ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ. ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 02: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಶನಿವಾರ ಬೆಂಗಳೂರಿನ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ, ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್ 1 ಸ್ಥಾನಕ್ಕೆ ಏರಲಿ ಎಂದರು.

ಅಂತಃಕರಣ, ಮಾನವೀಯತೆ ಬಹಳ ಮುಖ್ಯ
ನಾಡಿನ, ಜನರ ರಕ್ಷಣೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಇಲಾಖೆಯ ಪ್ರಮುಖ ಕರ್ತವ್ಯ. ಇಲಾಖೆಯಲ್ಲಿ ಶಿಸ್ತು, ದಕ್ಷತೆ, ನಿಷ್ಠೆ ಬಹಳ ಮುಖ್ಯ. ದೇಶದಲ್ಲಿ ಕರ್ನಾಟಕ ಪೊಲೀಸ್ ಉನ್ನತ ಸ್ಥಾನದಲ್ಲಿದೆ. ಚುನಾವಣೆ ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪೊಲೀಸ್ ತುಕಡಿ ಕರೆಸುವಾಗ ಕರ್ನಾಟಕಕ್ಕೆ ಆದ್ಯತೆ ನೀಡುತ್ತಾರೆ. ನಿಷ್ಪಕ್ಷಪಾತ, ಮಾನವೀಯತೆ, ಅಂತಃಕರಣ ಹಾಗೂ ನಿಸ್ಪೃಹ ಕರ್ತವ್ಯಕ್ಕೆ ನಮ್ಮ ಪೊಲೀಸ್ ಹೆಸರುವಾಸಿ ಎಂದರು.

ಸಮಾಜದ ಸ್ವಾಸ್ಥ್ಯ, ಶಾಂತಿ ಕಾಪಾಡಲು ತಮ್ಮ ಅಂತಃಕರಣ, ಮಾನವೀಯತೆ ಬಹಳ ಮುಖ್ಯ. ನ್ಯಾಯನಿಷ್ಠುರವಾಗಿ ಕೆಲಸ ಮಾಡಬೇಕು. ಫೋರೆನ್ಸಿಕ್ ಪ್ರಯೋಗಾಲಯ ಅಪರಾಧಿಗಳ ಶೋಧನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೋರ್ಟ್‌ಗಳು ಅದರ ವರದಿಗೆ ಮಹತ್ವ ನೀಡುತ್ತದೆ. ಬೆಂಗಳೂರಿನಲ್ಲಿ ನಾರ್ಕೋಟಿಕ್ಸ್, ಸೈಬರ್ ಹಾಗೂ ಫೋರೆನ್ಸಿಕ್ ಲ್ಯಾಬ್‌ವುಳ್ಳ ಠಾಣೆಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿ, ಬಳ್ಳಾರಿಯಲ್ಲಿಯೂ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿವಮೊಗ್ಗ ಮುಂತಾದ ಕಡೆಗಳಲ್ಲಿಯೂ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಇಂಟೆಲಿಜೆನ್ಸ್ ಸದೃಢತೆಗೆ ಕ್ರಮ
ಪೊಲೀಸರ ಬುದ್ಧಿವಂತಿಕೆಯೂ ಮುಖ್ಯ ಹೊಸ ತರಬೇತಿ ವ್ಯವಸ್ಥೆ ಮತ್ತು ಸಿಬ್ಬಂದಿ ಹೆಚ್ಚಿಸುವ ಮೂಲಕ ಇಂಟೆಲಿಜೆನ್ಸ್‌ನ್ನು ಇನ್ನಷ್ಟು ಸದೃಢ ಮಾಡಲು ಕ್ರಮ ವಹಿಸಲಾಗಿದೆ ಎಂದರು.
ಕಲ್ಯಾಣ ಕಾರ್ಯಕ್ರಮ
ಪೊಲೀಸರ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸ್ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ, ಸೇವೆ, ಬಂದೋಬಸ್ತಿಗೆ ಭತ್ಯೆ, ಬಡ್ತಿಗಳನ್ನು ನೀಡಿದೆ. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಅನುಮೋದನೆ ಹಾಗೂ ಅನುದಾನ ನೀಡಿದೆ. ಪೊಲೀಸರ ಆರೋಗ್ಯಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪೊಲೀಸರ ದಕ್ಷತೆಗೆ ಅನುಗುಣವಾಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ವೇಗವಾಗಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ.

ಆಧುನೀಕರಣ
ಆಧುನೀಕರಣಕ್ಕೆ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಕರ್ನಾಟಕ ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ. ಸೈಬರ್ ಅಪರಾಧ ಮತ್ತು ನಾರ್ಕೋಟಿಕ್ಸ್ ತಡೆಯಲು ದೊಡ್ಡ ಪ್ರಮಾಣದಲ್ಲಿ ಆಧುನೀಕರಣ ಮಾಡುವ ಅವಶ್ಯಕತೆ ಇದೆ. Crime leads the law ಎನ್ನುವುದನ್ನು ಬದಲಾಯಿಸಿ ಕಾನೂನು ಅಪರಾಧಕ್ಕೆ ಮುಂಚಿತವಾಗಿ ರೂಪುಗೊಳ್ಳುವಂತೆ ಆಗಬೇಕು. ಅದಕ್ಕಾಗಿ ಸಿಬ್ಬಂದಿಗಳ ತರಬೇತಿ, ಆಧುನಿಕ ತಂತ್ರಜ್ಞಾನ ಬಳಕೆಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಕರ್ನಾಟಕ ಪೊಲೀಸ್ ಕೈಗೊಂಡಿದೆ.
ಆರ್ಥಿಕ ಅಪರಾಧಗಳನ್ನು ಪತ್ತೆಹಚ್ಚಲು ಎಸ್‌ಎಂಎಸ್ ಮೂಲಕವೇ ಪ್ರಕರಣ ದಾಖಲಿಸಿ ಖಾತೆಗಳನ್ನು ಮುಟ್ಟುಗೋಲು ಹಾಕುವ ಕ್ರಮ ಕೈಗೊಂಡಿದೆ. ಇದರಿಂದ ಕಳ್ಳತನ ನಿಲ್ಲಿಸಲು ಕರ್ನಾಟಕ ಪೊಲೀಸರಿಗೆ ಸಾಧ್ಯವಾಗಿದೆ.
ಡ್ರಗ್ಸ್ ವಿರುದ್ದದ ಸಮರ ನಿರಂತರವಾಗಿರಲಿ
ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಕರ್ನಾಟಕ ಪೊಲೀಸ್ ಅತಿ ಹೆಚ್ಚು ಡ್ರಗ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ನೂತನ ಕಾನೂನಿನ ಅನ್ವಯ ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಡ್ರಗ್ಸ್ ವಿರುದ್ಧದ ಸಮರ ನಿರಂತರವಾಗಿ ನಡೆಯಬೇಕು. ಸಂಪೂರ್ಣವಾಗಿ ನಿಷೇಧವಾಗುವವರೆಗೂ ಪ್ರಯತ್ನ ಜಾರಿಯಲ್ಲಿರಬೇಕು.
Recommended Video
ಶಾಲಾ, ಕಾಲೇಜು, ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಸೈಬರ್ ಅಪರಾಧಗಳನ್ನು ಕಂಡುಹಿಡಿಯಲು ಪೊಲೀಸರಿಗೆ ವಿಶೇಷ ತರಬೇತಿ ನೀಡಬೇಕು. ಕೋವಿಡ್ ಸಂದರ್ಭದಲ್ಲಿ ಪೊಲೀಸರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿರುವುದು ಶ್ಲಾಘನೀಯ ಮತ್ತು ದಾಖಲಾರ್ಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Viral Video: ಬೈಕ್ ಮೇಲೆ ಕುಳಿತಿದ್ದ ಮಹಿಳೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ಕಿರುಕುಳ: ಪುಂಡರ ವಿಡಿಯೋ ವೈರಲ್ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications