ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳ ಪರಿಶೀಲನೆ; ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಜ. 30: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ಸ್‌ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

CM BS Yediyurappa inspected the work on the Bengaluru Smart City project

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂಪಾಯಿಗಳು. ಈ ವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

CM BS Yediyurappa inspected the work on the Bengaluru Smart City project

ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ಸಿಎಂ ಯಡಿಯೂರಪ್ಪ ಅವರು ನೀಡಿದ್ದಾರೆ.

Recommended Video

Union budget 2021 | Budget ಮಂಡಿಸಿದ ಮೊದಲ ಮಹಿಳೆ ಯಾರು ಗೊತ್ತಾ? | Oneindia Kannada

English summary
Chief Minister B.S. Yediyurappa inspected the work on the Bengaluru Smart City project today. In this case, he instructed the authorities to complete the works quickly and facilitate the public. Know more about CMs City rounds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X