ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ಮೇಲೆ ಟಿಪ್ಪು ಜಯಂತಿ ಇಲ್ಲ! ಬಿಜೆಪಿ ಸರ್ಕಾರದ ಮಹತ್ವದ ನಿರ್ಣಯ

|
Google Oneindia Kannada News

Recommended Video

ಟಿಪ್ಪು ಜಯಂತಿ ಆಚರಣೆಗೆ ಕಡಿವಾಣ ಹಾಕಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಂಗಳೂರು, ಜುಲೈ 30: ವಿವಾದಿತ ಟಿಪ್ಪು ಜಯಂತಿಯನ್ನು ಇನ್ನು ಮುಂದೆ ಆವರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ.

ಜುಲೈ 29 ರಂದು ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಿಸುವ ಪದ್ಧತಿ ಆರಂಭಿಸಿದ್ದರು.

ಟಿಪ್ಪು ಜಯಂತಿ ಪ್ರತಿ ವರ್ಷ ನಡೆಯುತ್ತೆ: ಕುಮಾರಸ್ವಾಮಿ ಸ್ಪಷ್ಟನೆಟಿಪ್ಪು ಜಯಂತಿ ಪ್ರತಿ ವರ್ಷ ನಡೆಯುತ್ತೆ: ಕುಮಾರಸ್ವಾಮಿ ಸ್ಪಷ್ಟನೆ

ಇದು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿತ್ತು. "ಟಿಪ್ಪು ಒಬ್ಬ ಹಿಂದು ವಿರೋಧಿ. ಆತ ಹಿಂದುಗಳ ಮಾರಣಹೋಮ ನಡೆಸಿದವ. ಅಂಥವನ ಜಯಂತಿ ಆಚರಿಸುವುದು ಹಿಂದುಗಳ ಭಾವನೆಗೆ ನೋವುಂಟು ಮಾಡಿದಂತೆ" ಎಂದು ಬಲಪಂಥೀಯರು ಆಕ್ರೋಶ ವ್ಯಕ್ತಪಡಿಸಿದ್ದರೂ ಸಿದ್ದರಾಮಯ್ಯ ಮತ್ತು ನಂತರ ಮುಖ್ಯಮಂತ್ರಿ ಪಟ್ಟ ಏರಿದ್ದ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಟಿಪ್ಪು ಜಯಂತಿಯನ್ನು ಅದ್ಧೂರಿಯಾಗಿಯೇ ಆಚರಿಸಿದ್ದರು.

 CM BS Yediyurappa directs not to celebrate Tipu Jayanti

ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್

ಟಿಪ್ಪು ಜಯಂತಿ ಸಂದರ್ಭದಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿತ್ತು. ಕೋಮು ಸಂಘರ್ಷವನ್ನು ತಪ್ಪಿಸಲು ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿತ್ತು. ಮುಸ್ಲಿಂ ಮತಗಳಿಗಾಗಿ, ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ ಎಂಬ ಬಲಪಂಥೀಯರ ಕೂಗನ್ನೂ ಲೆಕ್ಕಿಸದೆ ಹಿಂದಿನ ಸರ್ಕಾರಗಳು ನಡೆಸಿದ್ದ ಈ ಕಾರ್ಯಕ್ರಮಕ್ಕೆ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಡಿವಾಣ ಹಾಕಿದ್ದಾರೆ. ಇದು ಬಿಜೆಪಿ ಸಚಿವ ಸಂಪುಟದ ಮಹತ್ವದ ನಿರ್ಣಯ ಎನ್ನಿಸಿದೆ.

English summary
Chief Minister BS Yediyurappa led Karnataka Government orders Kannada and Culture Department, to not celebrate Tipu Jayanti.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X