ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಸ ಕಿತ್ತಾಟ: ಬಿಬಿಎಂಪಿ ವಿರುದ್ಧ ಸ್ವಯಂಪ್ರೇರಿತ ದೂರು

By Ashwath
|
Google Oneindia Kannada News

ಬೆಂಗಳೂರು, ಜೂ.16: ಮಂಡೂರು ತಾಜ್ಯ ವಿಲೇವಾರಿ ಘಟಕದ ಸಮಸ್ಯೆಯನ್ನು ನಿಭಾಯಿಸುವಲ್ಲಿ ವಿಫಲವಾದ ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಕಳೆದ ವಾರ ಭೇಟಿ ನೀಡಿ ಪರಿಶೀಲಿಸಿದ್ದ ಉಪಲೋಕಾಯುಕ್ತ ನ್ಯಾ. ಮಜಗೆ ಜೂ.16 ಸೋಮವಾರ ಮತ್ತೊಮ್ಮೆ ಮಂಡೂರಿಗೆ ತೆರಳಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು.[ಮಂಡೂರು: ಪ್ರಾಣ ಕೊಟ್ಟೇವು, ಕಸ ಹಾಕಲು ಬಿಡೆವು]

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪಲೋಕಾಯುಕ್ತರು' ಮಂಡೂರು ಜನರ ಕಷ್ಟ ನನಗೆ ಅರ್ಥ‌ವಾಗಿದೆ. ಸಮಸ್ಯೆ ನಿವಾರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಹೀಗಾಗಿ ನಾವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದೇವೆ. ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಹತ್ತು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದು ಹೇಳಿದರು.

ಮಂಡೂರಿನಲ್ಲಿ ಅಮರಣಾಂತ ಉಪವಾಸ ಕೈಗೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಮಂಡೂರು ಜನರ ಪರವಾಗಿ ಪ್ರತಿಭಟನೆ ನಡೆಯಿತು. ಟೌನ್‌ ಹಾಲ್‌ ಸಮೀಪ ಭ್ರಷ್ಟಾಚಾರ ನಿರ್ಮೂ‌ಲನ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ, ಆಮ್‌ ಆದ್ಮಿ ಪಕ್ಷದ ನಾಯಕಿ ಬಿ.ಟಿ.ಲಲಿತಾ ನಾಯಕ್‌ ಸೇರಿದಂತೆ ಎಎಪಿ ಕಾರ್ಯ‌ಕರ್ತರು ಭಾಗವಹಿಸಿದ್ದರು.

ಸಿಎಂ ಗರಂ: ಸರ್ಕಾರದಿಂದ ಎಲ್ಲಾ ಸೌಲಭ್ಯ ಪಡೆದುಕೊಳ್ಳುವ ನೀವು ನಗರದ ಕಸ ಸಮಸ್ಯೆಯನ್ನು ಬಗೆಹರಿಸಲು ನಿಮಗೇನು ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳನ್ನು ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯವರು ಬಿಬಿಎಂಪಿ ಅಧಿಕಾರಿಗಳ ಕೆಲಸದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಿದರು. ನಿಮಗೆ ಕಾರು, ಮೊಬೈಲ್, ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಿದ್ದೇವೆ. ಆದರೂ ಕಸದ ಸಮಸ್ಯೆ ಏಕೆ ಬಗೆಹರಿದಿಲ್ಲ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.

ಬಿಬಿಎಂಪಿಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ಪಟ್ಟಿಯನ್ನು ಕಳುಹಿಸಿ ಕೊಡಿ. ಅವರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಕ್ತ ಲಕ್ಷ್ಮೀನಾರಾಯಣ್ ಅವರಿಗೆ ಹೇಳಿದ್ದಾರೆ.[ಜಾತಿ ವಿಷಯ ಪ್ರಸ್ತಾಪಿಸಿ ಹೆದರಿಸುತ್ತಾರೆ: ಮೇಯರ್‌]

English summary
Upa Lokayukta Justice S B Majage on Monday directed Bruhat Bangalore Mahanagara Palike (BBMP) authorities to clear accumulated waste at Mandur. People there are suffering. Disposing the waste should be considered as an emergency. If you (BBMP) take two to three years to clear it, should the villagers suffer till then?” the Upa Lokayukta questioned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X