Breaking: ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಅವಕಾಶ ಇಲ್ಲ: ಸಿಎಂ

ಬೆಂಗಳೂರು, ಸೆಪ್ಟೆಂಬರ್ 28: ಭಾರತದ ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಅವಕಾಶ ಇಲ್ಲ. ಅದೂ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಕಾನೂನು ವಿರುದ್ಧ ಕೃತ್ಯಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಕುರಿತು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಪಿಎಫ್ಐ ಸಂಘಟನೆಯ ಬಹಳಷ್ಟು ಮಂದಿ ಪ್ರಮುಖರು ದೇಶದ ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅದರಲ್ಲಿ ಒಂದಷ್ಟು ಮಂದಿ ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ಪಿಎಫ್‌ಐ ಸಂಘಟನೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದರು.

ಕರ್ನಾಟಕದಾದ್ಯಂತ ಪಿಎಫ್‌ಐ ಸಂಘಟನೆ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಈಗಾಗಲೇ ಜಗಜ್ಜಾಹೀರು ಆಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಲ್ಲಿ ಜನರು ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದರು. ವಿರೋಧ ಪಕ್ಷದವರಾದ ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) (ಸಿಪಿಎಂ) ಸೇರಿ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ಅವರು ತಿಳಿಸಿದರು.

CM Basavaraj Bommai reaction about PFI Baned

ನಿಷೇಧಿತ ಸಂಸ್ಥೆಗಳ ಜತೆ ನಂಟು ಬೇಡ

ಎಲ್ಲರ ಬೇಡಿಕೆಯಂತೆ ಇದೀಗ ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಜತೆ ವಿವಿಧ ಸಂಸ್ಥೆಗಳನ್ನು ನಿಷೇಧಿಸಿದೆ. ಈ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಹ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ಹೇಳಿದರು.

ಭಯೋತ್ಪಾದನೆ ನಿಧಿ ಸಂಗ್ರಹ ಆರೋಪದ ಮೇಲೆ ಬುಧವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಿಷೇಧಿಸಲಾಗಿದೆ. ಅಲ್ಲದೇ ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಸಂಘಟನೆಗಳನ್ನು ಸಹ ಕೇಂದ್ರ ಐದು ವರ್ಷ ಅನ್ನು ಸಹ ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+