ಕಾನೂನು ವಿವಿ ಪ್ರವೇಶ ಪರೀಕ್ಷೆಗೆ ಅರ್ಜಿ
ಬೆಂಗಳೂರು, ಜನವರಿ 02: ಪ್ರಸಕ್ತ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) ಮೇ 13ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
Recommended Video
'ನೋ ಹೆಲ್ಮೆಟ್, ನೋ ಪೆಟ್ರೋಲ್' | ಬೆಂಗಳೂರಲ್ಲಿ ಆಗಸ್ಟ್ 5ರಿಂದ ಹೊಸ ನಿಯಮ ಜಾರಿ
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಸೇರಿದಂತೆ ದೇಶದ ಪ್ರತಿಷ್ಠಿತ 19 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್‌ಎಲ್‌ಯು) 5 ವರ್ಷದ ಇಂಟಿಗ್ರೇಟೆಡ್ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್‌ಎಲ್‌ಎಂ) ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಜನವರಿ 01 ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 31. ಶುಲ್ಕ ಪಾವತಿಸಲೂ ಕೂಡ ಅಂದೇ ಕೊನೆಯ ದಿನ.
ದ್ವಿತೀಯ ಪಿಯುಸಿಯಲ್ಲಿ ಶೇ 45%ಕ್ಕೂ ಹೆಚ್ಚು ಅಂಕ ಗಳಿಸಿರಬೇಕು, ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳು ಕನಿಷ್ಟ 40% ಅಂಕಗಳಿಸಿರಬೇಕು.
ಹೆಚ್ಚಿನ ಮಾಹಿತಿಗೆ www.clat.ac.in ಭೇಟಿ ನೀಡಿ.












Click it and Unblock the Notifications