ಶಾಸಕ ರೇಣುಕಾಚಾರ್ಯಗೆ ಸಿಎಂ ಬಿಎಸ್ವೈ ಹಿಗ್ಗಾಮುಗ್ಗಾ ತರಾಟೆ
ಬೆಂಗಳೂರು, ಏಪ್ರಿಲ್ 26: ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಶಾಸಕ ರೇಣುಕಾಚಾರ್ಯ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ವಿಡಿಯೋ ನೋಡಿ ಇಂದು ಶಾಸಕ ರೇಣುಕಾಚಾರ್ಯಗೆ ಕರೆ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಭೆಯಲ್ಲಿ ಸಾಮಾಜಿಕ ಕಾಯ್ದುಕೊಳ್ಳದೇ ಏನು ಮಾಡುತ್ತಿದ್ದೀಯ ನೀನು? ಅಂತ ಪ್ರಶ್ನೆ ಮಾಡಿದ್ದಾರೆ.

ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿ ಇಡೀ ದೇಶವೇ ಸಾಮಾಜಿಕ ಅಂತರದ ಬಗ್ಗೆ ಮಾತನಾಡುತ್ತಿದ್ದರೆ, ನೀನು ಮಾತ್ರ ಅದನ್ನು ಕಾಪಾಡಿಕೊಳ್ಳದೇ ಸಭೆ ಮಾಡಿದ್ದೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀನು ಒಬ್ಬ ಶಾಸಕನಾಗಿ ಜವಾಬ್ದಾರಿ ಬೇಡವೇ ಅಂತ ಪ್ರಶ್ನೆ ಮಾಡಿದ್ದಲ್ಲದೇ, ಇದೇ ಕೊನೆಯ ಎಚ್ಚರಿಕೆ ಇನ್ನೊಮ್ಮೆ ಈ ರೀತಿಯ ಘಟನೆ ಮರುಕಳಿಸಿದರೆ ಸಹಿಸುವುದಿಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications