Get Updates
Get notified of breaking news, exclusive insights, and must-see stories!

ಬೆಳಗಾವಿಯ ಮರಾಠಿ ಲಘು ಪದಾತಿದಳ ಕೇಂದ್ರದಲ್ಲಿ ವಿಜಯ ದಿವಸ: ಸಿಎಂ ಗೌರವ ಸಮರ್ಪಣೆ

ಬೆಳಗಾವಿ, ಡಿಸೆಂಬರ್ 16: ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ 'ವಿಜಯ ದಿವಸ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 1971ರ ಇಂಡೋ- ಪಾಕ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಮರ್ಪಿಸಿದರು.

ಬೆಳಗಾವಿಯ ಮರಾಠಿ ಲಘು ಪದಾತಿ ದಳ ಕೇಂದ್ರ(ಎಂ.ಎಲ್.ಐ.ಆರ್.ಸಿ)ದ ಆವರಣದಲ್ಲಿ ಗುರುವಾರ (ಡಿ.16) ಹಮ್ಮಿಕೊಳ್ಳಲಾಗಿದ್ದ 'ವಿಜಯ ದಿವಸ' ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದರು.

1971ರ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ಬಾಂಗ್ಲಾದೇಶ ಉದಯಕ್ಕೆ ಕಾರಣರಾದ ಹುತಾತ್ಮ ಭಾರತೀಯ ಯೋಧರಿಗೆ ಗೌರವ ಸಮರ್ಪಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂಡೋ- ಪಾಕ್ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಫೂರ್ತಿಯಾಗಿದೆ ಎಂದು ತಿಳಿಸಿದರು.

CM Basavaraj Bommai Paid Tribute To Martyrs at Marathi Light Infantry Center in Belagavi Due to Vijay Diwas Celebration

ಸೇನೆ ದೇಶ ರಕ್ಷಣೆಯ ಜತೆಗೆ ಆಂತರಿಕ ಭದ್ರತೆಯಲ್ಲೂ ಪ್ರಮುಖ‌ ಪಾತ್ರ ವಹಿಸುತ್ತಿದೆ. ಗಡಿಯಾಚೆಗಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತಿದೆ. ಇಂಡೋ-ಪಾಕ್ ಯುದ್ಧವು ದೇಶದ ಮೂರೂ ಸೇನಾ ಪಡೆಗಳ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. 13 ದಿನಗಳ ಯುದ್ಧದಲ್ಲಿ ಅನೇಕ ಜನರು ಹುತಾತ್ಮರಾದರು ಎಂದು ಸ್ಮರಿಸಿದರು.

90 ಸಾವಿರಕ್ಕೂ ಅಧಿಕ ಪಾಕಿಸ್ತಾನ ಸೈನಿಕರು ಶರಣಾದರು. ಈ ಯುದ್ಧ ಕಲೆಯು ಇಡೀ ಜಗತ್ತು ಭಾರತದ ಸೇನಾಶಕ್ತಿಯ ಕಡೆ ನೋಡುವಂತೆ ಆಯಿತು. ಈ ಯುದ್ಧದ ಬಳಿಕ ಭಾರತ ಸೇನೆ ಮತ್ತಷ್ಟು ಬಲಿಷ್ಠವಾಗಿದೆ. ಪ್ರಸ್ತುತ ಸಮರ ಕಲೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಕೂಡ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಬಲಿಷ್ಠಗೊಳ್ಳುತ್ತಿದೆ. ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ಭಾರತೀಯ ಸೇನೆಯು ಗಡಿಯನ್ನು ಸುರಕ್ಷಿತವಾಗಿರಿಸಿದೆ ಎಂದು ತಿಳಿಸಿದರು.

CM Basavaraj Bommai Paid Tribute To Martyrs at Marathi Light Infantry Center in Belagavi Due to Vijay Diwas Celebration


ಇದೇ ಸಂದರ್ಭದಲ್ಲಿ ಇತ್ತೀಚೆಗೆ ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಇತರ ಹದಿಮೂರು ಜನರಿಗೆ ಕೂಡ ಸಿಎಂ ಬಸವರಾಜ ಬೊಮ್ಮಾಯಿ ನುಡಿ ನಮನ ಸಲ್ಲಿಸಿದರು. ಭಾರತ ಮಾತೆ ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ, ನಾವು ಯಾವುದೇ ವೃತ್ತಿಯಲ್ಲಿ ಇದ್ದರೂ ದೇಶ ಸೇವೆಗೆ ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶೌರ್ಯ ಪ್ರಶಸ್ತಿ ಅನುದಾನ ಹೆಚ್ಚಳ
ರಾಜ್ಯ ಸರಕಾರವು ಪರಮವೀರ ಚಕ್ರ, ಮಹಾವೀರಚಕ್ರ, ಅಶೋಕ ಚಕ್ರ ಸೇರಿದಂತೆ ವಿವಿಧ ಶೌರ್ಯ ಪ್ರಶಸ್ತಿ ವಿಜೇತರಿಗೆ ಒಂದು ಬಾರಿ ನೀಡಲಾಗುತ್ತಿರುವ ಅನುದಾನ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವೇಳೆ ಪ್ರಕಟಿಸಿದರು.

ಅನುದಾನ ಮೊತ್ತವನ್ನು ಪರಮವೀರ ಚಕ್ರ ಪ್ರಶಸ್ತಿಗೆ 1.50 ಕೋಟಿ, ಮಹಾವೀರ ಚಕ್ರ ಪ್ರಶಸ್ತಿಗೆ 1 ಕೋಟಿ, ಅಶೋಕ ಚಕ್ರ ಪ್ರಶಸ್ತಿಗೆ 1.50 ಕೋಟಿ ರೂ., ಕೀರ್ತಿ ಚಕ್ರ ಪ್ರಶಸ್ತಿಗೆ 1 ಕೋಟಿ, ವೀರಚಕ್ರ ಹಾಗೂ ಶೌರ್ಯ ಚಕ್ರ ಪ್ರಶಸ್ತಿಗೆ 50 ಲಕ್ಷ ಹಾಗೂ ವಿವಿಧ ಸೇನಾ ಮೆಡಲ್‌ಗಳಿಗೆ 15 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

CM Basavaraj Bommai Paid Tribute To Martyrs at Marathi Light Infantry Center in Belagavi Due to Vijay Diwas Celebration

ರಾಜ್ಯ ಸರಕಾರವು ಯಾವಾಗಲೂ ಸೈನಿಕರ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದೆ. ನಿವೃತ್ತ ಯೋಧರು ಹಾಗೂ ಹುತಾತ್ಮರ ಕುಟುಂಬದ ಸದಸ್ಯರ ಕ್ಷೇಮಾಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಕರ್ನಾಟಕ ಮತ್ತು ಕೇರಳ ಉಪ ಕ್ಷೇತ್ರದ ಜನರಲ್ ಕಮಾಂಡಿಂಗ್ ಆಫೀಸರ್ ಮೇಜರ್ ಜನರಲ್ ಜೆ.ವಿ. ಪ್ರಸಾದ್, ಡಿಜಿಪಿ ಪ್ರವೀಣ ಸೂದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಯುದ್ಧ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

ಶಾಸಕ ಅನಿಲ್ ಬೆನಕೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಂ.ಎಲ್.ಐ.ಆರ್.ಸಿ. ಕಮಾಂಡೆಂಟ್ ಬ್ರಿಗೇಡಿಯರ್ ರೋಹಿತ್ ಚೌಧರಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್, ಹಿರಿಯ ಸೇನಾಧಿಕಾರಿಗಳು, ನಿವೃತ್ತ ಯೋಧರು, ಗಣ್ಯರು ಸೇರಿದಂತೆ ನೂರಾರು ಜನರು ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Recommended Video

      ಅಬ್ಬಬ್ಬಾ!!ಭುವನ ಸುಂದರಿಯ ಕಿರೀಟದ ಬೆಲೆ ಎಷ್ಟು?ಎಷ್ಟು ವಜ್ರಗಳಿವೆ? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+