ತಿಂಗಳೊಳಗೆ ಎಲಿವೇಟೆಡ್ ಪೆರಿಫೆರಲ್ ರಸ್ತೆ ಕಾಮಗಾರಿ: ಎಚ್ಡಿಕೆ ಘೋಷಣೆ
ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವುದರ ಜತೆಗೆ ಬೆಂಗಳೂರು ನಗರ ವಾಸಿಗಳು ಅನುಭವಿಸುತ್ತಿರುವ ಸಮಸ್ಯೆಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಮೀಟ್ ದಿ ಪ್ರೆಸ್ ನಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಸಿದ್ಧಪಡಿಸಿದ್ದೆ ಆದರೆ 12 ವರ್ಷ ಕಳೆದರೂ ಯೋಜನೆ ಇನ್ನೂ ಚರ್ಚೆಯ ಹಂತದಲ್ಲಿದೆ. ಶೀಘ್ರ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.
ಬೆಂಗಳೂರಿನ ಪ್ರಮುಖ ರಸ್ತೆಗಳಿಗೆಲ್ಲ ಸಿಸಿಟಿವಿ ಅಳವಡಿಸಲಾಗುತ್ತದೆ, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ರಸ್ತೆಗಳಿಗೂ ಸುಮಾರು 3 ಸಾವಿರ ಕೋಟಿ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಲಾಗುತ್ತದೆ ಎಂದು ಹೇಳಿದರು.

ಸರ್ಕಾರದ ಬಜೆಟ್‌ನಲ್ಲಿಯೇ ಹಣವನ್ನು ನೀಡಬೇಕಿತ್ತು ಸಚಿವ ಸಂಪುಟ ಒಪ್ಪಿಗೆ ಪಡೆದು ಇನ್ನೊಂದು ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ, ಮುಂದಿನ ಮೂರು ವರ್ಷದಲ್ಲಿ 6500 ಕೋಟಿ ರೂ ಹಣ ರಸ್ತೆ ಅಭಿವೃದ್ಧಿಗೆ ನೀಡುತ್ತೇನೆ ಎಂದರು.












Click it and Unblock the Notifications