ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Karnataka budget 2023: ಫೆ.10ಕ್ಕೆ ಬಜೆಟ್ ಅಧಿವೇಶನ, ಫೆ. 17ಕ್ಕೆ ಬಜೆಟ್ ಮಂಡಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ, 20: ಕರ್ನಾಟಕ ವಿಧಾನಮಂಡಲ ಬಜೆಟ್ ಅಧಿವೇಶನವು ಫೆಬ್ರವರಿ 10 ರಂದು ಆರಂಭವಾಗಲಿದ್ದು, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಮಂಡಲ ಬಜೆಟ್ ಅಧಿವೇಶನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ.

ಸಂಪುಟ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಇದು ವರ್ಷದ ಮೊದಲ ಅಧಿವೇಶನವಾಗಿರುವುದರಿಂದ ರಾಜ್ಯಪಾಲರು ಫೆಬ್ರವರಿ 10 ರಂದು ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.

CM Basavaraj Bommai to Present Karnataka budget 2023 on Feb 17, Session to begin from Feb. 10

ಬಜೆಟ್ ಅಧಿವೇಶನವನ್ನು 15 ದಿನಗಳ ಕಾಲ ನಡೆಸಲು ಸಂಪುಟವು ಚಿಂತನೆ ನಡೆಸಿದೆ. ಫೆಬ್ರವರಿ 16ರ ವರೆಗೆ ರಾಜ್ಯಪಾಲ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಶಾಸಕರ ಅಭಿಪ್ರಾಯಗಳ ಆಧಾರದ ಮೇಲೆ ವಿಧಾನಮಂಡಲದ ವ್ಯವಹಾರ ಸಲಹಾ ಸಮಿತಿಯು ಅಧಿವೇಶನದ ಅವಧಿಯನ್ನು ನಿರ್ಧರಿಸುತ್ತದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

*ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು*

1. ಕರ್ನಾಟಕ ಸಕ್ಕರೆ (ಉತ್ಪಾದನಾ ನಿಯಂತ್ರಣ) ಆದೇಶ 2022ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

2. ಜಲಜೀವನ್ ಮಿಷನ್ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ಆನವೇರಿ ಮತ್ತಿತರ 23 ಗ್ರಾಮಗಳಿಗೆ ರೂ. 26.62 ಕೋಟಿ ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

CM Basavaraj Bommai to Present Karnataka budget 2023 on Feb 17, Session to begin from Feb. 10

3. ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ರೂ. 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗೆ.

4. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆ 19 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಹಾಗೂ ವಸತಿ ಗೃಹಗಳ ನಿರ್ಮಾಣ.

5. ಮಡಿಕೇರಿ, ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗಳಲ್ಲಿ 36.97 ಕೋಟಿ ವೆಚ್ಚದಲ್ಲಿ ತುರ್ತು ನಿಗಾ ಘಟಕಗಳ ನಿರ್ಮಾಣ.

6. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕಲ್ಲತ್ತಿ ಹಳ್ಳಕ್ಕೆ 7 20 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಆಡಳಿತಾತ್ಮಕ ಒಪ್ಪಿಗೆ.

7. "ಕರ್ನಾಟಕ ಉಪಖನಿಜ, ರಿಯಾಯಿತಿ (ತಿದ್ದುಪಡಿ) ನಿಯಮಗಳು- 2022"ಕ್ಕೆ ಅನುಮೋದನೆ.

8. ರಾಜ್ಯದ 847 ಉಪಕೇಂದ್ರಗಳನ್ನು 71.56 ಕೋಟಿ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ.

9. ರಾಜ್ಯದ 114 ನಗರ ಆರೋಗ್ಯ ಕ್ಷೇಮ ಕೇಂದ್ರ - ನಮ್ಮ ಕ್ಲಿನಿಕ್ ಗಳನ್ನು 39.364 ಕೋಟಿ ವೆಚ್ಚದಲ್ಲಿ ಸ್ಥಾಪನೆ.

10. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ 71 ಕೋಟಿ ವೆಚ್ಚದಲ್ಲಿ ನಾರಾಯಣ ಗುರುಗಳ ಹೆಸರಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಶಾಲೆ.

11. ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ಅನುಷ್ಠಾನ.

12. ರಾಜ್ಯದ ವಿವಿಧೆಡೆ 640.01 ಕೋಟಿ ವೆಚ್ಚದಲ್ಲಿ, ಒಟ್ಟು 100 ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ಕಟ್ಟಡ ನಿರ್ಮಾಣ.

13. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ 13.20 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ.

14. ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಕೆರೆಹಳ್ಳಿ ಗ್ರಾಮದ ಸ. ನಂ 37ರಲ್ಲಿ 02 ಎಕರೆ ಗೋಮಾಳ ಜಮೀನನ್ನು ಬಡಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕಾಗಿ ಕ್ಷತ್ರೀಯ ಮರಾಠ ಯುವ ವೇದಿಕೆ, ರಿಪ್ಪನ್ ಪೇಟೆಗೆ ಮಂಜೂರಾತಿಗೆ ಒಪ್ಪಿಗೆ.

English summary
Chief minister Basavaraj Bommai to Present Karnataka budget 2023 on February 17, Session to begin from February 10. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X