ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಹಾಸ್ಟೆಲ್ ಗಳಿಗೆ ಬರಲಿದೆಯೇ ಶುಕ್ರದೆಸೆ: ವರದಿ ಕೇಳಿದ ಎಚ್ಡಿಕೆ

By Nayana
|
Google Oneindia Kannada News

Recommended Video

ಸರ್ಕಾರಿ ಹಾಸ್ಟೆಲ್ ಸುಧಾರಣೆಗೆ ಸಿ ಎಂ ಕುಮಾರಸ್ವಾಮಿ ಸೂಚನೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 5: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ಸಮಗ್ರ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೂಚಿಸಿದರು.

ಗೃಹಕಚೇರಿ ಕೃಷ್ಣಾದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳನ್ನು ನವೋದಯ ಮಾದರಿ ವಸತಿ ಶಾಲೆಗಳಂತೆ ಉನ್ನತೀಕರಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಪರಿಣತರ ಸಮಿತಿ ರಚಿಸಲಾಗಿದೆ.

ಕೇವಲ 24 ಗಂಟೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಟ್ಟ ಕುಮಾರಸ್ವಾಮಿಕೇವಲ 24 ಗಂಟೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಟ್ಟ ಕುಮಾರಸ್ವಾಮಿ

ಈ ಸಮಿತಿಯು ಎಲ್ಲ ವಸತಿ ನಿಲಯಗಳನ್ನು ನಿರ್ವಹಣೆಯ ಗುಣಮಟ್ಟದ ಆಧಾರದಲ್ಲಿ ವರ್ಗೀಕರಣ ಮಾಡಲಿದ್ದು 3 ತಿಂಗಳಲ್ಲಿ ವರದಿ ನೀಡಲಿದೆ. ಇದರ ಆಧಾರದಲ್ಲಿ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ನಿರ್ವಹಣೆ, ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದರು.

CM asks report on govt hostel rejuvenation in three months

ಇಲಾಖೆಯಲ್ಲಿ ವಸತಿನಿಲಯಗಳು, ವಸತಿ ಶಾಲೆಗಳ ನಿರ್ವಹಣೆಗೆ ನಿಖರ ಮಾರ್ಗಸೂಚಿಗಳನ್ನು ರೂಪಿಸುವಂತೆ ಹಾಗೂ ಅವುಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಪ್ರಸಕ್ತ ವರ್ಷ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಗಳಿಗೆ ಒಟ್ಟು 29,209.47 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಈ ಅನುದಾನ ಅರ್ಹರನ್ನು ತಲುಪುವಂತೆ ಯೋಜನೆ ರೂಪಿಸಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದರಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವವುದು ಎಂದು ಎಚ್ಚರಿಸಿದರು.

ಸಮನ್ವಯ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ-ಎಚ್‌ಡಿಕೆ ಜಟಾಪಟಿಸಮನ್ವಯ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ-ಎಚ್‌ಡಿಕೆ ಜಟಾಪಟಿ

ಕಳೆದ ನೂರು ದಿನಗಳಲ್ಲಿ ಇಲಾಖೆಯು ಹಲವು ಪ್ರಮುಖ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಇಲಾಖೆಯ ಕುಂದುಕೊರತೆ ನಿವಾರಣೆಗಾಗಿ ಪ್ರಾರಂಭಿಸಿರುವ ಕಲ್ಯಾಣ ಕೇಂದ್ರ ಎಂಬ ಕಾಲ್ ಸೆಂಟರ್ ಪ್ರಾರಂಭಿಸಿದ್ದು ಪ್ರತಿ ದಿನ ಸಾವಿರಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಲಾಗುತ್ತಿದೆ.

ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಡಿಬಿಟಿ ಪೋರ್ಟಲ್ ಪ್ರಾರಂಭಿಸಲಾಗಿದ್ದು, ಇದರಿಂದ ವಿದ್ಯಾರ್ಥಿ ವೇತನ ಹಂಚಿಕೆಯನ್ನು ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿದೆ. ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿರುವ ಆದಿವಾಸಿ ಜನರ ಆರೋಗ್ಯ ಸಂರಕ್ಷಣೆಗಾಗಿ ಪ್ರಥಮ ಬಾರಿಗೆ 17 ಸಂಚಾರಿ ಆರೋಗ್ಯ ಘಟಕಗಳನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಅರೆ ಅಲೆಮಾರಿ/ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸೂಚನೆ ನೀಡಿದರು. ಇವರ ಆರೋಗ್ಯ ಕಾಳಜಿ, ಜೀವನೋಪಾಯ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಹಾಜರಿದ್ದರು.

English summary
Chief minister H.D.Kumaraswamy has asked detailed study report of state government sponsored hostels to rejuvenation within three months. He also directed the state owned residential schools should be operate in the line of Navodaya and Sainik schools as well.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X