Breaking news: ಪೇ ಸಿಎಂ ಕ್ಯೂ ಆರ್ ಕೋಡ್ ಅಭಿಯಾನಕ್ಕೆ ಸಿಎಂ ಖಡಕ್ ಪ್ರತಿಕ್ರಿಯೆ

ಬೆಂಗಳೂರು, ಸೆಪ್ಟೆಂಬರ್ 21: ಪೇ ಸಿಎಂ ಕ್ಯೂ ಆರ್ ಕೋಡ್ ಅಭಿಯಾನ ಸಖತ್‌ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನೇರವಾಗಿ ಹೇಳದಿದ್ದರು ಕ್ಯೂ ಆರ್‍‌ ಕೋಡ್‌ ರುವಾರಿ ತಾನಾಗಿದೆ ಎಂಬುದು ಸ್ಕ್ಯಾನ್ ಮಾಡಿದ ವೇಳೆ ಸ್ಪಷ್ಟವಾಗುತ್ತದೆ. ಪೇ ಸಿಎಂ ಸ್ಟಿಕ್ಕರ್‌ನಿಂದ ಆಕ್ರೋಶಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆಗೆ ಸೂಚನೆಯನ್ನು ನೀಡಿದ್ದಾರೆ. ಪೇ ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನನ್ನ ಹೆಸರು ಕೆಡಿಸಲು ಷಡ್ಯಂತ್ರ
ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು. ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದು ಸಿಎಂ ಉತ್ತರಿಸಿದರು.

CM Basavaraj Bommai Reaction to Congress PayCM Campaign against BJP Govt

ಪೇ ಸಿಎಂ ಬಗ್ಗೆ ಟ್ವೀಟ್ ಮಾಡಿದ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ "ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ." ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪೇಸಿಎಂ 40% ಕ್ಯೂ ಆರ್ ಕೋಡ್‌ಗೆ ವಿರುದ್ದವಾಗಿ ಬರ್ನಾಲ್ ಬ್ರದರ್ ಎಂಬ ಸ್ಟಿಕ್ಕರ್ ರೆಡಿ ಮಾಡಿ ಮಾತ್ರಗಳು ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೋಟೋ ಹಾಕಿ ಬಿಜೆಪಿಯು ಟಾಂಗ್ ನೀಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+