ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಲ್ಲಾಡಳಿತ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ನೀಡಿದ ಸೂಚನೆಗಳೇನು?

|
Google Oneindia Kannada News

ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸತತ ಎರಡನೇ ದಿನವೂ ಜಿಲ್ಲಾಡಳಿತ ಸಂಭೆ ಮುಂದುವರೆದಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನಗರಾಭಿವೃದ್ಧಿ ಇಲಾಖೆಯ ಭೂಮಿ ಮತ್ತು ಕಟ್ಟಡ ನಕ್ಷೆ ಅನುಮೋದನೆ ತಂತ್ರಾಂಶ ಹಾಗೂ ವೆಬ್ ಸೈಟ್ ಗಳಿಗೆ ಚಾಲನೆ ನೀಡಿದರು. ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಹಿರಿಯ ಅಧಿಕಾರಿಗಳು ಹಾಜರಿದ್ದರು.

Cm and other ministers conducted district administrators meeting

ಸಭೆಯ ಪ್ರಮುಖ ಅಂಶಗಳು ಹೀಗಿವೆ.
-ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನದ ಶೇ. 75 ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

-ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಗಳಿಗೆ ಮಂಜೂರಾದ 4080 ಕಾಮಗಾರಿಗಳಲ್ಲಿ 765 ಪೂರ್ಣಗೊಂಡಿದೆ. 1939 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸೂಚಿಸಿದರು.

-ಎಲ್ಲ ಜಿಲ್ಲೆಗಳಳಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

-ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಲು ಅನುವಾಗುವಂತೆ ತುರ್ತಾಗಿ ಭರ್ತಿ ಮಾಡುವ ಅಗತ್ಯವಿರುವ ಹುದ್ದೆಗಳಿಗೆ ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Cm and other ministers conducted district administrators meeting

-ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಯಿತು.

-ದೇವರಾಜ ಅರಸು ವಸತಿ ಯೋಜನೆಯಡಿ ದಮನಿತರು, ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಎಂದು ಸೂಚಿಸಲಾಯಿತು.

ನಿಗದಿ ಪಡಿಸಲಾಗಿರುವ 63,196 ಗುರಿಗೆ ಎದುರಾಗಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಶೀಘ್ರವೇ ಆಸಕ್ತಿ ವಹಿಸಿ, ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

-ಮುಖ್ಯಮಂತ್ರಿ ಗಳ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಕೂಡಲೇ ಜಮೀನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

English summary
Chief Minister HD Kumarasway instructed to district administration to expedite the work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X