ಸ್ಪೀಕರ್ ರಮೇಶ್ ಕುಮಾರ್ ಸಮಾಧಾನ ಪಡಿಸುವಂತೆ ಸಿಎಸ್‌ಗೆ ಎಚ್ಡಿಕೆ ಸೂಚನೆ
ಬೆಂಗಳೂರು, ಜೂನ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಆಗಿರುವ ಅವಮಾನ ಸರಿಪಡಿಸುವಂತೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಗುರುವಾರ ಬೆಳಗ್ಗೆ ಸಭೆ ನಡೆಸಿದ ಅವರು, ರಮೇಶ್ ಕುಮಾರ್ ಜತೆ ಖುದ್ದು ಚರ್ಚಿಸಿ, ಬೇಸರ ಹೋಗಾಲಾಡಿಸಲು ಕ್ರಮ ಕೈಗೊಳ್ಳುವಂತೆ ರತ್ನಪ್ರಭಾ ಅವರಿಗೆ ಸಲಹೆ ನೀಡಿದ್ದಾರೆ.
ಬುಧವಾರ ರಾಜಭವನದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಭವನದೊಳಗೆ ಪ್ರವೇಶ ಮಾಡಲು ಬಿಡದೆ ಪೊಲೀಸ್ ಅಧಿಕಾರಿಗಳು ಅವಮಾನ ಮಾಡಿದ್ದರು. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದರು.

ಅದರಲ್ಲಿ ನಾನು ರಾಜ ಭವನಕ್ಕೆ ಆಹ್ವಾನ ನೀಡಿದ ನಿಮಿತ್ತ ಬಂದಿದ್ದೆ ಆದರೆ ರಾಜಭವನದ ಒಳಗೆ ಅವಕಾಶ ನೀಡದೆ ಪೊಲೀಸರು ಮತ್ತು ಅಲ್ಲಿನ ಅಧಿಕಾರಿಗಳು ದುರಹಂಕಾರವನ್ನು ಮೆರೆದಿದ್ದಾರೆ.ಇಂತಹ ದುರಹಂಕಾರ ವ್ಯವಸ್ಥೆಗೆ ಸರ್ಕಾರ ಕಡಿವಾಣ ಹಾಕದೆ ಹೋದರೆ ಸಾಂವಿಧಾನಿಕ ಹುದ್ದೆಯಲ್ಲಿರುವ ತಮಗೆ ಹಾಗೂ ಸರ್ಕಾರಕ್ಕೆ ಅವಮಾನವಾದಂತೆ ಎಂದು ಬರೆದಿದ್ದಾರೆ.
ಸರ್ಕಾರದ ಈ ಅಕ್ಷಮ್ಯ ಅಪರಾಧವನ್ನು ಮನ್ನಿಸುವುದಿಲ್ಲ ಎಂದು ಪತ್ರದಲ್ಲಿ ಖಾರವಾಗಿ ಎಚ್ಚರಿಕೆ ನೀಡಿದ್ದರು. ಈ ಕುರಿತು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಸಭೆ ಕರೆದು ಸ್ಪೀಕರ್ ರಮೇಶ್ ಕುಮಾರ್ ಮನವೊಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಲಹೆ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications