ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೊಮ್ಮಾಯಿ ಬಸ್ ರೌಂಡ್ಸ್ ಬಳಿಕ ಬಂಪರ್ ಕೊಡುಗೆ

|
Google Oneindia Kannada News

ಬೆಂಗಳೂರು, ಮೇ 19: ನಗರದ ಬೃಹತ್ ಮಳೆ ನೀರು ಕಾಲುವೆ ಗಳನ್ನು (Strom water drain) 1600 ಕೋಟಿ ರೂ.ಗಳ ವೆಚ್ಚದಲ್ಲಿ ಆಧುನಿಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಳೆದ ಬಾರಿ ಮಳೆಯಾದಾಗ ಎಲ್ಲಾ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಹಲವು ತೀರ್ಮಾನಗಳನ್ನು ಮಾಡಿದ್ದೆವು. ಈ ಪೈಕಿ ಮಳೆ ನೀರು ಕಾಲುವೆಗಳನ್ನು ಅಭಿವೃದ್ಧಿ ಮಾಡುವುದು ಎಂದು ತೀರ್ಮಾನಿಸಲಾಗಿತ್ತು. ಇದಕ್ಕೆ ಡಿಪಿಆರ್ ಸಿದ್ಧವಾಗಿ ಬಜೆಟ್ ನಲ್ಲಿ ಈಗಾಗಲೇ ಅನುಮೋದನೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಡಿಪಿಆರ್ ಪೂರ್ಣಗೊಂಡ ಕೂಡಲೆ ಅನುಮೋದನೆ ನೀಡಿ ಕೆಲಸ ಪ್ರಾರಂಭಿಸಲಾಗುವುದು ಎಂದರು.

ರಾಜಕಾಲುವೆ ಪ್ರದೇಶದಲ್ಲಿ ಮನೆಗಳ ತೆರವು ಕಾರ್ಯವನ್ನು ಸಮರೋಪಾದಿಯಲ್ಲಿ ಮಾಡಲಾಗುವುದು. ಬೆಂಗಳೂರು ಈಗ ಬಿಬಿಎಂಪಿ ಆಗಿದೆ. ಬೆಂಗಳೂರಿನ ಆಡಳಿತಾತ್ಮಕ ರಚನೆಯನ್ನು ವಿಕೇಂದ್ರೀಕರಣಗೊಳಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಮುಖ್ಯಮಂತ್ರಿಗಳು ಮಹಾಲಕ್ಷ್ಮೀ ಲೇಔಟ್ ವಿಧಾನಸಭೆ ಕ್ಷೇತ್ರದ ಜೆ.ಸಿ.ನಗರ ವಾರ್ಡ್, ಲಗ್ಗೆರೆ, ನಂತರ ನಾಗವಾರ ಮೆಟ್ರೋ ಸ್ಟೇಶನ್, ಹೆಚ್.ಬಿ.ಆರ್ 5 ನೇ ಬ್ಲಾಕ್ ಹಾಗೂ ಹೆಬ್ಬಾಳ ಎಸ್.ಟಿ ಪಿ ಘಟಕಕ್ಕೆ ಸಿಎಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

400 ಕೋಟಿ ರೂ. ಮೋರಿಗಳಿಗೆ ಮೀಸಲು

400 ಕೋಟಿ ರೂ. ಮೋರಿಗಳಿಗೆ ಮೀಸಲು

ಹೂಳು ತುಂಬಿ ಪ್ರವಾಹಕ್ಕೆ ಕಾರಣವಾಗಿರುವ ಕಡೆ ಹಳೆ ಚರಂಡಿಗಳ ಕಟ್ಟಡಗಳನ್ನು ಕಟ್ಟಲು ಅನುಮತಿ ನೀಡಲಾಗಿದೆ. ತುರ್ತಾಗಿ ಹೂಳೆತ್ತುವ ಕೆಲಸ ಆಗಬೇಕಿದೆ. ಮುಖ್ಯ ಚರಂಡಿಯ ಹೂಳೆತ್ತುವ ಕಾರ್ಯವನ್ನು ಸಮಗ್ರವಾಗಿ ಮಾಡಬೇಕು. ಇದಕ್ಕಾಗಿ 400 ಕೋಟಿ ರೂ. ಮೀಸಲಿಡಲಾಗಿದೆ. ಹೆಚ್.ಬಿ.ಆರ್ ಬಡಾವಣೆಯ ಚರಂಡಿಯ ಸುಮಾರು 2.50 ಕಿಮಿ ಹೂಳೆತ್ತಲು ಸೂಚಿಸಲಾಗಿದೆ. ಚರಂಡಿ ಪಕ್ಕದಲ್ಲಿರುವ ವಾರ್ಡ್‍ಗಳಲ್ಲಿ ದ್ವಿತೀಯ ಮತ್ತು ತೃತೀಯ ಚರಂಡಿಗಳನ್ನೂ ಕೂಡ ಹೂಳೆತ್ತಲು ಆದೇಶ ನೀಡಲಾಗಿದೆ. ಮುಖ್ಯ ಚರಂಡಿಗೆ ಸರ್ಕಾರ ಅನುದಾನವನ್ನು ಒದಗಿಸುತ್ತದೆ. ದ್ವಿತೀಯ ಮತ್ತು ತೃತೀಯ ಚರಂಡಿಗಳನ್ನು ಬಿಬಿಎಂಪಿ ಅನುದಾನದಲ್ಲಿ ಸ್ವಚ್ಛ ಮಾಡಲು ಸೂಚಿಸಲಾಗಿದೆ. ಎಸ್.ಟಿ.ಪಿ ಪ್ಲಾಂಟ್ ಸಾಮರ್ಥ್ಯವನ್ನು 40 ಎಂಎಲ್ ಡಿ ಗೆ ಹೆಚ್ಚಿಸಲು ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

50 ವರ್ಷದಲ್ಲಿ ಇಷ್ಟ ಪ್ರಮಾಣದ ಮಳೆ ಆಗಿಲ್ಲ:

50 ವರ್ಷದಲ್ಲಿ ಇಷ್ಟ ಪ್ರಮಾಣದ ಮಳೆ ಆಗಿಲ್ಲ:

ಅತ್ಯಂತ ಕಡಿಮೆ ಅವಧಿಯಲ್ಲಿ ದೊಡ್ಡ ಪ್ರಮಾಣದ ಮಳೆ ಬಿದ್ದಿದೆ. ಕಳೆದ 40-50 ವರ್ಷಗಳಲ್ಲಿ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಮೇ ತಿಂಗಳಲ್ಲಿ 15 ದಿನಗಳಲ್ಲಿ ಆಗುವಷ್ಟು ಮಳೆ 4-5 ಗಂಟೆಗಳಲ್ಲಿ ಆಗಿದೆ. ಎಲ್ಲಾ ತಗ್ಗು ಪ್ರದೇಶಗಳಲ್ಲಿ ಸಹಜವಾಗಿ ಮಳೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಮಳೆ ಬಿದ್ದಾಗ ಪ್ರವಾಹವು ಕಳೆದ ಮೂರು ನಾಲ್ಕು ದಶಕಗಳಿಂದ ಆಗುತ್ತಿದೆ. ಇದ್ದಕ್ಕೆ ಒಂದೆಡೆ ಹಲವಾರು ಪರಿಹಾರಗಳಾಗುತ್ತಿದ್ದರೂ, ಮತ್ತೊಂದೆಡೆ ನಗರ ಬೆಳೆಯುತ್ತಿದೆ. ಪರಿಹಾರಗಳೂ ಸಮಗ್ರವಾಗಿ ಪ್ರವಾಹದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ ಎಂದರ

ಮನೆಗೆ ನೀರು ನುಗ್ಗಿದರೆ 25 ಸಾವಿರ ಪರಿಹಾರ:

ಮನೆಗೆ ನೀರು ನುಗ್ಗಿದರೆ 25 ಸಾವಿರ ಪರಿಹಾರ:

ಮುಖ್ಯ ಚರಂಡಿ ಇರುವ ಪ್ರದೇಶದಲ್ಲಿ ಮನೆ ನಿರ್ಮಿಸಿದ್ದರೆ, ಸಮಸ್ಯೆಯಾಗುತ್ತದೆ. ನೀರು ಹರಿಯಲು ಅಡಚಣೆಯಾಗುವಂತೆಯೂ ಈ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಿಸಿಕೊಂಡಿದ್ದಾರೆ. ಅಕ್ರಮ ಮನೆಗಳನ್ನು ತೆರವುಗೊಳಿಸಿ ಸರಾಗವಾಗಿ ನೀರು ಹರಿಯಲು ವ್ಯವಸ್ಥೆ ಮಾಡಲಾಗುವುದು. ಮಳೆನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಮನೆಗಳನ್ನು ಗುರುತಿಸಿ ಇವತ್ತಿನಿಂದಲೇ ಡಿಬಿಟಿ ಮುಖಾಂತರ ಸಂತ್ರಸ್ತರಿಗೆ ತಲುಪಿಸಲಾಗುವುದು. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಒಂದು ವಾರದ ದಿನಸಿ ಹಾಗೂ ಊಟದ ವ್ಯವಸ್ಥೆ ಮಾಡಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದರು.

ರಾಜ ಕಾಲುವೆ ವ್ಯಾಪ್ತಿಯ ಮನೆ ತೆರವು:

ರಾಜ ಕಾಲುವೆ ವ್ಯಾಪ್ತಿಯ ಮನೆ ತೆರವು:

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಅಭಿವೃದ್ಧಿ ಆಗಬೇಕಿದ್ದು, ಸಮೀಕ್ಷೆ ಕಾರ್ಯ, ಅಂದಾಜು, ವಿನ್ಯಾಸಗಳು ,ಅಡಚಣೆಯ ಸ್ಥಳಗಳನ್ನು ಗುರುತಿಸುವ ಮೂಲ ಕೆಲಸಗಳನ್ನು ಮಾಡಲು ಡಿಪಿಆರ್ ಅನುಮೋದನೆ ಅಗಿದೆ. ರಾಜಕಾಲುವೆ ವ್ಯಾಪ್ತಿಯಲ್ಲಿರುವ ಮನೆಗಳನ್ನುತೆರವುಗೊಳಿಸಬೇಕಿದೆ. ಭಾರಿ ಪ್ರಮಾಣದ ಮಳೆಯಿಂದ 300 ಅಡಿಯ ರಾಜಕಾಲುವೆಯನ್ನೂ ಮೀರಿ ನೀರು ಹರಿದಿದೆ. ಈ ಕಾಲುವೆಗಳು ಹಳೆಯದಾಗಿದ್ದು, ಇಷ್ಟು ದೊಡ್ಡ ಪ್ರಮಾಣದ ಮಳೆನೀರು ಮತ್ತು ಚರಂಡಿ ನೀರನ್ನು ತಡೆಯಲು ಸಾಧ್ಯವಾಗುವುದಿಲ್ಲ. ರಾಜಕಾಲುವೆಗಳನ್ನು ದೊಡ್ಡದು ಮಾಡುವ ಕೆಲಸವಾಗಬೇಕು. ಎಸ್‍ಟಿಪಿ ಘಟಕಗಳನ್ನು ಹೆಚ್ಚಿಸಲಾಗುವುದು. ಮಳೆ ನೀರು ಕಾಲುವೆಗಳಿಗೆ ಎಸ್‍ಟಿಪಿ ಘಟಕಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

English summary
Chief Minister Basavaraj Bommai Bengaluru Rounds: Storm water drains in Bangalore will be modernized at a cost of Rs 1,600 crore says Chief Minister Bommai. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X