DK Shivakumar: ಅಣ್ಣಮ್ಮನಿಗೆ ಚೀಲದ ತುಂಬಾ ಚಿಲ್ಲರೆ ದಕ್ಷಿಣೆ ಹಾಕಿದ ಸಿಎಂ ಡಿಕೆಶಿ: ದೇವಸ್ಥಾನದಲ್ಲಿ ಶುಭ ಸೂಚನೆ

ಬೆಂಗಳೂರು: ಅಪಾರ ದೈವ ಭಕ್ತರಾಗಿರುವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪೂಜಾ ಕಾರ್ಯಕ್ರಮಗಳಲ್ಲಿ ಡಿಕೆಶಿ ಅವರು ಹೆಚ್ಚು ಬ್ಯುಸಿ ಆಗುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೆಜೆಸ್ಟಿಕ್‌ನಲ್ಲಿರುವ ಬೆಂಗಳೂರಿನ ನಗರದೇವತೆ ಅಣ್ಣಮ್ಮ ದೇವಿಗೆ ಜೂನ್ 5ರ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಣ್ಣ ಚೀಲವೊಂದರಲ್ಲಿ ದಕ್ಷಿಣೆ ತಂದು, ದೇವರಿಗೆ ಅರ್ಪಿಸಿದರು. ಜೊತೆಗೆ 500 ರೂ. ನೋಟನ್ನೂ ಇಟ್ಟರು, ವಿಶೇಷ ಪೂಜೆ ಸಲ್ಲಿಸಿದರು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮುಖ್ಯಮಂತ್ರಿಯಾದರೆ, ಅಣ್ಣಮ್ಮದೇವಿ ಸನ್ನಿಧಾನಕ್ಕೆ ಬಂದು ಹರಕೆ ತೀರಿಸುವುದಾಗಿ ಡಿ.ಕೆ ಶಿವಕುಮಾರ್ ಅವರು ಹರಕೆ ಹೊತ್ತುಕೊಂಡಿದ್ದರು. ಅದರಂತೆ ಇಂದು ಡಿ.ಕೆ ಶಿವಕುಮಾರ್ ಅವರು ಹರಕೆ ತೀರಿಸಿದ್ದಾರೆ. ಉಪ್ಪು, ಮೊಸರು ಹಾಕಿ, ಸುಃಖ, ಶಾಂತಿ, ನೆಮ್ಮದಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ತಾಯಿ ಅಣ್ಣಮ್ಮನಿಗೆ ನಮಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಇಲ್ಲಿನ ಬಿಸಿಲು ಮಾರಮ್ಮನಿಗೂ ಉಪ್ಪು, ಮೊಸರು ಹಾಕಿ ಡಿ.ಕೆ ಶಿವಕುಮಾರ್ ಅವರು ನಮಿಸಿದ್ದಾರೆ.

DK Shivakumar

DK Shivakumar: ದೇವಿಯಿಂದ ಶುಭ ಸೂಚನೆ

ಇನ್ನೂ ಡಿ.ಕೆ ಶಿವಕುಮಾರ್ ಅವರು ಹರಕೆ ಕೊಡುವ ವೇಳೆ ಅಣ್ಣಮ್ಮದೇವಿ ದೇವಸ್ಥಾನದಲ್ಲಿ ದೇವಿಯ ಬಲಭಾಗದ ಹೂವು ಬಿದ್ದಿದ್ದೆ. ಸಿಎಂ ಅವರು ಪೂಜೆ ಸಲ್ಲಿಸುವ ವೇಳೆ ಬಲಬದಿಯಿಂದ ಮಲ್ಲಿಗೆ ಹೂವು ಬಿದ್ದಿದ್ದೆ ಎಂದು ಹೇಳಲಾಗಿದೆ. ಈ ಹೂವನ್ನು ಅಲ್ಲಿಯ ಅರ್ಚಕರು ಸಿಎಂ ನೀಡಿದ್ದಾರೆ. ಇದು ಇಷ್ಟಾರ್ಥ ಈಡೇರುವ ನಂಬಿಕೆಯೆ ಎಂದು ಅರ್ಚಕರು ಹೇಳಿದ್ದಾರೆ.

ಪೂಜೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ ಎಂದು ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಪ್ರಶ್ನೆಗೆ ಉತ್ತರಿಸಿರುವ ಅವರು, ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ. ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, "ಏನೇ ಇದ್ದರು ಶಿಸ್ತು ಬಹಳ ಮುಖ್ಯ" ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ದಿನೇಶ್ ಗುಂಡೂರಾವ್, ಶ್ರೀನಿವಾಸ್ ಮಾನೆ ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+