ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊವಿಡ್-19 ನಿಯಂತ್ರಣಕ್ಕೆ ಬಿಬಿಎಂಪಿ ಜೊತೆಗೆ ಸಿಎಂ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಜೂನ್.22: ಸಿಲಿಕಾನ್ ಸಿಟಿಯಲ್ಲೂ ನೊವೆಲ್ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನರು ನಿತ್ಯ ಭಯದಲ್ಲೇ ಬದುಕುವಂತಾ ಸ್ಥಿತಿ ನಿರ್ಮಾಣವಾಗಿದೆ.

ಭಾನುವಾರ ಒಂದೇ ದಿನ ರಾಜಧಾನಿಯೊಂದರಲ್ಲೇ ಬರೋಬ್ಬರಿ 196 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ.

ಕರ್ನಾಟಕ; ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಿವೆ 518 ಖಾಸಗಿ ಆಸ್ಪತ್ರೆಕರ್ನಾಟಕ; ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಿವೆ 518 ಖಾಸಗಿ ಆಸ್ಪತ್ರೆ

ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 453 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 9150ಕ್ಕೆ ಏರಿಕೆಯಾಗಿದೆ. ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಕೊರೊನಾವೈರಸ್ ಅಂಕಿ-ಅಂಶಗಳನ್ನು ಹೇಳಲಾಗಿದೆ.

Cm Meets With Bbmp Officials For Discussion On Controlling Coronavirus

ಸಿಲಿಕಾನ್ ಸಿಟಿಯಲ್ಲಿನ ಸೋಂಕಿತರಲ್ಲಿ ಆತಂಕ:

ರಾಜ್ಯದಲ್ಲಿ ನೊವೆಲ್ ಕೊರೊನಾವೈರಸ್ ನಿಂದಾಗಿ ಐವರು ಪ್ರಾಣ ಬಿಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆಯು 137ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲಿ ಕೊರೊನಾವೈರಸ್ ಅಟ್ಟಹಾಸಕ್ಕೆ ಸಿಕ್ಕು ನಲುಗಿದೆ. ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ ಬರೋಬ್ಬರಿ 196 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಪ್ರತಿನಿತ್ಯ ಕೊರೊನಾವೈರಸ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲೇ ಮೂವರು ಕೊರೊನಾವೈರಸ್ ಮಹಾಮಾರಿಗೆ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 100ಕ್ಕಿಂತ ಹೆಚ್ಚಾಗಿ ಕಂಡು ಬರುತ್ತಿವೆ. ಈ ಹಿನ್ನೆಲೆ ಬಿಬಿಎಂಪಿ ಮೇಯರ್, ಅಧಿಕಾರಿಗಳು ಮತ್ತು ವೈದ್ಯಕೀಯ ಅಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್,ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿರುವ ಸಭೆಯಲ್ಲಿ ಮಹಾಮಾರಿ ನಿಯಂತ್ರಣದ ಬಗ್ಗೆ ಚರ್ಚಿಸಲಾಗುತ್ತದೆೆ.

English summary
CM meets with BBMP officials for discussion on controlling coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X