ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಡೆತ್‌ನೋಟ್‌ನಲ್ಲಿತ್ತು ಅಸಲಿ ಕಾರಣ

ಬೆಂಗಳೂರು, ಜನವರಿ 28: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಆದರೆ ಘಟನೆ ಕಾರಣವೇನು ಎಂಬುದು ಡೆತ್‌ನೋಟ್ ಮೂಲಕ ಬಹಿರಂಗಗೊಂಡಿದೆ.

ಶಾಲೆಯಲ್ಲಿ ಎಲ್ಲರ ಮುಂದೆ ನನ್ನನ್ನು ನಿಂದಿಸುತ್ತಾರೆ, ತನಗೆ ಹೊಡೆದಿದ್ದಾರೆ ಶಿಕ್ಷಕನ ಕಿರುಕುಳದಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಉತ್ತರಹಳ್ಳಿಯ ನಿವಾಸಿ ಧನುಷ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಧನುಷ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.

ಧನುಷ್ ಓದುತ್ತಿದ್ದ ಶಾಲೆಯ ಶಿಕ್ಷಕ ಬಾಲಕೃಷ್ಣ ಎಂಬವರು ಎಲ್ಲರ ಮುಂದೆ ನಿಂದಿಸಿ, ತನ್ನನ್ನು ಹೊಡೆದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಮನನೊಂದಿದ್ದನು. ಅಲ್ಲದೇ ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

class x student hangs self, blames teacher in suicide note

ಸದ್ಯ ಈ ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮಗನಿಗೆ ಶಿಕ್ಷಕ ನೀಡುತ್ತಿದ್ದ ಹಿಂಸೆಯ ಬಗ್ಗೆ ತಿಳಿದ ಪೋಷಕರು ಇದೀಗ ಕಣ್ಣೀರಿಡುತ್ತಿದ್ದಾರೆ, ಆದರೆ ಮಗ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ. ಮಗನ ಸಾವಿಗೆ ಕಾರಣವಾದ ಶಿಕ್ಷಕನನ್ನು ಬಂಧಿಸಬೇಕೆಂದು ಪೋಷಕರು ಆಗ್ರಹಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+