ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಚ್ಚಿಬಿದ್ದ ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

|
Google Oneindia Kannada News

ಬೆಂಗಳೂರು, ಜ. 04: ಬುಧವಾರ ಸಿಲಿಕಾನ್ ಸಿಟಿಯ ಜನರು ಬೆಚ್ಚಿ ಬೀಳುವ ಸುದ್ದಿ ವರದಿಯಾಗಿದೆ. ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಲಾಗಿದ್ದ ಕ್ಯಾನ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆಯಾಗಿದೆ.

Cleaning staff found decomposed body inside a can kept in Yeshwantpur railway station; Police Probe On

ಯಶವಂತಪುರ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ನಂಬರ್ 1ರಲ್ಲಿ ಇರಿಸಲಾಗಿದ್ದ ಬಾಕ್ಸ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಸ್ವಚ್ಛತಾ ಸಿಬ್ಬಂದಿ ಬುಧವಾರ ಪತ್ತೆ ಮಾಡಿದ್ದಾರೆ. ಪೊಲೀಸರು, ವಿಧಿವಿಜ್ಞಾನ ತಜ್ಞರ ತಂಡ ರೈಲು ನಿಲ್ದಾಣ ತಲುಪಿದೆ.

Delhi hit and run case: ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಿಸೋಡಿಯಾDelhi hit and run case: ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಿಸೋಡಿಯಾ

ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ವಿಭಾಗದ ರೈಲ್ವೇ ಅಧಿಕಾರಿ ಕುಸುಮಾ ಹರಿಪ್ರಸಾದ್ ತಿಳಿಸಿದ್ದಾರೆ.

ಅಂದಾಜು 23 ವರ್ಷದ ಯುವತಿಯೊಬ್ಬರ ಶವ ಯಶವಂತಪುರ ರೈಲು ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ಒಂದರಲ್ಲಿ ಪತ್ತೆಯಾಗಿದ್ದು, ಪ್ಲಾಸ್ಟಿಕ್ ಕವರ್‌ನಲ್ಲಿ ಶವವನ್ನು ಇಟ್ಟಿದ್ದರು ಎನ್ನಲಾಗಿದೆ. ಶವ ಕೊಳೆತು ವಾಸನೆ ಬರುತ್ತಿದ್ದಂತೆ ರೈಲು ನಿಲ್ದಾಣದ ಸ್ವಚ್ಛತಾ ಸಿಬ್ಬಂದಿ ಗಮನಿಸಿದ್ದಾರೆ. ಬಳಿಕ ಅದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಜಯಮ್ಮ ಎಂಬುವವರು ಶವವನ್ನು ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು, ಶವ ಕೊಳೆಯಲು ಡ್ರಮ್‌ನಲ್ಲಿ ಕೆಮಿಕಲ್ ಸುರಿದಿರುವುದು ಪತ್ತೆಯಾಗಿಯಾಗಿದೆ.

ಘಟನೆ ಸಂಬಂಧ ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಗುರುತು ಹಚ್ಚುವ ಕಾರ್ಯ ನಡೆಯುತ್ತಿದೆ. ಯಾವಾಗಲು ಜನರಿಂದ ತುಂಬಿರುವ ರೈಲು ನಿಲ್ದಾಣದಲ್ಲಿ ಇಂತಹ ಒಂದು ಘಟನೆ ನಡೆದಿರುವುದು ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದೆ.

English summary
Cleaning staff found decomposed body inside a can kept on platform in Yeshwantpur railway station in Bengaluru; Police Probe On. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X