• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಘರ್ಷಣೆ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

|

ಬೆಂಗಳೂರು, ಆಗಸ್ಟ್ 12: ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಮತ್ತು ಹಿಂಸಾಚಾರದ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ. ಇಂತಹ ಪುಂಡಾಟಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ. ಜನರು ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

   KG halli , DJ halli ಪ್ರಕರಣದ ನಂತರ BS Yediyurappa ದೂರವಾಣಿ ಕರೆ | Oneindia Kannada

   ಹಾಗೆಯೇ ಎಲ್ಲ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ದುಷ್ಕರ್ಮಿಗಳನ್ನು ನಿಯಂತ್ರಿಸಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

   ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ: ಪೊಲೀಸರ ಗುಂಡಿಗೆ ಮೂವರು ಬಲಿಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ: ಪೊಲೀಸರ ಗುಂಡಿಗೆ ಮೂವರು ಬಲಿ

   ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶಗಳಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಗಲಭೆಯ ಹಿಂದಿನ ಕಾರಣ, ನಡೆದ ಘಟನೆಗಳು ಹಾಗೂ ಮುಂದಿನ ಕ್ರಮಗಳ ಬಗ್ಗೆ ಅವರು ಚರ್ಚಿಸಲಿದ್ದಾರೆ. ಮುಂದೆ ಓದಿ...

   ಗಲಭೆ ಖಂಡನೀಯ

   ಗಲಭೆ ಖಂಡನೀಯ

   ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

   ಪುಂಡಾಟಗಳನ್ನು ಸಹಿವುದಿಲ್ಲ

   ಪುಂಡಾಟಗಳನ್ನು ಸಹಿವುದಿಲ್ಲ

   ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

   ಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನ

   ಸಭೆಯಲ್ಲಿ ಮುಂದಿನ ಕ್ರಮದ ಚರ್ಚೆ

   ಸಭೆಯಲ್ಲಿ ಮುಂದಿನ ಕ್ರಮದ ಚರ್ಚೆ

   ಕೆ.ಜಿ. ಹಳ್ಳಿ & ಡಿ.ಜೆ. ಹಳ್ಳಿ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಯ ಸ್ವರೂಪ ನಿರ್ಧರಿಸಲಿದ್ದಾರೆ.

   ಕಾನೂನು ಕೈಗೆತ್ತಿಕೊಳ್ಳಬೇಡಿ

   ಕಾನೂನು ಕೈಗೆತ್ತಿಕೊಳ್ಳಬೇಡಿ

   ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಡೆದಿರುವ ಗಲಭೆಯನ್ನು ಖಂಡಿಸುತ್ತೇನೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಾರೆ. ಶಾಂತಿ ಕಾಪಾಡಿಕೊಳ್ಳಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮನವಿ ಮಾಡಿದ್ದಾರೆ.

   ಓಲೈಕೆ ರಾಜಕಾರಣದ ಪರಿಣಾಮ

   ಓಲೈಕೆ ರಾಜಕಾರಣದ ಪರಿಣಾಮ

   ಡಿ.ಜೆ ಹಳ್ಳಿ ಗಲಭೆ ಪ್ರಕರಣ, ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲವರಿಗೆ ತಾವು ಕಾನೂನನ್ನು ಮೀರಿದವರು ಎಂಬ ಭಾವನೆಯಿದೆ ಇದು ಏಳು ದಶಕಗಳ ಓಲೈಕೆ ರಾಜಕಾರಣದ ಪರಿಣಾಮ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.

   English summary
   DJ Halli and KG Halli Clash: CM BS Yediyurappa said he has instructed the officers to take strict action against culprits.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X