Get Updates
Get notified of breaking news, exclusive insights, and must-see stories!

Sankey flyover: ಅಧಿಕಾರಿಗಳು, ಪ್ರತಿಭಟನಾಕಾರರ ನಡುವೆ ಫ್ಲೈಓವರ್ ಯೋಜನೆ ಬಗ್ಗೆ ಚರ್ಚೆ; ಸಿಎಂ ಭರವಸೆ

ಸ್ಯಾಂಕಿ ಮೇಲ್ಸೇತುವೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಮುರಿದಿದ್ದಾರೆ.

ಬೆಂಗಳೂರು, ಫೆಬ್ರವರಿ. 05: ಭಾರಿ ವಿರೋಧಕ್ಕೆ ಕಾರಣವಾಗಿರುವ ವಿವಾದಿತ ಸ್ಯಾಂಕಿ ಮೇಲ್ಸೇತುವೆ ಯೋಜನೆ ಕುರಿತು ಮೌನ ಮುರಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆಗೆ ಆಹ್ವಾನಿಸುವುದಾಗಿ ಸದಾಶಿವನಗರ ಮತ್ತು ಮಲ್ಲೇಶ್ವರಂ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.

ಈ ಸ್ಯಾಂಕಿ ಮೇಲ್ಸೇತುವೆ ವಿರುದ್ಧ ಹೋರಾಟ ಹೆಚ್ಚಾಗುತ್ತಿದ್ದು, ಸ್ಯಾಂಕಿ ಗ್ರೂಪ್ ನಾಗರಿಕರನ್ನು ಪ್ರತಿನಿಧಿಸುವ ನಿವಾಸಿಗಳ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ಆರ್‌ಟಿ ನಗರ ನಿವಾಸದಲ್ಲಿ ಭೇಟಿಯಾಗಿ ಯೋಜನೆ ಕೈಬಿಡುವಂತೆ ಮನವಿ ಮಾಡಿದ್ದಾರೆ.

ವಲಯ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಬಳಿಕ ನಿವಾಸಿಗಳು ಸಿಎಂಗೆ ಮನವಿ ಸಲ್ಲಿಸಿದ್ದಾರೆ.

CM Basavaraj Bommai to discuss Sankey flyover project with residents, officials

ಸದಾಶಿವನಗರ ಮತ್ತು ಮಲ್ಲೇಶ್ವರಂ ನಿವಾಸಿಗಳ ನಿಯೋಗದ ಸದಸ್ಯರಾದ ಲಕ್ಷ್ಮಿ ಶರತ್ "ನಾವು ಸುಮಾರು 10 ನಿಮಿಷಗಳ ಕಾಲ ಸಿಎಂ ಅವರನ್ನು ಭೇಟಿ ಮಾಡಿದ್ದೇವೆ. ಅವರು ಬಹಳ ತಾಳ್ಮೆಯಿಂದ ನಮ್ಮ ಯೋಚನೆ ಮತ್ತು ಅಭಿಪ್ರಾಯಗಳನ್ನು ಕೇಳಿಸಿಕೊಂಡಿದ್ದಾರೆ" ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, 'ನಮಗೆ ಈ ಯೋಜನೆ ಏಕೆ ಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ, ಈ ಯೋಜನೆ ನಿಮಗೆ ಬೇಡವಾದರೆ ಏಕೆ ಬೇಡ ಎಂದು ನನಗೆ ತಿಳಿಸಿ, ನಾನು ಮುಕ್ತ ಮನಸ್ಸಿನಿಂದ ಕೇಳಿಸಿಕೊಳ್ಳುತ್ತೇನೆ. ನಾನು ಅಧಿಕಾರಿಗಳೊಂದಿಗೆ ಮಾತನಾಡಿ ಯೋಜನೆಯ ಬಗ್ಗೆ ನಿಮ್ಮೊಂದಿಗೆ ಚರ್ಚೆ ನಡೆಸುತ್ತೇನೆ" ಎಂದು ಹೇಳಿದ್ದಾರೆ.

ಬಿಬಿಎಂಪಿ ವತಿಯಿಂದ ಭಾಷ್ಯಂ ವೃತ್ತದಿಂದ ಮಲ್ಲೇಶ್ವರಂ 18ನೇ ಕ್ರಾಸ್‌ವರೆಗೆ ಸ್ಯಾಂಕಿ ರಸ್ತೆ ಅಗಲೀಕರಣ ಹಾಗೂ ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಭಾಷ್ಯಂ ವೃತ್ತ ಹಾಗೂ ಗುಟ್ಟಹಳ್ಳಿ ಜಂಕ್ಷನ್‌ನಲ್ಲಿ ಆಗಾಗ್ಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂಬುದು ಪಾಲಿಕೆ ಅಧಿಕಾರಿಗಳ ವಾದ. ಆದರೆ, ಈ ಮೇಲ್ಸೇತುವೆಯಿಂದಾ ನೂರಾರು ಮರಗಳ ಮಾರಣಹೋಮವಾಗುತ್ತದೆ, ಉತ್ತಮ ವಾತಾವರಣ ಹಾಳಾಗುತ್ತದೆ ಎಂಬುದು ಇಲ್ಲಿನ ನಿವಾಸಿಗಳ ವಾದ.

CM Basavaraj Bommai to discuss Sankey flyover project with residents, officials

ಇತ್ತೀಚೆಗೆ ನಗರದ ಸುಮಾರು 2,000ಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ, " ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ" ಎಂದು ಬರೆಯಲಲಾಗಿದೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+