ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮದು ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸುವ ದೃಷ್ಟಿಕೋನ; ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ನವೆಂಬರ್ 03: "ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

"ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಮತ ಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraj Bommai Reaction To Hanagal And Sindagi By Election Results 2021

"ಇನ್ನು ಬಹು ನಿರೀಕ್ಷಿತ ಹಾನಗಲ್ ಕ್ಷೇತ್ರದ ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ. ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಹೋಗುವ ಕೆಲಸವನ್ನು ಮಾಡುತ್ತೇವೆ," ಎಂದರು.

"ಹಾನಗಲ್‌ನಲ್ಲಿ ದಿ. ಸಿ.ಎಂ. ಉದಾಸಿಯವರಿಗಿದ್ದ ಜನಪ್ರಿಯತೆಯನ್ನು ಸ್ವಲ್ಪಮಟ್ಟಿಗೆ ನಮ್ಮಿಂದ ಮುಂದುವರೆಸಲಾಗಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಉತ್ತಮವಾಗಿ ಕೆಲಸ ಮಾಡಿದ್ದಾರೆ, ಅದಕ್ಕೆ ಜನ ಅವರನ್ನು ಬೆಂಬಲಿಸಿದ್ದಾರೆ," ಎಂದರು.

ಮುಖ್ಯಮಂತ್ರಿಯಾಗಿ 100 ದಿನ ಪೂರೈಸಿದ ಬೊಮ್ಮಾಯಿ
ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನಗಳಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, "ಒಂದು ವರ್ಷದಂತೆ ಪ್ರಮುಖ ಘಟ್ಟವೇನಲ್ಲ. ಆದರೆ, 100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲವಾಗಿ ಮಾಹಿತಿ ನೀಡಲಾಗುವುದು," ಎಂದರು.

CM Basavaraj Bommai Reaction To Hanagal And Sindagi By Election Results 2021

ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಉಪ ಚುನಾವಣೆ ಫಲಿತಾಂಶ ದಿಕ್ಸೂಚಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, "ವಿರೋಧ ಪಕ್ಷದವರು ಹಾಗೆ ಹೇಳಬೇಕು. ಸಿಂದಗಿಯಲ್ಲಿ 31,000 ದೊಡ್ಡ ಅಂತರದಿಂದ ಕಾಂಗ್ರೆಸ್ ಸೋತಿದೆ. ಅದಕ್ಕೆ ಏನು ಹೇಳುತ್ತಾರೆ," ಎಂದು ಪ್ರಶ್ನಿಸಿದರು.

ಹಾನಗಲ್‌ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಇರುವಾಗಲೇ ರಾಜ್ಯದ ಜನರ ಗಮನ ಸೆಳೆದಿದ್ದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.

ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ರಮೇಶ್ ಭೂಸನೂರಗೆ 93,865 ಮತ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದ್ದು, 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ ಲಭಿಸಿದೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಅಗ್ನಿಪರೀಕ್ಷೆ ಎಂದೇ ಕರೆಯಿಸಿಕೊಂಡಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯ ಗಳಿಸಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರವನ್ನು ಸ್ವತಃ ಮುಖ್ಯಮಂತ್ರಿಯೇ ಮುನ್ನಡೆಸಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 87,113 ಮತಗಳು, ಬಿಜೆಪಿಯ ಶಿವರಾಜ್ ಸಜ್ಜನರ್‌ಗೆ 79,515 ಮತಗಳು ಹಾಗೂ ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ 921 ಮತಗಳು ಸಿಕ್ಕಿವೆ. ಕಾಂಗ್ರೆಸ್​ನ ಶ್ರೀನಿವಾಸ ಮಾನೆಗೆ 7,598 ಮತಗಳ ಅಂತದಿಂದ ಜಯ ಸಿಕ್ಕಿದೆ.

ಉಪ ಚುನಾವಣೆಯ ಫಲಿತಾಂಶ ಕುರಿತು ಮಂಗಳವಾರದಂದು ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಹಾನಗಲ್​ನಲ್ಲಿ ನಿರೀಕ್ಷಿಸಿದಷ್ಟು ಮತಗಳು ಬಂದಿಲ್ಲ. ಹೀಗಾಗಿಯೇ ನಮಗೆ ಹಿನ್ನಡೆ ಆಗಿದೆ. ಸಿ.ಎಂ. ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಆಗಿಲ್ಲ,'' ಎಂದು ಸೋಲನ್ನು ಒಪ್ಪಿಕೊಂಡರು.

"ನಮ್ಮ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದರು. ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್​ ಅಭ್ಯರ್ಥಿ ಹಾನಗಲ್ ಕ್ಷೇತ್ರದಲ್ಲಿ ಕಳೆದ 2-3 ವರ್ಷಗಳಿಂದ ಕೆಲಸ ಮಾಡಿದ್ದಾರೆ. ಹೀಗಾಗಿ ಕ್ಷೇತ್ರದ ಜನತೆ ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಕೈಹಿಡಿದಿದ್ದಾರೆ,'' ಎಂದು ಫಲಿತಾಂಶ ಕುರಿತು ವಿಶ್ಲೇಷಿಸಿದ್ದಾರೆ.

"ಉಪ ಚುನಾವಣೆ ನಡೆದಿದ್ದ ರಾಜ್ಯದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಗೆದ್ದು, ಮತ್ತೊಂದರಲ್ಲಿ ಸೋತಿದ್ದೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಇದೇ ರೀತಿ ಆಗಿತ್ತು. ಉಪ ಚುನಾವಣೆ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಮುಂದೆ ಎಲ್ಲಾ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ. ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ,'' ಎಂದು ತಿಳಿಸಿದ್ದರು.

English summary
CM Basavaraj Bommai Reaction to Hanagal and Sindagi By Election Results 2021; He said will accept both win and lose as same. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X