ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂಗೆ ಮನವಿ ರೂಪದಲ್ಲಿ ಎಚ್ಚರಿಕೆ ಕೊಟ್ಟ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಆ. 25: ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಾರತಮ್ಯ ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Recommended Video

DK Shivakumar, ಕನಕಪುರ ಬಂಡೆನು ಬಿಡಲಿಲ್ಲ ಕೊರೋನ! | Oneindia Kannada

ರಾಜ್ಯದ ಎಲ್ಲಾ ಶಾಸಕರುಗಳಿಗೆ ನೀಡಲಾಗಿದ್ದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ಔದಾರ್ಯ ಪ್ರದರ್ಶಿಸುವಂತೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ವಿನಂತಿಸಿದ್ದಾರೆ.

CM B.S. Yediyurappa should not be discriminate in releasing grants to MLAs: Former CM HDK

ಅಣ್ಣಾಮಲೈ ಬಿಜೆಪಿ ಸೇರುತ್ತಿರುವುದು ನನಗೆ ಗೊತ್ತಿಲ್ಲ: ಬಿಎಸ್‌ವೈಅಣ್ಣಾಮಲೈ ಬಿಜೆಪಿ ಸೇರುತ್ತಿರುವುದು ನನಗೆ ಗೊತ್ತಿಲ್ಲ: ಬಿಎಸ್‌ವೈ

ಕೊರೊನಾ ಸಂಕಷ್ಟ ಸಮಯದಲ್ಲಿ ಹಾಗೂ ಲಾಕ್‌ಡೌನ್ ನಂತರ ಜನಜೀವನ ತತ್ತರಗೊಂಡಿದೆ. ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಮೂಲಕ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದಿದ್ದಾರೆ. ಆರ್ಥಿಕ ಸಂಪನ್ಮೂಲ ಸರಿದೂಗಿಸಿಕೊಂಡು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಎಚ್ಡಿಕೆ ಹೇಳಿದ್ದಾರೆ.

English summary
Chief Minister B.S. Yediyurappa should not be discriminate in releasing grants to MLAs: Former CM HDK
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X