ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಸಿಎಂ ಸಂತಾಪ
ಬೆಂಗಳೂರು, ಅ. 08: ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಲೋಕ್ ಜನಶಕ್ತಿ ಪಾರ್ಟಿ ಮುಖ್ಯಸ್ಥರಾಗಿ ಐದು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ದೇಶದ ಪ್ರಮುಖ ದಲಿತ ಮುಖಂಡರಾಗಿ, ದೀನದಲಿತರ ಶಕ್ತಿಯಾಗಿದ್ದರು. ಜನಪರ ಕಾರ್ಯಕ್ರಮಗಳ ಮೂಲಕ ಬಿಹಾರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ನಿಧನದಿಂದ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂತಾಪ: ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ, ಪಾಸ್ವಾನ್ ಸಾವು ತೀವ್ರ ನೋವುಂಟು ಮಾಡಿದೆ ಎಂದಿದ್ದಾರೆ. ಶೋಷಿತ ವರ್ಗದ ದನಿಯಾಗಿದ್ದ ಪಾಸ್ವಾನ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.












Click it and Unblock the Notifications