ಮಹಿಳೆಯನ್ನು ನಿಂದಿಸಿದರೆ ಕ್ಷಮಿಸಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿ ವಿರುದ್ಧ ಸಿಎಂ ಗರಂ
ಬೆಂಗಳೂರು, ಮೇ 21: ಮನವಿ ನೀಡಲು ಬಂದಿದ್ದ ಮಹಿಳೆಗೆ ಅಸಭ್ಯ ಶಬ್ದಗಳಿಂದ ನಿಂದಿಸಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ.
Recommended Video
ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ''ಸಚಿವರು ಮಾತನಾಡಿರುವುದು ಸರಿಯಿಲ್ಲ. ಅವರಿಗೆ ನಾನು ಎಚ್ಚರಿಕೆ ನೀಡಲಿದ್ದೇನೆ. ಮಹಿಳೆ ಬಗ್ಗೆ ಅಶ್ಲೀಲವಾಗಿ ಮಾತನಾಡುವುದನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಒಬ್ಬ ಸಚಿವರಾಗಿ ಈ ರೀತಿ ವರ್ತನೆ ಶೋಭೆ ತರುವಂತದಲ್ಲ. ಈ ಮಹಿಳೆಯನ್ನು ಕರೆದು ನಾನು ಮಾತನಾಡುತ್ತೇನೆ. ಇನ್ಮುಂದೆ ಈ ರೀತಿ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇನೆ'' ಎಂದು ಸಿಎಂ ಹೇಳಿದ್ದಾರೆ.
ಇನ್ನು ಮಾಧುಸ್ವಾಮಿ ರಾಜೀನಾಮೆ ಪಡೆಯುತ್ತೀರಾ ಎಂಬ ಪ್ರಶ್ನೆಗೆ ಮೌನದಿಂದ ಉತ್ತರ ನೀಡದೇ ಸಿಎಂ ಯಡಿಯೂರಪ್ಪ ಮುಂದೆ ಸಾಗಿದರು. ವಿ ಸೋಮಣ್ಣ ಮಾತನಾಡಿ 'ತೀಕ್ಷ್ಣವಾಗಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ಕೊಟ್ಟ ಮೇಲೆ ನಾವು ಮಾತನಾಡೋದು ಸರಿಯಲ್ಲ' ಎಂದರು. ಮುಂದೆ ಓದಿ...

ಕೋಲಾರದಲ್ಲಿ ನಡೆದಿದ್ದ ಘಟನೆ
ನಿನ್ನೆ ಕೋಲಾರ ತಾಲೊಕಿನ ಎಸ್ ಅಗ್ರಹಾರ ಕೆರೆ ವೀಕ್ಷಣೆಗೆ ಬಂದಿದ್ದ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಬಳಿ ರಾಜ್ಯ ರೈತ ಸಂಘದ ಹಾಗು ಹಸಿರು ಸೇನೆಯ ಮಹಿಳಾ ಸದಸ್ಯರು ಕೆರೆ ಒತ್ತುವರಿ ಸಂಬಂಧ ಮನವಿ ಸಲ್ಲಿಸಲು ಬಂದಿದ್ದರು. ಈ ವೇಳೆ ನಳಿನಿ ಎಂಬ ಮಹಿಳೆಗೆ ಸಚಿವರು ಅಸಭ್ಯವಾಗಿ ನಿಂದಿಸಿದರು.

ಮಹಿಳೆಗೆ 'ರಾಸ್ಕಲ್' ಎಂದಿದ್ದ ಮಾಧುಸ್ವಾಮಿ
'ಮನವಿ ಮಾಡಿಕೋ, ಕಮಾಂಡ್ ಮಾಡಬೇಡ. ನಾನು ಬಹಳ ಕೆಟ್ಟ ಮನುಷ್ಯ ಇದ್ದೀನಿ, ಬಾಯ್ ಮುಚ್ಚು ರಾಸ್ಕರ್'' ಎಂದು ಗದರಿದ್ದರು. ಈ ವೇಳೆ ಮಹಿಳೆ ಮತ್ತು ಸಚಿವರ ನಡುವೆ ಮಾತಿನ ವಾಗ್ವಾದ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯನ್ನು ದೂರ ಕಳುಹಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಖಂಡನೆ
ರೈತ ಮಹಿಳೆ ಬಳಿ ಜೆಸಿ ಮಾಧುಸ್ವಾಮಿ ಅವರು ಮಾತನಾಡಿದ ರೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಯಿತು. ಫೇಸ್‌ಬುಕ್, ಟ್ವಿಟ್ಟರ್‌ನಲ್ಲಿ ಈ ವಿಡಿಯೋ ವೈರಲ್ ಆಯಿತು. ಸಚಿವರು ಈ ಕೂಡಲೇ ಮಹಿಳೆಯ ಕ್ಷಮೆಯಾಚಿಸಬೇಕು ಅಥವಾ ರಾಜೀನಾಮೆ ಕೊಡಬೇಕು ಎಂಬ ಒತ್ತಾಯಿಸಿದರು.

ಸಂಪುಟದಿಂದ ಕೈ ಬಿಡಲು ಸಿದ್ದರಾಮಯ್ಯ ಒತ್ತಾಯ
ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಈ ಘಟನೆಯನ್ನು ಖಂಡಿಸಿದರು. 'ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಯಡಿಯೂರಪ್ಪ ಅವರು ತಕ್ಷಣ ಸಚಿವರು, ಆ ರೈತ ಮಹಿಳೆಯ ಕ್ಷಮೆ ಯಾಚಿಸುವಂತೆ ಮಾಡಿ, ಅವರನ್ನು ಸಂಪುಟದಿಂದ ಕೈ ಬಿಟ್ಟು ಸರ್ಕಾರದ ಮಾನ ಉಳಿಸಬೇಕು'' ಎಂದು ಟ್ವೀಟ್ ಮಾಡಿದ್ದರು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications