್ನು ಹೇಳಿಕೊಂಡು ಮತಯಾಚನೆ ಮಾಡುತ್ತಿದ್ದಾರೆ.

ನಗರ ಮತ್ತು ಗ್ರಾಮೀಣ ಮತಗಳ ಮಿಶ್ರಣ ಈ ಗ್ರಾಮಾಂತರ ಕ್ಷೇತ್ರ!
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಗರ ಮತ್ತು ಗ್ರಾಮೀಣ ಮತದಾರರ ಮಿಶ್ರಣವಾಗಿದೆ. ಒಟ್ಟು 27.53 ಲಕ್ಷ ಮತದಾರರು ಈ ಕ್ಷೇತ್ರದಲ್ಲಿದ್ದಾರೆ. ಬೆಂಗಳೂರು ಉತ್ತರದ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಮತದಾರರಿರುವ ಕ್ಷೇತ್ರವಾಗಿ ಬೆಂಗಳೂರು ಗ್ರಾಮಾಂತರ ಹೆಸರುವಾಸಿಯಾಗಿದೆ.
2009 ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾದ ನಂತರ ಮೊದಲ ಚುನಾವಣೆಯಲ್ಲಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ 1.4 ಲಕ್ಷ ಮತಗಳ ಮುನ್ನಡೆಯೊಂದಿಗೆ ಗೆದ್ದಿದ್ದರು. ಎಚ್ ಡಿ ಕುಮಾರಸ್ವಾಮಿ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, 2013ರಲ್ಲಿ ನಡೆದ ಉಪಚುನಾವಣೆಯಲ್ಲಿ ಡಿ.ಕೆ.ಸುರೇಶ್ ಗೆಲುವು ಸಾಧಿಸಿದರು. ಆದರೆ, ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿಲ್ಲ. ಹೀಗಾಗಿ ಅದರ ಮೇಲೆ ಒಂದು ಕಣ್ಣು ಯಾವಾಗಲು ಇಟ್ಟಿದೆ.
ಬಿಜೆಪಿಯು ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರ ಸೇರಿದಂತೆ ಎಲ್ಲಾ ಮೂರು ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತಿದೆ. ಆದರೆ 2008 ರಲ್ಲಿ ಗ್ರಾಮಾಂತರ ಕ್ಷೇತ್ರ ರಚನೆಯಾದ ನಂತರ ಬಿಜೆಪಿಗೆ ಈ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ, ಬಿಜೆಪಿ ಅಭ್ಯರ್ಥಿಗಳು ಉತ್ತಮ ಮತಗಳನ್ನು ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಜೊತೆಗೆ ಜೆಡಿಎಸ್ ಮತಗಳು ಸೇರುವ ಕಾರಣ ಅಭ್ಯರ್ಥಿ ಗೆಲ್ಲಬಹುದು ಎಂಬ ಹುಮ್ಮಸ್ಸಿನಲ್ಲಿದೆ ಬಿಜೆಪಿ- ಜೆಡಿಎಸ್ ಮೈತ್ರಿ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications