ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಕೊವಿಡ್ ಉಸ್ತುವಾರಿ ಬದಲಿಸಿದ ಸಿಎಂ, ರಾಜ್ಯದ ಜನತೆ ಸುಸ್ತು!

|
Google Oneindia Kannada News

ಬೆಂಗಳೂರು, ಜುಲೈ 4: ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‌ಡೌನ್‌ ಮಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

Recommended Video

Covaxin to be out in market from Aug 15th, ಆಗಸ್ಟ್ 15ಕ್ಕೆ ಸ್ವದೇಶಿ ಲಸಿಕೆ ಬಿಡುಗಡೆ|Oneindia Kannada

ಕಳೆದ ಕೆಲ ದಿನಗಳಿಂದ ಈಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್‌ಡೌನ್‌ ಮಾಡುವಂತೆ ಇಂದು ಮಧ್ಯಾಹ್ನ ನಡೆದ ಕೋವಿಡ್‌ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಂತ್ರಿಯವರು ಸೂಚನೆ ನೀಡಿದರು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ಅಂತರ್ ಜಿಲ್ಲಾ ಓಡಾಟ ನಿರ್ಬಂಧ; ರಾಜ್ಯ ಸಿಎಂ ಸಚಿವಾಲಯದ ಸ್ಪಷ್ಟನೆಅಂತರ್ ಜಿಲ್ಲಾ ಓಡಾಟ ನಿರ್ಬಂಧ; ರಾಜ್ಯ ಸಿಎಂ ಸಚಿವಾಲಯದ ಸ್ಪಷ್ಟನೆ

ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಎಲ್ಲಾ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ಕನಾ೯ಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್‌ ರೋಗವನ್ನು ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾಯ೯ನಿವ೯ಹಿಸಬೇಕು ಎಂದು ತಿಳಿಸಿದ್ದಾರೆ ಎಂದರು. ಮುಂದೆ ಓದಿ....

ಕೊರೊನಾ ಜವಾಬ್ದಾರಿ ಹಂಚಿಕೆ

ಕೊರೊನಾ ಜವಾಬ್ದಾರಿ ಹಂಚಿಕೆ

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಅಧಿಕಾರ ಹಂಚಿಕೆ ಆಗಿದೆ. ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ಆರ್ ಅಶೋಕ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಗೆ ವಹಿಸಲಾಗಿದೆ. ನೀತಿ ರೂಪಿಸುವುದು, ಮಾದ್ಯಮಗಳಿಗೆ ಮಾಹಿತಿ ಕೊಡುವುದು ವಾರ್ ರೂಂ ಜವಾಬ್ದಾರಿ ಡಾ. ಸುಧಾಕರ್ ಹೆಗಲಿದೆ. ಹಾಗೂ ಕೋವಿಡ್ ಕೇರ್ ಸೆಂಟರ್ ಗಳ ಸ್ಥಾಪನೆ ಮತ್ತು ನಿರ್ವಹಣೆ ಡಾ. ಅಶ್ವಥ್ ನಾರಾಯಣ ಅವರಿಗೆ ನೀಡಲಾಗಿದೆ.

ಪಾರದಶ೯ಕ ಕಾರ್ಯನಿರ್ವಹಣೆಗೆ ಹೊತ್ತು

ಪಾರದಶ೯ಕ ಕಾರ್ಯನಿರ್ವಹಣೆಗೆ ಹೊತ್ತು

ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದಶ೯ಕ ರೀತಿಯಲ್ಲಿ ಕಾಯಾ೯ಚರಿಸಬೇಕು. ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಕೋವಿಡ್‌ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ನೀತಿ ನಿರೂಪಣೆ, ಮಾಗ೯ಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್‌ ರೂಮ್‌ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳ ಸ್ಥಾಪನೆ ಮತ್ತು ನಿವ೯ಹಣೆಯನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಲಾಗಿದೆ. ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್‌ ಅವರಿಗೆ ಖಾಸಗಿ ಆಸ್ಪತ್ರೆಗಳ ನಿವ೯ಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.

ಕಳಪೆ ಪಿಪಿಇ ಕಿಟ್‌ ಬಳಕೆ, ಕಾನೂನು ಕ್ರಮ

ಕಳಪೆ ಪಿಪಿಇ ಕಿಟ್‌ ಬಳಕೆ, ಕಾನೂನು ಕ್ರಮ

ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್‌ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮಪ೯ಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸದ್ಯಕ್ಕಿಲ್ಲ ಲಾಕ್‌ಡೌನ್‌

ಸದ್ಯಕ್ಕಿಲ್ಲ ಲಾಕ್‌ಡೌನ್‌

ಟಾಸ್ಕ್‌ಫೋಸ್‌೯ ಸಭೆಯಲ್ಲಿ ಲಾಕ್‌ಡೌನ್‌ ವಿಚಾರವು ಚಚೆ೯ಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್‌ಡೌನ್‌ ಬೇಕಿಲ್ಲ ಎಂದು ತಾವು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಅವರು ಸಿಎಂ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿಧಾ೯ರ ಕೈಗೊಳ್ಳಲಿದ್ದಾರೆ. ಈಗಾಗಲೇ ಸಿಎಂ ಅವರು ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ಯೂ೯ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಿಎಂ ನೇತೃತ್ವದಲ್ಲಿ ನಡೆದ ಟಾಸ್ಕ್‌ಫೋಸ್‌೯ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌, ಸಿಎಂ ಅವರ ರಾಜಕೀಯ ಕಾಯ೯ದಶಿ೯ ಎಸ್‌. ಆರ್. ವಿಶ್ವನಾಥ್‌ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.

English summary
CM chairs task force meeting: allocates responsibility to ministers for covid management. CM has instructed strict lockdown in containment zones- Minister Sudhakar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X