ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಗತಿ ಪ್ರತಿಮೆ ಲೋಕಾರ್ಪಣೆ, ಮೋದಿ ಭೇಟಿ ಬಗ್ಗೆ ಸಿಎಂ ಬೊಮ್ಮಾಯಿ ವಿವರಣೆ

|
Google Oneindia Kannada News

ಬೆಂಗಳೂರು, ನವೆಂಬರ್ 10: ''ನಮ್ಮೆಲ್ಲರ ಹೆಮ್ಮೆಯ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭಿವೃದ್ಧಿ ಪ್ರೇರಣೆಯಾಗುವಂತೆ 108 ಅಡಿ ಎತ್ತರ ಸ್ಥಾಪಿಸಲಾಗಿರುವ ಕೆಂಪೇಗೌಡರ 'ಪ್ರಗತಿ ಪ್ರತಿಮೆ' ನಿರ್ಮಿಸಲಾಗಿದೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಮುಖ್ಯಮಂತ್ರಿಗಳು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ, ವ್ಯವಸ್ಥೆ ಪರಿಶೀಲಿಸಿ ಬಳಿಕ ಮಾತನಾಡಿದರು.

ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ ಅವರು. ಅವರು ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‌ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಡಾ.ಬಿ.ಆರ್‌ ಅಂಬೇಡ್ಕರ್ ಅವರ ಅತೀ ಎತ್ತರದ ಮೂರ್ತಿ ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಮಂತ್ರಿಗಳು ಅವರಿಗೆ ಈ ಶಿಲ್ಪಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಪ್ರಧಾನಿಗಳಿಂದ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ

ಪ್ರಧಾನಿಗಳಿಂದ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ

ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಮಂತ್ರಿಗಳು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಾಸಕರ ಭವನಕ್ಕೆ ಬರಲಿದ್ದಾರೆ. ಕನಕ ಜಯಂತಿಯ ಹಿನ್ನೆಲೆಯಲ್ಲಿ ಅಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿಗಳು ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಇದೇ ವೇಳೆ ಅವರು ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.

ವಂದೇ ಭಾರತ್ ರೈಲು ಬಹುದಿನದ ಬೇಡಿಕೆ ಈಡೇರಿಕೆ

ವಂದೇ ಭಾರತ್ ರೈಲು ಬಹುದಿನದ ಬೇಡಿಕೆ ಈಡೇರಿಕೆ

ಶಾಸಕರ ಭವನದಿಂದ ನಗರದ ರೈಲ್ವೇ ನಿಲ್ದಾಣದಕ್ಕೆ ತೆರಳಲಿರುವ ಪ್ರಧಾನಿಗಳು ಅಲ್ಲಿ ವಂದೇ ಭಾರತ್ ಹೈಸ್ಪೀಡ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಮೈಸೂರು-ಚನ್ನೈ ಕಡೆ ಪ್ರಯಾಣ ಮಾಡುವುದು, ಬೆಂಗಳೂರು- ಮೈಸೂರು ಪ್ರಯಾಣದ ಅವಧಿಯನ್ನು ಅತ್ಯಂತ ಕಡಿಮೆ ಸಮಯದಲ್ಲಿ ತಲುಪಬಹುದಾಗಿದೆ. ಇದಕ್ಕಾಗಿ ಪ್ರಯಾಣಿಕರ ಬಹಳ ದಿನಗಳ ಬೇಡಿಕೆ ಇತ್ತು. ಅದನ್ನು ಪ್ರಧಾನಿಗಳು ವಂದೇ ಮಾತರಂ ಯೋಜನೆಯಲ್ಲಿ ಸೇರಿಸಿ ಈಡೇರಿಸಿದ್ದಾರೆ. ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಿಣ ಭಾರತದಲ್ಲಿ ಮೊದಲ ಹೈಸ್ಪೀಡ್ ರೈಲನ್ನು ಉದ್ಘಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಕೂಡ ಅನುಕೂಲವಾಗಲಿದೆ ಎಂದು ಬೊಮ್ಮಾಯಿ ವಿವರಿಸಿದರು.

ಏರ್‌ಫೋರ್ಟ್‌ನಲ್ಲಿ ಟರ್ಮಿನಲ್ 2 ಉದ್ಘಾಟನೆ

ಏರ್‌ಫೋರ್ಟ್‌ನಲ್ಲಿ ಟರ್ಮಿನಲ್ 2 ಉದ್ಘಾಟನೆ

ಮಧ್ಯಾಹ್ನ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 2ನೇ ಟರ್ಮಿನಲ್ ಅನ್ನು ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಟರ್ಮಿನಲ್ -2 ಅಂತಾರಾಷ್ಟ್ರೀಯ ಮತ್ತು ದೇಶೀಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸುಮಾರು 25 ಲಕ್ಷ ಪ್ರಯಾಣಿಕರ ಸಾಮರ್ಥ್ಯವನ್ನು ಈ ಟರ್ಮಿನಲ್‌ ಹೊಂದಿದೆ. ಹಾಲಿ ಇರುವ ಟರ್ಮಿನಲ್‌ 35 ಲಕ್ಷ ಸಾಮರ್ಥ್ಯವುಳ್ಳದ್ದಾಗಿದೆ. ಹೊಸ ಮತ್ತು ಹಳೆ ಟರ್ಮಿನಲ್‌ ಸೇರಿ ದೇಶದ 2ನೇ ಅತಿ ದೊಡ್ಡ ಮತ್ತು ಅತ್ಯಧಿಕ ಸಾಮರ್ಥ್ಯವುಳ್ಳ ವಿಮಾನ ನಿಲ್ದಾಣವಾಗಲಿದೆ. ಇದಾದ ಬಳಿಕ ಕೆಂಪೇಗೌಡರ 'ಪ್ರಗತಿ ಪ್ರತಿಮೆ' ಅನಾವರಣ ಮಾಡಿ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

2-3 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲಾಗುವುದು

2-3 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲಾಗುವುದು

ಬೆಂಗಳೂರಿಗೆ ಪ್ರಧಾನಮಂತ್ರಿಗಳು ಆಗಮನದ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುತ್ತಿರುವ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಸ್ತೆಗುಂಡಿ ಮುಚ್ಚುವ ಕಾರ್ಯ ನಡೆಯುತ್ತಲೇ ಇದೆ. ಮುಂದಿನ 3-4 ದಿನಗಳಲ್ಲಿ ನಗರದಲ್ಲಿನ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ‌. ಸಿ‌. ಎನ್. ಅಶ್ವಥ್ ನಾರಾಯಣ, ಆರ್. ಅಶೋಕ್, ಸಿ‌.ಸಿ. ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.

English summary
PM Narendra Modi's Bengaluru visit, Kempegowda Statue(Pragati Pratime) will inspire said CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X