ಹಿಜಾಬ್ ವಿವಾದ: ಯಾವುದೇ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ ಕಾಯುತ್ತಿದ್ದಾರೆ.

ಈ ಮಧ್ಯೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಪಕ್ಷದ ಸಹೋದ್ಯೋಗಿಗಳು ಮತ್ತು ಸಚಿವರುಗಳಿಗೆ ಹಿಜಾಬ್ ವಿವಾದದ ಕುರಿತು ಯಾವುದೇ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಈ ವಿಚಾರವನ್ನು ತೀರ್ಮಾನಿಸುವವರೆಗೆ ಯಾರೂ ಏನನ್ನೂ ಹೇಳಬಾರದು ಎಂದು ಸೂಚಿಸಿದ್ದಾರೆ.

CM Basavaraj Bommai Orders His Party Colleagues And Ministers Not to Issue Any Statements on Hijab Row

ಶಾಲಾ- ಕಾಲೇಜು ಆವರಣದಲ್ಲಿ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರದಂತೆ ನಾನು ಹೊರಗಿನವರಿಗೆ ಮನವಿ ಮಾಡುತ್ತೇನೆ. ನ್ಯಾಯ ಸಿಗುವಂತೆ ಶಾಂತಿಯುತ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಿಜಾಬ್ ವಿವಾದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದರು.

ಹಿಜಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಕೋರ್ಟ್ ತೀರ್ಪಿಗಾಗಿ ಕಾಯೋಣ. ಶಾಂತಿ ಕದಡುವ ಹೇಳಿಕೆ ಬೇಡ. ನಮ್ಮಷ್ಟಕ್ಕೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ. ಮಾತನಾಡುವುದನ್ನು ನಿಲ್ಲಿಸಿ ಎಂದು ತಿಳಿಸಿದರು.

ಶಾಲೆಗಳಲ್ಲಿ ಸಮವಸ್ತ್ರ ಪ್ರಕರಣದ ಅರ್ಜಿಯೂ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಆಗಿದೆ. ಈ ಬಗ್ಗೆ ಮಧ್ಯಾಹ್ನ ಕೇಸ್ ವಿಚಾರಣೆ ನಡೆಯಲಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಕಾಲೇಜುಗಳಿಗೆ ರಜೆ ಕೊಡಲಾಗಿದೆ. ಹೀಗಾಗಿ ಯಾವ ಸಂಘಟನೆಗಳು ಕೂಡ ವಿದ್ಯಾರ್ಥಿಗಳಿಗೆ ಪ್ರಚೋದನೆ ಕೊಡಬಾರದು. ಕೇಸ್ ಕೋರ್ಟ್‍ನಲ್ಲಿದೆ, ಕೋರ್ಟ್ ತೀರ್ಪಿಗಾಗಿ ಕಾಯೋಣ. ಶಾಂತಿ ಕದಡುವ ಬಗ್ಗೆ ಯಾರು ಕೂಡ ಮಾತಾಡಬಾರದು ಎಂದರು.

ಸಂಜೆ ಶಿಕ್ಷಣ ಸಚಿವ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಮೊದಲಿನ ತರಹ ಸೌಹಾರ್ದ ಶಾಂತಿ ತರುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಕೆಲವು ಸಚಿವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಇದರಿಂದ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಾಯಕರುಗಳಿಂದ ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.

ಇನ್ನು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರದಿಂದ ಶುಕ್ರವಾರದವರೆಗೆ ಮೂರು ದಿನಗಳ ಕಾಲ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಶಾಲಾ- ಕಾಲೇಜುಗಳ ಸುತ್ತ ಎರಡು ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ

ವಿಸ್ತೃತ ಪೀಠದಲ್ಲಿ ಹಿಜಾಬ್ ಅರ್ಜಿ ವಿಚಾರಣೆ
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.

CM Basavaraj Bommai Orders His Party Colleagues And Ministers Not to Issue Any Statements on Hijab Row

ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.

ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

Recommended Video

      UP ಚುನಾವಣಾ ಫಲಿತಾಂಶ ನಿರ್ಧರಿಸೋದು ಮೊದಲ ಹಂತದ ಮತದಾನ ಯಾಕೆ ಗೊತ್ತಾ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+