ಕಾಂಗ್ರೆಸ್ ಸುಲಿಗೆ ಮಾಡಲು ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್‌ನವರು ಮುಂದೆ ಅಧಿಕಾರಕ್ಕೆ ಬಂದು ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಅವರು ಸುಲಿಗೆ ಮಾಡಲು ಅಧಿಕಾರಕ್ಕೆ ಬರುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು, ಫೆಬ್ರವರಿ 15: ಕಾಂಗ್ರೆಸ್‌ನವರು ಮುಂದೆ ಅಧಿಕಾರಕ್ಕೆ ಬಂದು ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಅವರು ಸುಲಿಗೆ ಮಾಡಲು ಅಧಿಕಾರಕ್ಕೆ ಬರುತ್ತಿದ್ದಾರೆ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಗರಣಗಳ ಬಗ್ಗೆ ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಾದ ಟೆಂಡರ್ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಮೊದಲು ಆ ನಾಯಕರು ಉತ್ತರ ನೀಡಲಿ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಅವರು ಹಿಂದೆ ಮಾಡಿರುವ ಕರ್ಮಕಾಂಡವನ್ನು ನೆನಪು ಮಾಡಿಕೊಂಡು ಮಾತನಾಡುತ್ತಾರೆ. ಯಾವ ಗುತ್ತಿಗೆದಾರರನ್ನು ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎಂದು ಬೊಮ್ಮಾಯಿ ದೂರಿದರು.

ಕಾಂಗ್ರೆಸ್‌ನವರ ಅಜೆಂಡಾ ಅವರ ನಾಯಕರೇ ಹೇಳಿಕೊಂಡಿದ್ದಾರೆ. ಶೇಕಡಾ 40 ಪರ್ಸೆಂಟ್ ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ನ್ಯಾಯಾಲಯದಲ್ಲಿ ದಾಖಲೆಕೊಡುವುದಾಗಿ ಹೇಳಿದ್ದರು, ಆದರೆ ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿಯಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೂ ತನಿಖೆಯಾಗುತ್ತದೆ. ಅದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನ ಎಂದು ಕಾಂಗ್ರೆಸ್ ಆರೋಪಗಳನ್ನು ತಳ್ಳಿ ಹಾಕಿದರು.
ಶಾಸಕ ಗೂಳಿಹಟ್ಟಿ ಶೇಖರ್ ಅವರು ಪತ್ರ ಬರೆದಿದ್ದು, ಅವರು ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ ಆ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ತನಿಖೆ ಮಾಡುತ್ತೇವೆ ಎನ್ನುವುದು ಬಿಜೆಪಿ ನಿಲುವಾಗಿದೆ.

ಪಾರದರ್ಶಕತೆ: ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ
ಕೇವಲ ಹೇಳಿಕೆಗಳಿಂದ ಏನು ಆಗುವುದಿಲ್ಲ. ಕಾಂಗ್ರೆಸ್ ಐದು ವರ್ಷ ಕಾಲ ರಾಜ್ಯದಲ್ಲಿ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲೇ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ. ಟೆಂಡರ್ ಪ್ರಕ್ರಿಯೆಯು ಪಾರದರ್ಶಕವಾಗಿದೆ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆರವು ಮಾಡಿದ್ದರು. ನಿಗಮದಲ್ಲಿ ಎರಡು ಹಂತದದಲ್ಲಿನ ಪರಿಶೀಲನೆಯನ್ನೂ ತೆಗೆದಿದ್ದ ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಪುನರ್ ಸ್ಥಾಪಿಸಿದೆ. ಹೀಗಾಗಿ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.












Click it and Unblock the Notifications