Viral Video: ಯಶವಂತಪುರದ ನಡುರಸ್ತೆಯಲ್ಲೇ ರಾಡ್‌ ಹಿಡಿದು ವಲಸಿಗರ ಫೈಟಿಂಗ್‌: ರೂಪೇಶ್ ರಾಜಣ್ಣ ಆಕ್ರೋಶ

ಬೆಂಗಳೂರು: ನಗರದ ಯಶವಂತಪುರ ಲಾರಿ ಸ್ಟ್ಯಾಂಡ್ ಪ್ರದೇಶದಲ್ಲಿ ಇತ್ತೀಚೆಗೆ ಗುಂಪೊಂದು ನಡುರಸ್ತೆಯಲ್ಲೇ ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ವಲಸಿಗ ಕಾರ್ಮಿಕರು ಎನ್ನಲಾದ ಈ ವ್ಯಕ್ತಿಗಳ ಅತಿರೇಕದ ವರ್ತನೆಯಿಂದಾಗಿ ಇಡೀ ರಸ್ತೆ ಕೆಲಕಾಲ ರಣರಂಗವಾಗಿ ಮಾರ್ಪಟ್ಟಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ವಿಡಿಯೋ ವೈರಲ್

ಯಶವಂತಪುರ ಸಮೀಪ ವಲಸಿಗರು ರಸ್ತೆಯಲ್ಲೇ ವ್ಯಕ್ತಿಗಳ ಗುಂಪೊಂದು ಅಪಾಯಕಾರಿ ವಸ್ತುಗಳನ್ನು ಹಿಡಿದು ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ನಗರದಲ್ಲಿ ಹೆಚ್ಚುತ್ತಿರುವ ವಲಸಿಗರ ವರ್ತನೆ ಮತ್ತು ಕಾನೂನು ಸುವ್ಯವಸ್ಥೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Migrant Workers

"ಅಪಾಯಕಾರಿ ವಸ್ತುಗಳನ್ನು ಹಿಡಿದು ರಸ್ತೆಯಲ್ಲಿ ಬಡಿದಾಟ ನಡೆಸುತ್ತಿದ್ದಾರೆ. ಇವರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಇವರು ಇದನ್ನು ಕರ್ನಾಟಕ ಅಂದುಕೊಂಡಿದ್ದಾರೋ ಅಥವಾ ಭೀಮಾರು (ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ) ರಾಜ್ಯಗಳು ಅಂದುಕೊಂಡಿದ್ದಾರೋ?" ಎಂದು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ. ಕರ್ನಾಟಕಕ್ಕೆ ಆಗಮಿಸುತ್ತಿರುವ ಅತಿಯಾದ ವಲಸೆಯಿಂದಾಗಿ ಸ್ಥಳೀಯ ಕನ್ನಡಿಗರ ಮೇಲೆ ಮತ್ತು ರಾಜ್ಯದ ಭದ್ರತೆಯ ಮೇಲೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಧಾನಿ ಸಂಚರಿಸುವ ಹಾದಿಯಲ್ಲೇ ಸ್ಫೋಟಕ ಪತ್ತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ
ಪ್ರಧಾನಿ ಸಂಚರಿಸುವ ಹಾದಿಯಲ್ಲೇ ಸ್ಫೋಟಕ ಪತ್ತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

ಘಟನೆಯ ದೃಶ್ಯಗಳನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿರುವ ಅವರು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. "ಕನ್ನಡಿಗರೇ ಎಚ್ಚರ" ಎಂದು ಅವರು ಸ್ಥಳೀಯರಲ್ಲಿ ಜಾಗೃತಿ ಮೂಡಿಸಲು ಕರೆ ನೀಡಿದ್ದಾರೆ. ನಡುರಸ್ತೆಯಲ್ಲಿ ನಡೆದ ಈ ಗಲಾಟೆಯಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಆತಂಕಕ್ಕೊಳಗಾಗಿದ್ದು, ಸಾರ್ವಜನಿಕ ಶಾಂತಿಗೆ ಧಕ್ಕೆ ತಂದವರ ವಿರುದ್ಧ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಏನಿದು ಘಟನೆ?

ಲಾರಿ ಸ್ಟ್ಯಾಂಡ್ ಬಳಿ ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಗಳು ರಸ್ತೆಯಲ್ಲಿ ಸಿಕ್ಕ ಸಿಕ್ಕ ಕಬ್ಬಿಣದ ರಾಡ್‌ಗಳು ಮತ್ತು ಕಲ್ಲುಗಳನ್ನು ಹಿಡಿದು ಪರಸ್ಪರ ದಾಳಿ ನಡೆಸಿದ್ದಾರೆ. ಸಾರ್ವಜನಿಕರು ಓಡಾಡುವ ಜಾಗದಲ್ಲೇ ಪ್ರಾಣಾಪಾಯ ಉಂಟುಮಾಡುವ ರೀತಿಯಲ್ಲಿ ಬಡಿದಾಟ ನಡೆಸುತ್ತಿರುವುದನ್ನು ಕಂಡು ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಕನ್ನಡಿಗರು ಮತ್ತು ಸ್ಥಳೀಯ ನಿವಾಸಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ನಗರದಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆಗೆ ಬೆಲೆ ಇಲ್ಲದಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ದೃಶ್ಯಗಳನ್ನು ಹಂಚಿಕೊಂಡಿರುವ ಹಲವರು, "ಹೊರ ರಾಜ್ಯಗಳಿಂದ ಬಂದವರು ಇಲ್ಲಿನ ಶಾಂತಿಯನ್ನು ಕದಡುತ್ತಿದ್ದಾರೆ. ಇವರಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ. ಬೆಂಗಳೂರನ್ನು ಬೇರೆ ರಾಜ್ಯಗಳ ಗುಂಡಾ ಸಂಸ್ಕೃತಿಗೆ ಹೋಲಿಸುವಂತೆ ಮಾಡುತ್ತಿದ್ದಾರೆ" ಎಂದು ಕಿಡಿಕಾರಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಲಾರಿ ಸ್ಟ್ಯಾಂಡ್ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಗಸ್ತು ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+