• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದಲ್ಲಿ ಕೊರೊನಾ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಿಎಂ ಸೂತ್ರ

|

ಬೆಂಗಳೂರು, ಮೇ 4: ನೆರೆ ಮನೆ ಹೊತ್ತಿ ಉರಿಯುವ ಸಂದರ್ಭದಲ್ಲಿ ಅದರಲ್ಲಿ ಬಿಸಿ ಕಾಸಿಕೊಳ್ಳುವ ಜನರಿದ್ದಾರೆ ಎನ್ನುವ ಮಾತನ್ನು ಕೇಳಿರುತ್ತೀರಿ ಅಲ್ಲವೇ. ಈ ಮಾತಿಗೆ ಸಾಕ್ಷಿ ಎನ್ನುವಂತಾ ಅಕ್ರಮ ಸಂಸದ ತೇಜಸ್ವಿ ಸೂರ್ಯ ಪರಿಶೀಲನೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್ ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ರಾಜ್ಯಕ್ಕೆ ರಾಜ್ಯವೇ ಹೊತ್ತಿ ಉರಿಯುತ್ತಿದೆ. ಕೊವಿಡ್-19 ಸೋಂಕಿತರಿಗೆ "ಬೆಡ್ ಇಲ್ಲ ಎಚ್ಚರಿಕೆ" ಎನ್ನುವಂತಾ ಬೋರ್ಡ್ ತೋರಿಸಲಾಗುತ್ತಿದೆ. ಕೊರೊನಾ ವಾರ್ ರೂಮ್್ಗಳಲ್ಲಿ ಅಕ್ರಮವಾಗಿ ಬೆಡ್ ಹಂಚಿಕೆ ಮಾಡುತ್ತಿರುವ ವಿಚಾರ ಸಂಸದರು ನಡೆಸಿದ ಪರಿಶೀಲನೆ ವೇಳೆ ಗೊತ್ತಾಗಿದೆ.

ಕೊರಾನಾವೈರಸ್ ರೋಗಿಗಳಿಗೆ ಹಾಸಿಗೆಗಳನ್ನೂ ಕೂಡಾ ಅಕ್ರಮವಾಗಿ ಬುಕ್ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಸಂಸದ ತೇಜಸ್ವಿ ಸೂರ್ಯ ಅವರ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳು ಇಲ್ಲಿವೆ ಓದಿ.

ಆಸ್ಪತ್ರೆಗಳಲ್ಲಿ ಬೆಡ್ ಲಾಕ್ ವಿಚಾರ, ಸಿಎಂ ಯಡಿಯೂರಪ್ಪ ಹೇಳಿದ್ದೇನು? ಆಸ್ಪತ್ರೆಗಳಲ್ಲಿ ಬೆಡ್ ಲಾಕ್ ವಿಚಾರ, ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಕರ್ನಾಟಕದಲ್ಲಿ ಸಿಎಂ ಸುದ್ದಿಗೋಷ್ಠಿ ಪ್ರಮುಖ ಅಂಶಗಳು:

* ಕರ್ನಾಟಕದಲ್ಲಿ ಕೊರೊನಾವೈರಸ್ ಪ್ರಕರಣಗಳ ಏರಿಕೆ ನಡುವೆ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿ ಇರಲಿದೆ

* ಪತ್ರಕರ್ತರನ್ನು ಮೊದಲ ಶ್ರೇಣಿ ಕಾರ್ಮಿಕರು ಎಂದು ಪರಿಗಣಿಸಿ ಲಸಿಕೆ ನೀಡಲಾಗುವುದು

* ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಮ್ಲಜನಕ ಸರಬರಾಜು ಹೊಣೆ

* ಸಚಿವ ಅಶ್ವತ್ಥ್ ನಾರಾಯಣ್ ಅವರಿಗೆ ಅಗತ್ಯ ಕೊವಿಡ್-19 ಔಷಧಿ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ

* ಆರ್ ಅಶೋಕ್ ಮತ್ತು ಬಸವರಾಜ್ ಬೊಮ್ಮಾಯಿ ಅವರಿಗೆ ಆಸ್ಪತ್ರೆ ಬೆಡ್ ವ್ಯವಸ್ಥೆ ಹೊಣೆಗಾರಿಕೆ

* ಜಿಂದಾಲ್ ಕಂಪನಿಯ ಮಹಾರಾಷ್ಟ್ರ ಪಾಲಿನ ಆಮ್ಲಜನಕ ಬಳಕೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ

* ರಾಜ್ಯದಲ್ಲಿ ಉತ್ಪಾದಿಸುವ ಆಮ್ಲಜನಕವನ್ನು ಇಲ್ಲಿಯೇ ಬಳಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದ್ದು, ಇಂದು ಇಲ್ಲ ನಾಳೆ ಈ ಬಗ್ಗೆ ಅಂತಿಮ ತೀರ್ಮಾನ ಹೊರಬೀಳಲಿದೆ.

* ಚಾಮರಾಜನಗರ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ ಬಗ್ಗೆ ಚರ್ಚೆ

* ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಕೊವಿಡ್-19 ಕೇರ್ ಸೆಂಟರ್ ತೆರೆಯುವುದಕ್ಕೆ ನಿರ್ಧಾರ

* ಹೆಚ್ಚಿನ ಸಂಖ್ಯೆಯಲ್ಲಿ ನರ್ಸಿಂಗ್ ಹಾಗೂ ವೈದ್ಯರ ನೇಮಕಾತಿ.

   Tejasvi Surya ಅವರ ಉದ್ದೇಶವೇನು | Oneindia Kannada
   English summary
   CM BS Yediyurappa Press Meet About Covid-19 Condition At Karnataka: Here Read Highlights.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X