• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿದ್ದರಾಮಯ್ಯ ನಿವಾಸಕ್ಕೆ ಕ್ವಾರಂಟೈನ್ ಸ್ಟಿಕ್ಕರ್!

|

ಬೆಂಗಳೂರು, ಆ. 04: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರು, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದಾರೆ.

ಬೆಂಗಳೂರಿನ ಶಿವಾನಂದವೃತ್ತದ ಬಳಿಯ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜೊತೆಗೆ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ 13 ಮಂದಿ ಸಿಬ್ಬಂದಿ, ಮೂವರು ಪೊಲೀಸರು ಹಾಗೂ ಇಬ್ಬರು ಕಾರಿನ ಚಾಲಕರಿಗೆ ಆ್ಯಂಟಿಜೆನ್ ಪರೀಕ್ಷೆ ಮಾಡಲಾಗಿದ್ದು, ವರದಿ ಇನ್ನೂ ಬರಬೇಕಿದೆ. ಪರೀಕ್ಷೆಗೆ ಒಳಗಾಗಿರುವ ಅಡುಗೆ ಭಟ್ಟರು, ಕಾರು ಚಾಲಕರು, ಕೆಲಸಗಾರರನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರಾದ ಪಲ್ಲವಿ ಹಾಗೂ ಆರೋಗ್ಯ ಇಲಾಖೆಯ ವೈದ್ಯರು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮನೆಯವರಿಂದ ಮಾಹಿತಿ ಪಡೆದಿದ್ದಾರೆ.

ಸಿದ್ದರಾಮಯ್ಯ ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನೂ ಆರೋಗ್ಯ ಇಲಾಖೆ ಸಿಬ್ಬಂದಿ ಪಡೆದು ಕೊಂಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರಿಗೆ ಯಾರಿಂದ ಸೋಂಕು ಬಂದಿರಬಹುದು ಎಂದು ಕೊವಿಡ್ ಸೋಂಕಿನ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನ ನಡೆಸಿದ್ದಾರೆ.

ಪಕ್ಕದಲ್ಲಿನ ಸಚಿವ ಈಶ್ವರಪ್ಪ ಅವರ ನಿವಾಸವನ್ನೂ ಸ್ಯಾನಿಟೈಸ್ ಮಾಡಲಾಗಿದೆ. ಬಿಬಿಎಂಪಿ ಸಿಬ್ಬಂದಿ ಸಿದ್ದರಾಮಯ್ಯ ಅವರ ಮನೆ, ಮನೆಯ ಸುತ್ತಲೂ ರಾಸಾಯನಿಕ ಸಿಂಪಡಣೆ ಮಾಡಿದ ಬಳಿಕ, ಪಕ್ಕದಲ್ಲಿನ ಈಶ್ವರಪ್ಪ ನಿವಾಸ ಅವರ ಸರ್ಕಾರಿ ನಿವಾಸವನ್ನೂ ಸ್ಯಾನಿಟೈಸ್ ಮಾಡಿದ್ದಾರೆ.

English summary
A close aide of opposition leader Siddaramaiah, the staff at home has been tested for antigen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X