ರೇಸ್‌ಕೋರ್ಸ್ ರಸ್ತೆಗೆ 'ರೆಬೆಲ್ ಸ್ಟಾರ್' ಅಂಬರೀಷ್ ಹೆಸರಿಡಲು ಸಿಎಂ ಒಪ್ಪಿಗೆ
ಬೆಂಗಳೂರು ರೇಸ್ ಕೋರ್ಸ್‌ಗೆ ದಿವಂಗತ ನಟ ಅಂಬರೀಷ್ ಅವರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ಬೆಂಗಳೂರು ಫೆಬ್ರವರಿ 7: ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ದಿವಂಗತ ನಟ ಅಂಬರೀಶ್ ಹೆಸರು ಇಡುವ ಬೇಡಿಕೆ ಕೊನೆಗೂ ನೆರೆವೇರಿದೆ. ಬೆಂಗಳೂರು ರೇಸ್ ಕೋರ್ಸ್‌ಗೆ ದಿವಂಗತ ನಟ ಅಂಬರೀಷ್ ಅವರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ಈಗಾಗಲೇ ಬೆಂಗಳೂರಿನ ಹಲವು ರಸ್ತೆಗಳಿಗೆ ಕನ್ನಡ ಚಿತ್ರರಂಗದ ಹೆಸರಾಂತ ತಾರೆಯರ ಹೆಸರುಗಳನ್ನು ಇಡಲಾಗಿದೆ. ಈಚೆಗಷ್ಟೇ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಡಾ. ಪುನೀತ್ ರಾಜ್‌ಕುಮಾರ್ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ 'ರೆಬೆಲ್ ಸ್ಟಾರ್' ಅಂಬರೀಷ್ ಅವರ ಹೆಸರನ್ನು ಇಡುವಂತೆ ಕೇಳಲಾಗಿತ್ತು.
ಬೆಂಗಳೂರಿನ ರಾಮ್ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದ ರಾವ್ ವೃತ್ತದವರೆಗಿನ ರಸ್ತೆಗೆ 'ರೆಬೆಲ್ ಸ್ಟಾರ್' ಅಂಬರೀಷ್ ಅವರ ಹೆಸರು ಇಡುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬಿಬಿಎಂಪಿಗೆ ಮನವಿ ಮಾಡಿತ್ತು.

'ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಖ್ಯಾತ ಕಲಾವಿದ ರೆಬೆಲ್ ಸ್ಟಾರ್' ಡಾ. ಅಂಬರೀಶ್ ಅವರಿಗೆ 70 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಾನ್ ಸಾಧಕರಾದ ಡಾ. ಅಂಬರೀಶ್ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕೆಂಬುದು ಚಲನಚಿತ್ರೋದ್ಯಮದವರೆಲ್ಲರ ಮಹದಾಸೆಯಾಗಿದೆ. ಆದ್ದರಿಂದ ತಾವು ದಯಮಾಡಿ ಚಿತ್ರೋದ್ಯಮದೊಂದಿಗೆ ಕೈಜೋಡಿಸುವ ಮೂಲಕ ಸಹಕರಿಸಬೇಕಾಗಿ ತಮ್ಮಲ್ಲಿ ನಮ್ಮ ಸವಿನಯ ಪ್ರಾರ್ಥನೆ, ಈಗಾಗಲೇ ಸನ್ಮಾನ್ಯ ಮುಖ್ಯಮಂತಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿದೆ ಎಂಬ ವಿಷಯವನ್ನು ತಮ್ಮ ಆದ್ಯ ಗಮನಕ್ಕೆ ತರಬಯಸುತ್ತೇವೆ..' ಎಂದು ಬಿಬಿಎಂಪಿಗೆ ನೀಡಿರುವ ಮನವಿ ಪತ್ರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ತಿಳಿಸಿತ್ತು.

ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್, ಮನವಿ ಪತ್ರವನ್ನು ನೀಡಿದರು. ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿರುವ ಅಂಬರೀಶ್ ಅವರಿಗೆ ರಸ್ತೆಗೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿತ್ತು. ಸದ್ಯ ಇದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾಹಿತಿ ಹೊರಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications