ರಾಹುಲ್ ಗಾಂಧಿ ಅನರ್ಹ: ಇಲ್ಲಿ ಎಲ್ಲರಿಗೂ ಒಂದೇ ಕಾನೂನು: ಬೊಮ್ಮಾಯಿ
ಬೆಂಗಳೂರು, ಮಾರ್ಚ್ 25: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ. ಅದು ಸರಿಯಲ್ಲಿ, ರಾಹುಲ್ ಗಾಂಧಿಯವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ ಎಂದು ಅವರು ಟೀಕಿಸಿದರು.

ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿ ಬೀದಿಯಲ್ಲಿ ವೈಯಕ್ತಿಕ ನಿಂದೆನ ಮಾಡುವುದು. ನಿಂದನೆ ಮಾಡಿ ಮಾತನಾಡುವುದು ತಪ್ಪು. ಅಂತದ್ದಕ್ಕೆ ಕಾನೂನು ಇದೆ. ಇಲ್ಲಿ ಕಾನೂನು ಎಲ್ಲರಿಗೂ ಒಂದೆ, ಎಲ್ಲರಿಗೂ ಸಮಾನವಾದ್ದದ್ದು ಎಂದರು.
ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರಲ್ಲರೂ ಪ್ರಕರಣ ದಾಖಲಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಅವರು ವಿವರಿಸಿದರು.
ಕಾಂಗ್ರೆಸ್ ಟಿಕೆಟ್ ಬಗ್ಗೆ ಸಿಎಂ ವ್ಯಂಗ್ಯ: ಕಾದು ನೋಡಿ
ಚುನಾವಣೆ ಸಮೀಪಿಸುತ್ತಿದೆ. ವಿಪಕ್ಷವಾದ ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅದರಲ್ಲಿ ಯಾವುದೇ ಆಶ್ಚರ್ಯಪಡುವಂತದ್ದೇನು ಇಲ್ಲ. ಅದರಲ್ಲಿ ಹೊಸತನವೇನು ಇಲ್ಲ ಎಂದು ವ್ಯಾಂಗ್ಯವಾಡಿದರು. ನಮ್ಮ ಪಕ್ಷ ಬಿಜೆಪಿಯಿಂದಲೂ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಕಾದು ನೋಡಿ ಎಂದು ತಿಳಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತವಾಗಿ ಅಧಿಕಾರಕ್ಕೆ ಬರಲಿದೆ. ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದೇವೆ. ಅಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾರೋಪಗೊಳ್ಳಲಿದೆ. ಅಂದು ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ವಿಜಯದ ಕಹಳೆಯನ್ನು ಊದಲಿದ್ದಾರೆ ಎಂದು ಭವಿಷ್ಯ ನುಡಿದರು.
ದಾವಣಗೆರೆಯಿಂದ ವಿಜಯದ ಯಾತ್ರೆ ಪ್ರಾರಂಭ ಆಗಲಿದೆ. ನಮಗೆ ಅತೀ ದೊಡ್ಡ ಬಲವೇ ಪ್ರಧಾನಿ ನರೇಂದ್ರ ಮೋದಿಯವರು. ಡಬಲ್ ಇಂಜಿನ್ ಸರ್ಕಾರದ ಒಳ್ಳೆಯ ಕೆಲಸ ಇಟ್ಟುಕೊಂಡು ಜನರ ಆಶಿರ್ವಾದ ಪಡೆಯುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ. ಮೇ ತಿಂಗಳಲ್ಲಿ ಮತ್ತೊಮ್ಮೆ ವಿಜಯೋತ್ಸವಕ್ಕೆ ಮೋದಿಯವರನ್ನ ಕರೆಯುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಅನರ್ಹ: ಕಾನೂನು ಒಂದೆ ಎಂದ ಸಿಎಂ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರ ಉಪನಾಮ (ಸರ್‌ನೇಮ್) ಕುರಿತು ಟೀಕೆ ಮಾಡಿದ್ದರು. ಈ ಸಂಬಂಧ ಪ್ರಕರಣ ಗುಜರಾತ್‌ನ ಸೂರತ್ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯವು ಇತ್ತೀಚೆಗೆ ಮಹತ್ವದ ನೀಡಿ ಆದೇಶಿಸಿತು. ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿತು.
ರಾಹುಲ್ ಗಾಂಧಿಯವರ ಮೇಲೆ 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಬಳಿಕ ಜಾಮೀನು ಮಂಜೂರು ಮಾಡಿತ್ತು. ಅಂದು ಅವರು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬಳಿಕ ಅವರ ಲೋಕಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಎಂದು ಪ್ರಕ್ರಿಯಿಸಿದರು.












Click it and Unblock the Notifications