ಬೆಂಗಳೂರಿನಲ್ಲಿ ಈ ಸಮಸ್ಯೆ ಇಲ್ಲವೇ ಇಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್: ಬಿಜೆಪಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚಾಗಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಮುಂದುವರಿದಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆಯಾದರೂ ಇನ್ನುಳಿದ ಪ್ರದೇಶಗಳಲ್ಲಿ ರಸ್ತೆಗುಂಡಿ ಯಥಾಸ್ಥಿತಿ ಮುಂದುವರಿದಿದೆ. ಆದರೆ ರಸ್ತೆಗುಂಡಿ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ದೂರಿದೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರೇ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಲಿ. ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸತ್ತವರ ಸಂಖ್ಯೆಯನ್ನೇ ಮುಚ್ಚಿಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಹದಗೆಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆ ಗುಂಡಿಗಳು ಅಮಾಯಕ ಸವಾರರ ಜೀವ ಬಲಿ ಪಡೆಯುತ್ತಿರುವುದು ಇಡೀ ಜಗತ್ತಿಗೆ ತಿಳಿದಿದೆ. ಆದರೆ, ತಾವು ಸದನದಲ್ಲಿ "ಇಂತಹ ಪ್ರಕರಣಗಳು ಸಂಭವಿಸಿರುವುದು ಬೆಂಗಳೂರು ನಗರ ಪಾಲಿಕೆಗಳ ಗಮನಕ್ಕೆ ಬಂದಿರುವುದಿಲ್ಲ" ಎಂದು ಸದನಕ್ಕೆ ಸುಳ್ಳು ಮಾಹಿತಿ ನೀಡಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಬಿಜೆಪಿ ಟೀಕಿಸಿದೆ.

ಅಲ್ಲದೇ ಕುರ್ಚಿ ಕಚ್ಚಾಟದಲ್ಲಿ ಮುಳುಗಿರುವ ಡಿಕೆ ಶಿವಕುಮಾರ್ ಅವರೇ, ಬೆಂಗಳೂರಿನ ಯಮಸ್ವರೂಪಿ ಗುಂಡಿಗಳು ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಹಲವು ಜನರನ್ನು ಬಲಿಪಡಿದಿವೆ. ಆದರೆ, 2 ವರ್ಷಗಳಲ್ಲಿ ಅಂತಹ ಘಟನೆಗಳೇ ನಡೆದಿಲ್ಲವೆಂದು ಸದನದಲ್ಲಿ ಉತ್ತರ ನೀಡಿರುವ ತಾವು.
ರಸ್ತೆ ಗುಂಡಿಗಳಿಂದಾಗಿ ತಂದೆ ಕಳೆದುಕೊಂಡ ಮಕ್ಕಳ ಗೋಳು ಕೇಳಿದ್ದೀರಾ?, ಮಗ/ಮಗಳ ಕಳೆದುಕೊಂಡ ತಾಯಿಯ ದುಃಖ ಆಲಿಸಿದ್ದೀರಾ ಎಂದು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ. ಅಲ್ಲದೇ ತಮ್ಮ ಅಸಮರ್ಥ ಆಡಳಿತದಿಂದ ಆಗಿರುವ ಗುಂಡಿ ಗಂಡಾಂತರವನ್ನು "ಸೋಷಿಯಲ್ ಮೀಡಿಯಾ ಸೃಷ್ಟಿ" ಎಂದು ಹಾದಿ ತಪ್ಪಿಸುವುದು ಸರಿಯೇ ?
ಬೆಂಗಳೂರಿನ ರಸ್ತೆಗುಂಡಿಗಳು ಮೃತ್ಯುಕೂಪಗಳಾಗಿ ಸವಾರರ ಪ್ರಾಣ ತೆಗೆಯುತ್ತಿವೆ. ಕಾಂಗ್ರೆಸ್ ಕಾಲದಲ್ಲಿ ಬೆಂಗಳೂರು ಗುಂಡಿಯೂರಾಗಿ ಮಾರ್ಪಟ್ಟಿದ್ದರೂ ತಾವು ಗುಂಡಿಗಳಿಂದ ಯಾವ ಸಾವು ಸಂಭವಿಸಿಲ್ಲವೆಂದು ಸದನಕ್ಕೆ ಸುಳ್ಳು ಹೇಳಿರುವುದು ನಿಮ್ಮ ಕೊಳಕು ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಇದು ಪ್ರಜಾಪ್ರಭುತ್ವ ಮೌಲ್ಯಕ್ಕೆ ಎಸಗಿದ ಘೋರ ಅಪಚಾರ ಎಂದು ಟೀಕೆ ಮಾಡಿದೆ.
ಬೆಂಗಳೂರಿನಲ್ಲಿ ರಸ್ತೆಗುಂಡಿ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ರಸ್ತೆಗುಂಡಿ ಇಲ್ಲ, ಯಾವ ಸಮಸ್ಯೆಯೂ ಇಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಈಚೆಗೆ ಹೇಳಿದ್ದರು. ಬೆಂಗಳೂರಿನಲ್ಲಿ ಸಮಸ್ಯೆ ಆಗುತ್ತಿದೆ ಎನ್ನುವುದು ಕೇವಲ ಸೋಷಿಯಲ್ ಮೀಡಿಯಾ ಚರ್ಚೆ ಎಂದು ಡಿ.ಕೆ ಶಿವಕುಮಾರ್ ಅವರು ಈಚೆಗೆ ಮಾಧ್ಯಮಗಳಿಗೆ ಹೇಳಿದ್ದರು. ಬೆಂಗಳೂರಿನಲ್ಲಿ ಯಾವುದೇ ಹೊಂಡಗುಂಡಿ ಬಿದ್ದ ರಸ್ತೆಗಳು ಇಲ್ಲ, ಯಾವುದೇ ಸಮಸ್ಯೆಯಿಲ್ಲ. ಇದೆಲ್ಲ ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಸೃಷ್ಟಿ ಆಗಿದೆ ಅಷ್ಟೇ ಎಂದು ಹೇಳಿದ್ದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Bengaluru: ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲು ಮುಂದಾದ ಜಿಬಿಎ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications